ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡುವುದಿಲ್ಲ: ಬಿಜೆಪಿ ಸಂಸದ ಪ್ರತಾಪ್​ ಸಿಂಹ ಸ್ಪಷ್ಟನೆ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 20, 2023 | 3:46 PM

ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್​​ 21ರಂದು ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೆದ್ದಾರಿ ಬಂದ್​​ ಮಾಡಿ ಪ್ರತಿಭಟನೆ ಮಾಡಲು ಬಿಜೆಪಿ ತೀರ್ಮಾನಿಸಿತ್ತು, ಆದರೆ ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡುವುದಿಲ್ಲ ಮತ್ತು ಮಾಡುವುದು ತಪ್ಪಾಗುತ್ತದೆ ಎಂದು ಟ್ವೀಟ್​ ಮಾಡುವ ಮೂಲಕ ಬಿಜೆಪಿ ಸಂಸದ ಪ್ರತಾಪ್​ ಸಿಂಹ ಸ್ಪಷ್ಟನೆ ನೀಡಿದ್ದಾರೆ. 

ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡುವುದಿಲ್ಲ: ಬಿಜೆಪಿ ಸಂಸದ ಪ್ರತಾಪ್​ ಸಿಂಹ ಸ್ಪಷ್ಟನೆ
ಬಿಜೆಪಿ ಸಂಸದ ಪ್ರತಾಪ್​ ಸಿಂಹ
Follow us on

ಬೆಂಗಳೂರು, ಆಗಸ್ಟ್​ 20: ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಆಗಸ್ಟ್​​ 21ರಂದು ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೆದ್ದಾರಿ ಬಂದ್​​ ಮಾಡಿ ಪ್ರತಿಭಟನೆ ಮಾಡಲು ಬಿಜೆಪಿ ತೀರ್ಮಾನಿಸಿತ್ತು. ಆದರೆ ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡುವುದಿಲ್ಲ ಮತ್ತು ಮಾಡುವುದು ತಪ್ಪಾಗುತ್ತದೆ. ಮಂಡ್ಯದ ಸಂಜಯ್ ಸರ್ಕಲ್​ನಲ್ಲಿ ಪ್ರತಿಭಟನೆ ಇದೆ. ಧನ್ಯವಾದಗಳು ಎಂದು ಟ್ವೀಟ್​ ಮಾಡುವ ಮೂಲಕ ಬಿಜೆಪಿ ಸಂಸದ ಪ್ರತಾಪ್​ ಸಿಂಹ (Pratap Simha) ಸ್ಪಷ್ಟನೆ ನೀಡಿದ್ದಾರೆ.

ಕಾವೇರಿ ನೀರಿನ ವಿಚಾರವನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿ, ಆಗಸ್ಟ್​ 21 ರಂದು ಮಂಡ್ಯದ ಇಂಡುವಾಳು ಬಳಿ ಬೃಹತ್​ ಹೋರಾಟಕ್ಕೆ ಸಜ್ಜಾಗಿದೆ. ಈ ಬಗ್ಗೆ ನಿನ್ನೆ ಮಂಡ್ಯದ ಬಿಜೆಪಿ ಕಚೇರಿಯಲ್ಲಿ ಚರ್ಚೆ ನಡೆಸಲಾಗಿದೆ. ಇನ್ನೂ ಪ್ರತಿಭಟನೆಗೆ ಮಾಜಿ ಸಿಎಂ ಯಡಿಯೂರಪ್ಪರಿಗೂ ಆಹ್ವಾನ ನೀಡಿದ್ದು, ಭಾಗಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಬಿಜೆಪಿ ಹೋರಾಟಕ್ಕೆ ಆರಂಭಿಕ ಹಿನ್ನಡೆ

ನಾಳೆ ಕಾವೇರಿ ಹೋರಾಟಕ್ಕೆ ಕರೆ ಕೊಟ್ಟಿದ್ದ ಬಿಜೆಪಿಗೆ ಆರಂಭಿಕ ಹಿನ್ನಡೆ ಉಂಟಾಗಿದ್ದು, ಹೆದ್ದಾರಿ ತಡೆಗೆ ಮಂಡ್ಯ ಪೊಲೀಸರು ಅನುಮತಿ ನೀಡಿಲ್ಲ. ಬೆಂಗಳೂರು-ಮೈಸೂರು ಹೆದ್ದಾರಿ ತಡೆಗೆ ನಿರ್ಧರಿಸಲಾಗಿತ್ತು. ಪೊಲೀಸರಿಂದ ಅನುಮತಿ ನಿರಾಕರಣೆ ಹಿನ್ನೆಲೆ ಇಂಡುವಾಳುಯಿಂದ ಸಂಜಯ ವೃತ್ತಕ್ಕೆ ಹೋರಾಟ ಶಿಫ್ಟ್ ಮಾಡಲಾಗಿದೆ. ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ ನಾಯಕರ ಕರೆಸಲು ಬಿಜೆಪಿ ನಿರ್ಧರಿಸಿದೆ.

ಕಾವೇರಿ ನೀರು ವಿಚಾರವಾಗಿ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವೂ ನಿನ್ನೆ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆಯಾಗಿದೆ. ರಾಜ್ಯದ ಸದ್ಯದ ಸ್ಥಿತಿಗತಿ, ನೀರು ಸಂಗ್ರಹದ ವಸ್ತುಸ್ಥಿತಿಯನ್ನು ಸುಪ್ರೀಂಕೋರ್ಟ್​​ಗೆ ಮನವರಿಕೆ ಮಾಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಸುಪ್ರೀಂಕೋರ್ಟ್​​ನಲ್ಲಿ ನಾಳೆ ಮನವಿ ಸಲ್ಲಿಸಲು ಕ್ಯಾಬಿನೆಟ್​​​​ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕಾನೂನು ಸಂಸದೀಯ ಸಚಿವ ಹೆಚ್​​​​.ಕೆ.ಪಾಟೀಲ್​​ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ ಸರ್ಕಾರದ ವಿರುದ್ಧ ಆ 23ರಂದು ಬೃಹತ್​ ಪ್ರತಿಭಟನೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಟಿ.ನರಸೀಪುರ ಬಳಿ ರೈತರು ಮೈಸೂರು-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದರು. KRS​​ನಿಂದ ತಮಿಳುನಾಡಿಗೆ ಒಂದು ಹನಿ ನೀರು ಬಿಡಬಾರದು ಅಂತ ರೊಚ್ಚಿಗೆದ್ದಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು: ಕೆಆರ್​ಎಸ್​ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡುಗಡೆ ; ರಾಜ್ಯದ ಜನರನ್ನು ಬಲಿ ಕೊಡುವ ಕೆಲಸ ಸರ್ಕಾರ ಮಾಡ್ತಿದೆ ಎಂದ ಶೋಭಾ ಕರಂದ್ಲಾಜೆ

ಧರಣಿಯಿಂದ ಹೆದ್ದಾರಿಯಲ್ಲಿ ಟ್ರಾಫಿಕ್​ ಜಾಮ್​ ಉಂಟಾಗಿ ಸಂಚಾರ ಅಸ್ತವ್ಯಸ್ತವಾಗಿತ್ತು. ಇನ್ನೂ ಡಿಸಿಎಂ ಡಿ.ಕೆ ಶಿವಕುಮಾರ್​ ಕ್ಷೇತ್ರದಲ್ಲೂ ಪ್ರಗತಿಪರ ಸಂಘಟನೆಗಳ ಒಕ್ಕೂಟಗಳು ಹೋರಾಟ ನಡೆಸುದ್ದರು. ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದ್ದರು.

ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಡಿಕೆ ಶಿವಕುಮಾರ್​ ಟಾಂಗ್ 

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡೋ ಹಕ್ಕಿದೆ. ಆದರೆ ಅವರ ನಾಯಕ ಯಾರು ಅನ್ನೋದನ್ನ ತಿಳಿಸಿ ಪ್ರತಿಭಟನೆ ಮಾಡಲಿ ಎಂದು ಬಿಜೆಪಿ ಕರೆ ನೀಡಿರುವ ಪ್ರತಿಭಟನೆಗೆ ಡಿಸಿಎಂ ಡಿಕೆ ಶಿವಕುಮಾರ್​ ಟಾಂಗ್ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:40 pm, Sun, 20 August 23