Namma Metro: ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗದಲ್ಲಿ ಆಗಸ್ಟ್ 29 ಮಧ್ಯಾಹ್ನ 12 ಗಂಟೆಯಿಂದ ಮೆಟ್ರೋ ಸಂಚಾರ ಆರಂಭ

Bengaluru Metro: ಒಟ್ಟು 7.53 ಕೀಮಿ ಉದ್ದದ 6 ಎತ್ತರಿಸಿದ ನಿಲ್ದಾಣ ಇರುವ ಮೈಸೂರು ರಸ್ತೆ- ಕೆಂಗೇರಿ ಮೆಟ್ರೋ ಮಾರ್ಗವ 1,560 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದೆ.

Namma Metro: ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗದಲ್ಲಿ ಆಗಸ್ಟ್ 29 ಮಧ್ಯಾಹ್ನ 12 ಗಂಟೆಯಿಂದ ಮೆಟ್ರೋ ಸಂಚಾರ ಆರಂಭ
ನಮ್ಮ ಮೆಟ್ರೋ
Follow us
TV9 Web
| Updated By: guruganesh bhat

Updated on:Aug 21, 2021 | 5:35 PM

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿಯಿಂದು ಹೊರಬಿದ್ದಿದೆ. ಮೈಸೂರು ರಸ್ತೆಯಿಂದ ಕೆಂಗೇರಿ ಮೆಟ್ರೋ ಮಾರ್ಗ ಲೋಕಾರ್ಪಣೆಗೆ ದಿನಾಂಕ ನಿಗದಿಯಾಗಿದ್ದು ಇದೇ ಆಗಸ್ಟ್ 29 ರಂದು ಮಧ್ಯಾಹ್ನ 12ಕ್ಕೆ ಜನರ ಸೇವೆಗೆ ಈಮಾರ್ಗ ಲಭ್ಯವಾಗಲಿದೆ. ರೈಲ್ವೆ ಸುರಕ್ಷತಾ ಆಯುಕ್ತ ಅಭಯ್ ಕುಮಾರ್ ರೈ ಆಗಸ್ಟ್ 11 ಹಾಗೂ 12 ರಂದು ಸುರಕ್ಷತಾ ಪರೀಕ್ಷೆ ನಡೆಸಿ ಸುರಕ್ಷತಾ ಪ್ರಮಾಣಪತ್ರ ನೀಡಿರುವ ಕಾರಣ ಪ್ರಯಾಣಿಕ ಬಳಕೆಗೆ ಈಮಾರ್ಗವನ್ನು ಅನುವು ಮಾಡಿಕೊಡಲಾಗಿದೆ. ಒಟ್ಟು 7.53 ಕೀಮಿ ಉದ್ದದ 6 ಎತ್ತರಿಸಿದ ನಿಲ್ದಾಣ ಇರುವ ಮೈಸೂರು ರಸ್ತೆ- ಕೆಂಗೇರಿ ಮೆಟ್ರೋ ಮಾರ್ಗವ 1,560 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಬಿಎಂಆರ್ಸಿಎಲ್ ಕಳೆದ ಮೂರು ತಿಂಗಳಿನಿಂದ ಟ್ರಯಲ್ ರನ್ ನಡೆಸಿದೆ.

ಮೈಸೂರು ನಗರದಲ್ಲಿ ಬಹುಮಹಡಿ ವಸತಿ ಸಂಕೀರ್ಣಗಳ ನಿರ್ಮಾಣ ಸಾಂಸ್ಕೃತಿಕ ನಗರಿ ಮೈಸೂರು ಮತ್ತಷ್ಟು ವಿಸ್ತರಣೆಯಾಗಲು ಸಜ್ಜಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು -ಮುಡಾ ಮಹಾರಾಷ್ಟ್ರದ ನಾಸಿಕ್ ಮಾದರಿಯಲ್ಲಿ ನೂತನ ಮೆಟ್ರೋ ನಗರ ನಿರ್ಮಾಣ ಮಾಡಲು ನಿರ್ಧರಿಸಿದೆ.

ಮೈಸೂರು ನಗರದಲ್ಲಿ ನಿಯೋ ಮೆಟ್ರೋ ನಿರ್ಮಾಣದ ಬಗ್ಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಮೆಟ್ರೋ ನಗರ ನಿರ್ಮಾಣ ಸೇರಿ ಕೆಲ ಯೋಜನೆಗಳಿಗೆ ಮುಡಾ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಮುಡಾ ಅಧ್ಯಕ್ಷ ರಾಜೀವ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಗರದ 3 ಭಾಗಗಳಲ್ಲಿ ಗುಂಪು ಮನೆ ನಿರ್ಮಾಣ ಯೋಜನೆ (Group Housing Scheme) ಕೈಗೊಳ್ಳುವ ಬಗ್ಗೆ ನಿರ್ಧರಿಸಲಾಗಿದೆ. 478 ಕೋಟಿ ರೂಪಾಯಿ ವೆಚ್ಚದ ಬಹು ಮಹಡಿ ಗುಂಪುಮನೆ ಯೋಜನೆ (Multi Floor Housing Complex) ಇದಾಗಿದೆ. ವಿಜಯನಗರ-2, 3ನೇ ಹಂತ, ದಟ್ಟಗಳ್ಳಿಯಲ್ಲಿ ನಿಯೋ ಮೆಟ್ರೋ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ.

ಇದನ್ನೂ ಓದಿ: 

Neo Metro: ಮೈಸೂರಿಗೆ ಬರಲಿರುವ ನಿಯೋ ಮೆಟ್ರೋ ವಿಶೇಷತೆಗಳೇನು? ರಸ್ತೆಯ ಮೇಲೆ ಓಡಾಡುವ ರೈಲು ಹೇಗಿರಲಿದೆ?

BMTC: ಶಾಲೆ ಆರಂಭವಾಗಲಿರುವ 9-12ನೇ ತರಗತಿಯ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

(Bengaluru Namma Metro Mysuru Road to Kengeri service start by August 29 to public use)

Published On - 5:01 pm, Sat, 21 August 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್