AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಸಂಭ್ರಮದಲ್ಲಿದ್ದ ನಾಗಮಂಗಲದ ಕುಟುಂಬದಲ್ಲಿ ಸೂತಕ: ಕಮರಿಹೋಯ್ತು ಇಬ್ಬರು ಯುವತಿಯರ ಕನಸು

ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಲಾರಿ ಡಿಕ್ಕಿ ಹೊಡೆದು ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರಲ್ಲಿ ಮದುವೆ ನಿಶ್ಚಯವಾಗಿದ್ದ ಸಿಂಧುಶ್ರೀ ಹಾಗೂ ಆಕೆಯ ಅತ್ತೆ ಮಗಳು ವಿದ್ಯಾ ಸೇರಿದ್ದಾರೆ. ಆಮಂತ್ರಣ ಪತ್ರಿಕೆ ಹಂಚಲು ಹೋಗುತ್ತಿದ್ದಾಗ ದುರಂತ ಸಂಭವಿಸಿದೆ. ಲಾರಿ ಚಾಲಕ ಪರಾರಿಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದು ಕುಟುಂಬದಲ್ಲಿ ಶೋಕದ ವಾತಾವರಣ ಸೃಷ್ಟಿಸಿದೆ.

ಮದುವೆ ಸಂಭ್ರಮದಲ್ಲಿದ್ದ ನಾಗಮಂಗಲದ ಕುಟುಂಬದಲ್ಲಿ ಸೂತಕ: ಕಮರಿಹೋಯ್ತು ಇಬ್ಬರು ಯುವತಿಯರ ಕನಸು
ಅಪಘಾತದಲ್ಲಿ ವಧು ಸಾವು
ಮಂಜುನಾಥ ಎಚ್​. ವಿ.
| Edited By: |

Updated on: Nov 11, 2026 | 10:06 PM

Share

ಬೆಂಗಳೂರು, ನ.11: ರಾಜಧಾನಿ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಹರಿದು ಇಬ್ಬರು ಯುವತಿಯರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮಂಡ್ಯ ಮೂಲದ ಸಿಂಧುಶ್ರೀ ಹಾಗೂ ಅವರ ಅತ್ತೆಯ ಮಗಳು ವಿದ್ಯಾ ಮೃತಪಟ್ಟಿದ್ದಾರೆ. ದುರಂತವೆಂದರೆ, ಮೃತ ಸಿಂಧುಶ್ರೀ ಅವರಿಗೆ ಇನ್ನೇನು ನಾಲ್ಕೈದು ದಿನಗಳಲ್ಲಿ (ಬರುವ ಸೋಮವಾರ) ವಿವಾಹ ನಡೆಯಬೇಕಿತ್ತು. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಇದೀಗ ಸೂತಕದ ಛಾಯೆ ಆವರಿಸಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಐತನಹಳ್ಳಿ ಗ್ರಾಮದ ಸಿಂಧುಶ್ರೀಗೆ ನವೆಂಬರ್ 16 (ಸೋಮವಾರ) ಮದುವೆ ಹಾಗೂ ಭಾನುವಾರ ರಿಸೆಪ್ಷನ್ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಬಂಧುಗಳಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಲು ಸಿಂಧುಶ್ರೀ ತಮ್ಮ ಅತ್ತೆ ಮಗಳು, ಕಾಲೇಜು ವಿದ್ಯಾರ್ಥಿನಿ ವಿದ್ಯಾ ಜೊತೆ ಸ್ಕೂಟಿಯಲ್ಲಿ ಹೊರಟಿದ್ದರು. ಮಧ್ಯಾಹ್ನ ಸುಮಾರು 3:30ರ ವೇಳೆಗೆ ಮೈಸೂರು ರಸ್ತೆಯ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ಬಳಿ ಚಲಿಸುತ್ತಿದ್ದಾಗ, ಹಿಂಬದಿಯಿಂದ ಅತಿ ವೇಗವಾಗಿ ಬಂದ ಟ್ರಕ್ ಇವರ ಸ್ಕೂಟಿಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದಿದ್ದು, ಕಣ್ಣಿಮೆಚ್ಚಾಕುವುದರೊಳಗೆ ಟ್ರಕ್‌ನ ಬೃಹತ್ ಚಕ್ರ ಇಬ್ಬರ ತಲೆಯ ಮೇಲೆಯೇ ಹರಿದಿದೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತ ಎಸಗುತ್ತಿದ್ದಂತೆಯೇ ಟ್ರಕ್ ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಬ್ಯಾಟರಾಯನಪುರ ಸಂಚಾರಿ ಠಾಣೆ ಪೊಲೀಸರು, ಟ್ರಕ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: “ಇನ್ನಷ್ಟು ಹೊಡೆದ್ರೆ ಚೆನ್ನಾಗಿ ಓದ್ತಾನೆ”: ಮದರಸಾ ಶಿಕ್ಷಕ ಅಬ್ಬಾಸ್ ಉಡಾಫೆ ಮಾತು; ರಾಯಚೂರಿನಲ್ಲಿ ಹೆಡ್ ಮಾಸ್ಟರ್ ಸೇರಿ 6 ಜನರ ವಿರುದ್ಧ FIR

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ತಲೆಮರೆಸಿಕೊಂಡಿರುವ ಲಾರಿ ಚಾಲಕನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಕಾಲೇಜು ಶಿಕ್ಷಣ ಪಡೆಯುತ್ತಿದ್ದ ವಿದ್ಯಾ ಹಾಗೂ ವಧುವಾಗಬೇಕಿದ್ದ ಸಿಂಧುಶ್ರೀ ಅವರ ದಾರುಣ ಸಾವು ಕುಟುಂಬಸ್ಥರು ಮತ್ತು ಸಂಬಂಧಿಕರಲ್ಲಿ ಕಣ್ಣೀರಿನ ಕಡಲನ್ನೇ ಹರಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಎಚ್​. ವಿ.
ಮಂಜುನಾಥ ಎಚ್​. ವಿ.

ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.

Read More