ಬೆಂಗಳೂರು: ಆಗಸ್ಟ್ 15 ರಂದು ಮೆಟ್ರೋ ಪ್ರಯಾಣ ದರ 30 ರೂ. ನಿಗದಿ ಮಾಡಿದ ಬಿಎಂಆರ್​ಸಿಎಲ್

76 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೆಂಗಳೂರು ನಮ್ಮ ಮೆಟ್ರೋ ಪೇಪರ್ ಟಿಕೆಟ್ ಪರಿಚಯಿಸಿದೆ. ಅಲ್ಲದೆ, ಫಲಪುಷ್ಪ ಪ್ರದರ್ಶನ ಹಿನ್ನೆಲೆ ಲಾಲ್​ಬಾಗ್​ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು 30 ರೂಪಾಯಿಗೆ ನಿಗದಿ ಮಾಡಿದೆ.

ಬೆಂಗಳೂರು: ಆಗಸ್ಟ್ 15 ರಂದು ಮೆಟ್ರೋ ಪ್ರಯಾಣ ದರ 30 ರೂ. ನಿಗದಿ ಮಾಡಿದ ಬಿಎಂಆರ್​ಸಿಎಲ್
ಆಗಸ್ಟ್ 15 ರಂದು ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಬರುವವರ ಅನೂಕೂಲಕ್ಕಾಗಿ ಬಿಎಂಆರ್​ಸಿಎಲ್ ಮೆಟ್ರೋ ಪ್ರಯಾಣದ ದರ 30 ರೂ. ನಿಗದಿ ಮಾಡಿದೆ
Follow us
| Updated By: Rakesh Nayak Manchi

Updated on: Aug 11, 2023 | 7:40 PM

ಬೆಂಗಳೂರು, ಆಗಸ್ಟ್ 11: ಸ್ವಾತಂತ್ರ್ಯ ದಿನಾಚರಣೆಯಂದು (Independence Day) ಫಲಪುಷ್ಪ ಪ್ರದರ್ಶನ (Flower Show) ವೀಕ್ಷಣೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ನಮ್ಮ ಮೆಟ್ರೋ ಸಂಸ್ಥೆ, ಪೇಪರ್ ಟಿಕೆಟ್ ಪರಿಚಯಿಸಿದೆ. ಅದರಂತೆ, ಲಾಲ್​ಬಾಗ್ ನಿಲ್ದಾಣದಿಂದ (Lal Bagh Metro Station) ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು 30 ರೂಪಾಯಿಗೆ ನಿಗದಿ ಮಾಡಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಬಿಎಂಆರ್​ಸಿಎಲ್, ಲಾಲ್‌ ಬಾಗ್‌ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಬರುವ ಸಾರ್ವಜನಿಕ ಪ್ರಯಾಣಕ್ಕೆ ಅನುಕೂಲವಾಗಲೆಂದು ನಮ್ಮ ಮೆಟ್ರೋ 15ರ ಆಗಸ್ಟ್ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆದಂದು ಲಾಲ್‌ಬಾಗ್‌ನಿಂದ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು ಪರಿಚಯಿಸಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ: Bengaluru Traffic advisory: ಲಾಲ್​ಬಾಗ್ ಫಲಪುಷ್ಪ ಪ್ರದರ್ಶನ; ವಾಹನ ನಿಲುಗಡೆ, ಪಾರ್ಕಿಂಗ್ ನಿಷೇಧಿತ ಸ್ಥಳಗಳ ಮಾಹಿತಿ ಇಲ್ಲಿದೆ

15 ರಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಾಲ್‌ಬಾಗ್‌ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು 30 ರುಪಾಯಿಗೆ ನಿಗಧಿಪಡಿಸಲಾಗಿದೆ. ಪೇಪರ್ ಟಿಕೆಟ್ ಆ ದಿನದ ಒಂದು ಪ್ರಯಾಣಕ್ಕೆ ಮಾತ್ರ ಮಾನ್ಯವಾಗಿರುತ್ತದೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಎಲ್ಲ ಮೆಟ್ರೋ ನಿಲ್ದಾಣಗಲ್ಲಿ ಖರೀದಿಸಬಹುದಾಗಿದೆ. ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಸದರಿ ಪೇಪರ್ ಟಿಕೆಟ್ ರಾತ್ರಿ 8 ಗಂಟೆಯವರೆಗೆ ಲಭ್ಯವಿರುತ್ತದೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ಮೆಟ್ರೋ ಪಯಾಣಿಕರು ಲಾಲ್‌ಬಾಗ್ ನಿಲ್ದಾಣದ ಎಎಫ್​​ಸಿ ಗೇಟ್‌ಗಳಲ್ಲಿ ಪುವೇಶಿಸಲು ಹಾಗೂ ಯಾವುದೇ ನಿಲ್ದಾಣದಿಂದ ನಿರ್ಗಮಿಸಲು ಪೇಪರ್ ಟಿಕೆಟ್‌ಗಳನ್ನು ಹಾಜರಿಪಡಿಸಬೇಕಾಗುತ್ತದೆ. ನಮ್ಮ ಮೆಟ್ರೋ ಪಯಾಣಿಕರ ಸುಗಮ ಪ್ರಯಾಣಕ್ಕಾಗಿ ಈ ಸೌಲಭ್ಯವನ್ನು ಬಳಸಿಕೊಳ್ಳಬೇಕೆಂದು ಬಿಎಂಆರ್​ಸಿಎಲ್ ಮನವಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ