Bengaluru-Mysuru Expressway: ಟೋಲ್ ದರ ಹೆಚ್ಚಳ ಖಂಡಿಸಿ ಜೂ.24 ರಂದು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಟೋಲ್ ದರ ಹೆಚ್ಚಳಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ವಾಹನ ಚಾಲಕರು ಕೇಂದ್ರ ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಅಲ್ಲದೇ ಟೋಲ್ ದರ ಏರಿಕೆಯನ್ನು ಖಂಡಿಸಿ ಕನ್ನಡ ಸಂಘಟನೆಗಳು ಪ್ರತಿಭಟನೆ ಮಾಡಲು ನಿರ್ಧರಿಸಿವೆ.
ಬೆಂಗಳೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ (Bengaluru-Mysuru Expressway) ಟೋಲ್ ದರ ಹೆಚ್ಚಳ ಖಂಡಿಸಿ ನಾಳೆ (ಜೂ.24) ರಂದು ರಸ್ತೆ ಬಂದ್ (Band) ಮಾಡಿ ಬೆಳಿಗ್ಗೆ 10:30 ರಿಂದ ಸಂಜೆ 6 ಗಂಟೆಯವರೆಗೆ ಕಣ್ಮಿಣಿಕೆ ಟೋಲ್ (Kanaminike Toll) ಮುಂಭಾಗ ಪ್ರತಿಭಟನೆ ನಡೆಸಲು ಕನ್ನಡಪರ ಸಂಘಟನೆಗಳು (Kannadapar Sangatanegalu) ನಿರ್ಧರಿಸಿವೆ. ಶನಿವಾರದ ಪ್ರತಿಭಟನೆಯಲ್ಲಿ ಕನ್ನಡಪರ ಸಂಘಟನೆಗಳು, ಚಾಲಕಪರ ಹಾಗೂ ರೈತಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
ಟೋಲ್ ದರ ಎಷ್ಟು ಏರಿಕೆ
ಕಾರು, ವ್ಯಾನ್, ಜೀಪ್ ಏಕಮುಖ ಸಂಚಾರಕ್ಕೆ 135 ರಿಂದ 165ಕ್ಕೆ (30 ರೂ.) ಏರಿಕೆಯಾಗಿದ್ದು, ಲಘು ವಾಹನಗಳು, ಮಿನಿ ಬಸ್‌ಗಳ ಏಕಮುಖ ಸಂಚಾರಕ್ಕೆ 220 ರಿಂದ 270ಕ್ಕೆ (50 ರೂ.) ಏರಿಕೆಯಾಗಿದೆ. ಟ್ರಕ್, ಬಸ್, 2 ಆ್ಯಕ್ಸೆಲ್ ವಾಹನ ಏಕಮುಖ ಸಂಚಾರಕ್ಕೆ 460 ರಿಂದ 565 ರೂ. (105 ರೂ.) ಹೆಚ್ಚಳ ವಾಗಿದೆ.
3 ಆ್ಯಕ್ಸೆಲ್ ವಾಹನಗಳ ಏಕಮುಖ ಸಂಚಾರಕ್ಕೆ 500 ರಿಂದ 615ಕ್ಕೆ ಏರಿಕೆ (115 ರೂ.), ಭಾರಿ ವಾಹನಗಳ ಏಕಮುಖ ಸಂಚಾರಕ್ಕೆ 720 ರಿಂದ 885ಕ್ಕೆ (165 ರೂ.), 7 ಅಥವಾ ಅದಕ್ಕಿಂತ ಹೆಚ್ಚಿನ ಆ್ಯಕ್ಸೆಲ್ ವಾಹನಗಳ ಸಂಚಾರಕ್ಕೆ 880 ರಿಂದ 1,080ಕ್ಕೆ (200 ರೂ.) ಹೆಚ್ಚಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರು- ಮೈಸೂರು ಮಾರ್ಗದ ರೈಲುಗಳು ನಾಯಂಡಹಳ್ಳಿಯಲ್ಲಿ ನಿಲುಗಡೆಗೆ ಗ್ರೀನ್ ಸಿಗ್ನಲ್, ಬಹುದಿನಗಳ ಬೇಡಿಕೆ ಈಡೇರಿಕೆ
ಟೋಲ್ ದರ ಸಮರ್ಥಿಸಿಕೊಂಡಿದ್ದ ಸಂಸದ ಪ್ರತಾಪ್ ಸಿಂಹ
ಇನ್ನು ಟೋಲ್ ದರ ಏರಿಕೆಯನ್ನು ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದರು. ಇಡೀ ದೇಶದಲ್ಲಿ ಆರ್ಥಿಕ ವರ್ಷ ಶುರುವಾದಾಗ ಟೋಲ್ ಹೆಚ್ಚಳ ಸಹಜ. ಈ ಹೈವೆಗೆ ಏಪ್ರಿಲ್ನಲ್ಲಿ ಟೋಲ್ ದರ ಏರಿಕೆಯಾಗಬೇಕಿತ್ತು. ಆಗ ಆಗಿರಲಿಲ್ಲ. ಈಗ ಶೇ.22ರಷ್ಟು ಏರಿಕೆಯಾಗಿದೆ. ಹಾಗೂ ಟೋಲ್ ಸಂಗ್ರಹದ ಆರಂಭದಲ್ಲಿ ಫಾಸ್ಟ್ ಟ್ಯಾಗ್ ಸಮಸ್ಯೆ ಇತ್ತು, ಈಗ ಸಮಸ್ಯೆ ಇಲ್ಲ. ಫಾಸ್ಟ್ ಟ್ಯಾಗ್ ಇರದಿದ್ದರೆ ಡಬಲ್ ಚಾರ್ಜ್ ಕಟ್ಟುವುದು ಕಡ್ಡಾಯವಾಗಿದೆ ಎಂದು ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ