ಬೆಂಗಳೂರು, ಆಗಸ್ಟ್ 11: ಸ್ವಾತಂತ್ರ್ಯ ದಿನಾಚರಣೆಯಂದು (Independence Day) ಫಲಪುಷ್ಪ ಪ್ರದರ್ಶನ (Flower Show) ವೀಕ್ಷಣೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ನಮ್ಮ ಮೆಟ್ರೋ ಸಂಸ್ಥೆ, ಪೇಪರ್ ಟಿಕೆಟ್ ಪರಿಚಯಿಸಿದೆ. ಅದರಂತೆ, ಲಾಲ್‌ಬಾಗ್ ನಿಲ್ದಾಣದಿಂದ (Lal Bagh Metro Station) ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು 30 ರೂಪಾಯಿಗೆ ನಿಗದಿ ಮಾಡಿದೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಬಿಎಂಆರ್ಸಿಎಲ್, ಲಾಲ್ ಬಾಗ್‌ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಬರುವ ಸಾರ್ವಜನಿಕ ಪ್ರಯಾಣಕ್ಕೆ ಅನುಕೂಲವಾಗಲೆಂದು ನಮ್ಮ ಮೆಟ್ರೋ 15ರ ಆಗಸ್ಟ್ ಮಂಗಳವಾರ ಸ್ವಾತಂತ್ರ್ಯ ದಿನಾಚರಣೆದಂದು ಲಾಲ್‌ಬಾಗ್‌ನಿಂದ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು ಪರಿಚಯಿಸಲಿದೆ ಎಂದು ತಿಳಿಸಿದೆ.
15 ರಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು ಟಿಕೆಟ್ ದರವನ್ನು 30 ರುಪಾಯಿಗೆ ನಿಗಧಿಪಡಿಸಲಾಗಿದೆ. ಪೇಪರ್ ಟಿಕೆಟ್ ಆ ದಿನದ ಒಂದು ಪ್ರಯಾಣಕ್ಕೆ ಮಾತ್ರ ಮಾನ್ಯವಾಗಿರುತ್ತದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಎಲ್ಲ ಮೆಟ್ರೋ ನಿಲ್ದಾಣಗಲ್ಲಿ ಖರೀದಿಸಬಹುದಾಗಿದೆ. ಲಾಲ್‌ಬಾಗ್ ಮೆಟ್ರೋ ನಿಲ್ದಾಣದಲ್ಲಿ ಸದರಿ ಪೇಪರ್ ಟಿಕೆಟ್ ರಾತ್ರಿ 8 ಗಂಟೆಯವರೆಗೆ ಲಭ್ಯವಿರುತ್ತದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಮೆಟ್ರೋ ಪಯಾಣಿಕರು ಲಾಲ್‌ಬಾಗ್ ನಿಲ್ದಾಣದ ಎಎಫ್ಸಿ ಗೇಟ್‌ಗಳಲ್ಲಿ ಪುವೇಶಿಸಲು ಹಾಗೂ ಯಾವುದೇ ನಿಲ್ದಾಣದಿಂದ ನಿರ್ಗಮಿಸಲು ಪೇಪರ್ ಟಿಕೆಟ್‌ಗಳನ್ನು ಹಾಜರಿಪಡಿಸಬೇಕಾಗುತ್ತದೆ. ನಮ್ಮ ಮೆಟ್ರೋ ಪಯಾಣಿಕರ ಸುಗಮ ಪ್ರಯಾಣಕ್ಕಾಗಿ ಈ ಸೌಲಭ್ಯವನ್ನು ಬಳಸಿಕೊಳ್ಳಬೇಕೆಂದು ಬಿಎಂಆರ್ಸಿಎಲ್ ಮನವಿ ಮಾಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ