AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ನಿತಿನ್ ಗಡ್ಕರಿಯಿಂದ ಇಂದು ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇ ಪರಿಶೀಲನೆ

Bengaluru-Mysuru Expressway: 4,473 ಕೋಟಿ ರೂ. ವೆಚ್ಚದಲ್ಲಿ 118 ಕಿ.ಮೀ. ಉದ್ದದ ಈ ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇಯನ್ನು ನಿರ್ಮಿಸಲಾಗುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಇಂದು ಈ ಎಕ್ಸ್​ಪ್ರೆಸ್​ ವೇಯ ವೈಮಾನಿಕ ತಪಾಸಣೆ ನಡೆಸಲಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿಯಿಂದ ಇಂದು ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇ ಪರಿಶೀಲನೆ
ನಿತಿನ್ ಗಡ್ಕರಿ
TV9 Web
| Edited By: |

Updated on: Jan 05, 2023 | 6:27 AM

Share

ಬೆಂಗಳೂರು: ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇಯನ್ನು ಈ ಬಾರಿಯ ವಿಧಾನಸಭಾ ಚುನಾವಣೆಗೂ ಮೊದಲು ಉದ್ಘಾಟನೆ ಮಾಡಲು ಸಿದ್ಧತೆಗಳು ನಡೆದಿವೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ (Nitin Gadkari) ಇಂದು (ಜನವರಿ 5) ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru-Mysuru Expressway) ಪರಿಶೀಲನೆ ನಡೆಸಲಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಎಕ್ಸ್​ಪ್ರೆಸ್​ ವೇಯ ವೈಮಾನಿಕ ತಪಾಸಣೆ ನಡೆಸಲಿದ್ದಾರೆ.

ಈಗಾಗಲೇ ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇಯ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಕೆಲವೆಡೆ ಇನ್ನೂ ಕೆಲಸಗಳು ಬಾಕಿ ಉಳಿದಿವೆ. ಕೆಂಗೇರಿಯಿಂದ ಮೈಸೂರಿಗೆ ಎಕ್ಸ್‌ಪ್ರೆಸ್‌ವೇ ಪ್ರಸ್ತುತ 3.5 ಗಂಟೆಗಳ ಪ್ರಯಾಣವನ್ನು ಕೇವಲ 1.5 ಗಂಟೆಗೆ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. 8,453 ಕೋಟಿ ರೂ. ವೆಚ್ಚದ ಈ ಯೋಜನೆಯು ಮುಂದಿನ ವರ್ಷ ಮಾರ್ಚ್‌ನಲ್ಲಿ ಉದ್ಘಾಟನೆಗೊಳ್ಳಲಿದೆ ಎನ್ನಲಾಗಿದೆ.

ಇದನ್ನೂ ಓದಿ: Bangalore Mysore Expressway: ಜನವರಿಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಬಹುತೇಕ ತೆರೆಯಲಿವೆ

4,473 ಕೋಟಿ ರೂ. ವೆಚ್ಚದಲ್ಲಿ 118 ಕಿ.ಮೀ. ಉದ್ದದ ಈ ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ವೇಯನ್ನು ನಿರ್ಮಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ 10 ಲೇನ್ ಎಕ್ಸ್‌ಪ್ರೆಸ್‌ವೇ ಈ ಮಾರ್ಗದಲ್ಲಿ ಅಪಘಾತಗಳ ಸಂಖ್ಯೆಗೆ ಸುದ್ದಿಯಾಗಿದೆ. ಪೊಲೀಸ್ ಇಲಾಖೆಯ ಪ್ರಕಾರ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಳೆದ 6 ತಿಂಗಳಲ್ಲಿ 77 ಅಪಘಾತಗಳು ಉಂಟಾಗಿವೆ. ಈ ಅಪಘಾತಗಳಲ್ಲಿ ಒಟ್ಟು 28 ಜನರು ಪ್ರಾಣ ಕಳೆದುಕೊಂಡಿದ್ದು, 67 ಜನರು ಗಾಯಗೊಂಡಿದ್ದಾರೆ.

ಆದರೆ, NHAI (ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ) ಬೆಂಗಳೂರಿನಿಂದ ಮಂಡ್ಯಕ್ಕೆ ವಾಹನಗಳನ್ನು ಚಲಾಯಿಸಲು ಅನುಮತಿ ನೀಡಿದ್ದು, ಉಳಿದ ಮಾರ್ಗ ಇನ್ನೂ ಪೂರ್ಣಗೊಂಡಿಲ್ಲ. ಈ ರಸ್ತೆಯು 118 ಕಿಲೋಮೀಟರ್ ಉದ್ದವನ್ನು ಹೊಂದಿದೆ ಮತ್ತು ಉದ್ಘಾಟನೆಗೂ ಮುಂಚೆಯೇ ವಾಹನಗಳ ಭಾರೀ ಸಂಚಾರಕ್ಕೆ ಸಾಕ್ಷಿಯಾಗಿದೆ.

ಇದನ್ನೂ ಓದಿ: Mysore Bangalore Highway: ಬೆಂಗಳೂರು ಮೈಸೂರು ದಶಪಥ ರಸ್ತೆಗೆ ಕಾವೇರಿ ಎಕ್ಸ್‌ಪ್ರೆಸ್‌ವೇ ಎಂದು ಹೆಸರಿಡಲು ಪ್ರತಾಪ್ ಸಿಂಹ​, ನಿತಿನ್​ ಗಡ್ಕರಿಗೆ ಮನವಿ

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಕಾರಿಡಾರ್‌ನ ಬಹುತೇಕ ರಸ್ತೆಗಳು ಜನವರಿಗೆ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದ್ದು, ಮುಂದಿನ ವರ್ಷ ಮಾರ್ಚ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಸಾಧ್ಯತೆ ಇದೆ. ಎನ್‌ಎಚ್‌ಎಐ ಅಧಿಕಾರಿಗಗಳು ಹೇಳುವಂತೆ ಎಕ್ಸ್‌ಪ್ರೆಸ್‌ವೇಯಲ್ಲಿ 16 ಅಪಘಾತ ವಲಯಗಳಿದೆ. ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಯೋಜನೆಯು ಈ 262 ಕಿಮೀ ವಿಸ್ತಾರವು ಬೆಂಗಳೂರು ರಿಂಗ್ ರಸ್ತೆಯನ್ನು ಚೆನ್ನೈ ಹೊರ ವರ್ತುಲ ರಸ್ತೆಯೊಂದಿಗೆ ಸಂಪರ್ಕಿಸುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ