ಬೆಂಗಳೂರು- ಮೈಸೂರು ಮಾರ್ಗದ ರೈಲುಗಳು ನಾಯಂಡಹಳ್ಳಿಯಲ್ಲಿ ನಿಲುಗಡೆಗೆ ಗ್ರೀನ್​ ಸಿಗ್ನಲ್​, ಬಹುದಿನಗಳ ಬೇಡಿಕೆ ಈಡೇರಿಕೆ

ಪ್ರಯಾಣಿಕರ ಬಹುದಿನಗಳ ಬೇಡಿಕೆಯನ್ನು ರೈಲ್ವೇ ಇಲಾಖೆ ಈಡೇರಿಸಿದ್ದು, ಇನ್ಮುಂದೆ ನಾಲ್ಕು ರೈಲುಗಳು ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ನಿಲ್ಲಿಸಲಿವೆ. ಆ ಟ್ರೈನ್​ಗಳು ಯಾವುವು ಎನ್ನುವ ಮಾಹಿತಿ ಇಲ್ಲಿದೆ ನೋಡಿ.

ಬೆಂಗಳೂರು- ಮೈಸೂರು ಮಾರ್ಗದ ರೈಲುಗಳು ನಾಯಂಡಹಳ್ಳಿಯಲ್ಲಿ ನಿಲುಗಡೆಗೆ ಗ್ರೀನ್​ ಸಿಗ್ನಲ್​, ಬಹುದಿನಗಳ ಬೇಡಿಕೆ ಈಡೇರಿಕೆ
ರೈಲು
Follow us
ರಮೇಶ್ ಬಿ. ಜವಳಗೇರಾ
|

Updated on:Jun 22, 2023 | 7:22 AM

ಬೆಂಗಳೂರು: ಮೈಸೂರನಿಂದ(Mysuru) ಬರುವ ಪ್ರತಿನಿತ್ಯ ಸೂಪರ್‌ ಫಾಸ್ಟ್‌ ಹಾಗೂ ಎಕ್ಸ್‌ಪ್ರೆಸ್‌ ರೈಲುಗಳು (Trains) ಬೆಂಗಳೂರಿನ(Bengaluru) ನಾಯಂಡಹಳ್ಳಿಯಲ್ಲಿ(Nayandahalli) ನಿಲುಗಡೆಯಾಗಲಿವೆ. ಬೆಂಗಳೂರಿನಿಂದ ತೆರಳುವ ಹಾಗೂ ನಗರಕ್ಕೆ ಆಗಮಿಸುವ ನಾಲ್ಕು ರೈಲುಗಳು ನಾಯಂಡಹಳ್ಳಿಯಲ್ಲಿ ನಿಲುಗಡೆಯಾಗಲಿದ್ದು, ಪ್ರಯಾಣಿಕರು ಇದರ ಉಪಯೋಗ ಪಡೆದುಕೊಳ್ಳಬಹುದಾಗಿದೆ. ಇದರೊಂದಿಗೆ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯನ್ನು ರೈಲ್ವೆ ಇಲಾಖೆ ಈಡೇರಿಸಿದೆ. ಈ ಸೇವೆ ಸೆಪ್ಟೆಂಬರ್ 20 ರವರೆಗೆ ಪ್ರಾಯೋಗಿಕವಾಗಿ ನಿಲುಗಡೆ ಆಗಲಿವೆ. ಮುಖ್ಯವಾಗಿ ನಾಯಂಡಹಳ್ಳಿಯಲ್ಲಿ ರೈಲುಗಳು ಕೇವಲ ಒಂದು ನಿಮಿಷ ಮಾತ್ರ ನಿಲ್ಲಿಸಲಿವೆ. ಹೀಗಾಗಿ ಪ್ರಯಾಣಿಕರು ಇದರ ಬಗ್ಗೆ ಎಚ್ಚರಿಕೆ ವಹಿಸಬೇಕು. ಹಾಗಾದ್ರೆ ಯಾವೆಲ್ಲ ರೈಲುಗಳು ನಾಯಂಡಹಳ್ಳಿಯಲ್ಲಿ ಸ್ಟಾಪ್ ಕೊಡಲಿವೆ ಎನ್ನುವ ವಿವರ ಈ ಕೆಳಗಿನಂತಿದೆ ನೀಡಿ.

ಇದನ್ನೂ ಓದಿ: ಕರ್ನಾಟಕದಲ್ಲಿ ಕಾವೇರಿ 2.0 ಜಾರಿ, ಆಸ್ತಿ ನೋಂದಾಣಿ ಸರಳ: ಇದು ಹೇಗೆ ಕಾರ್ಯನಿರ್ವಹಿಸುತ್ತೆ? ಇದರ ಅನುಕೂಲಗಳೇನು?

ರೈಲು ಸಂಖ್ಯೆ 06525 ಬೆಂಗಳೂರು – ಮೈಸೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ಸಂಜೆ 5.04 ನಿಮಿಷಕ್ಕೆ ನಾಯಂಡನಹಳ್ಳಿಗೆ ಆಗಮಿಸಿ, ಒಂದು ನಿಮಿಷ ನಿಲುಗಡೆ ನಂತರ 5.05 ನಿಮಿಷಕ್ಕೆ ಅಲ್ಲಿಂದ ತೆರಳುತ್ತದೆ. ಮೈಸೂರು-ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ರಾತ್ರಿ 10.27 ಕ್ಕೆ ನಾಯಂಡಹಳ್ಳಿಗೆ ಆಗಮಿಸಿ, ಒಂದು ನಿಮಿಷದ ನಿಲುಗಡೆ ನಂತರ 10.28 ಕ್ಕೆ ಅಲ್ಲಿಂದ ತೆರಳಲಿದೆ.

ಮೈಸೂರು – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ಸಂಖ್ಯೆ 06269 ನಾಯಂಡಹಳ್ಳಿಗೆ ತಡರಾತ್ರಿ 12.17 ಕ್ಕೆ ಆಗಮಿಸಿ ಅಲ್ಲಿಂದ 12.18 ನಿಮಿಷಕ್ಕೆ ಹೊರಡಲಿದೆ. ರೈಲು ಸಂಖ್ಯೆ 06270 ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್‌ ರೈಲು, ತಡರಾತ್ರಿ 12.27ಕ್ಕೆ ನಾಯಂಡಹಳ್ಳಿಗೆ ಆಗಮಿಸಲಿದ್ದು, ಒಂದು ನಿಮಿಷದ ನಿಲುಗಡೆ ನಂತರ 12.28 ಕ್ಕೆ ಅಲ್ಲಿಂದ ಹೊರಡಲಿದೆ.

ಈ ಮೇಲೆ ತಿಳಿಸಲಾದ ರೈಲುಗಳು ನಾಯಂಡಹಳ್ಳಿಯಲ್ಲಿ ಒಂದು ನಿಮಿಷ ಕಾಲ ನಿಲ್ಲಿಸಲಿದ್ದು, ಇದೇ ಸೆಪ್ಟೆಂಬರ್ 20ರ ವರೆಗೆ ಪ್ರಾಯೋಗಿಕವಾಗಿ ರೈಲು ನಿಲುಗಡೆಯಾಗಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಇದರಿಂದ ಬೆಂಗಳೂರಿನ ಪಶ್ಚಿಮ ಉಪನಗರಗಳಲ್ಲಿ ವಾಸಿಸುವ ಜನರಿಗೆ ಅನುಕೂಲವಾಗಲಿದೆ.

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:20 am, Thu, 22 June 23

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ