ಮೆಟ್ರೋ ಅಧಿಕಾರಿಯಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ; FIR ದಾಖಲು

ನಮ್ಮ ಮೆಟ್ರೋ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ್ದಲ್ಲದೇ ಅಶ್ಲೀಲ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಗೆ ಮಹಿಳಾ ಸಿಬ್ಬಂದಿ ರಾಜಾಜಿನಗರದ ಮೆಟ್ರೋ ನಿಲ್ದಾಣದ Assistant Section Officer ಗಜೇಂದ್ರ.ಪಿ ಅವರ ವಿರುದ್ಧ ದೂರು ನೀಡಿದ್ದು ಎಫ್​ಐಆರ್​ ದಾಖಲಾಗಿದೆ.

ಮೆಟ್ರೋ ಅಧಿಕಾರಿಯಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ; FIR ದಾಖಲು
ನಮ್ಮ ಮೆಟ್ರೋ
Follow us
Kiran Surya
| Updated By: ಆಯೇಷಾ ಬಾನು

Updated on:Mar 16, 2024 | 1:04 PM

ಬೆಂಗಳೂರು, ಮಾರ್ಚ್​.16: ನಗರದ ಮೆಟ್ರೋ ರೈಲಿನಲ್ಲಿ (Namma Metro) ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆ ಇಲ್ಲ, ಕಿರುಕುಳ ಪ್ರಕರಣಗಳು ಹೆಚ್ಚಾಗಿವೆ ಎಂಬ ಬಗ್ಗೆ ವರದಿಗಳು ಬರುತ್ತಿವೆ. ಆದರೆ ಇದೀಗ ಮೆಟ್ರೋ ಅಧಿಕಾರಿಯಿಂದಲೇ ಮಹಿಳಾ ಸೆಕ್ಯೂರಿಟಿಗಳಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಮಹಿಳಾ ಭದ್ರತಾ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರೋ ಬಗ್ಗೆ ರಾಜಾಜಿನಗರದ ಮೆಟ್ರೋ ನಿಲ್ದಾಣದ Assistant Section Officer ಗಜೇಂದ್ರ.ಪಿ ಅವರ ಮೇಲೆ ದೂರು ದಾಖಲಾಗಿದೆ. ಸುಬ್ರಮ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಗಜೇಂದ್ರ. ಪಿ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಮಹಿಳಾ ಸಿಬ್ಬಂದಿಗಳಿಗೆ ಅಶ್ಲೀಲ ಪದಗಳಿಂದ ನಿಂದಿಸೋದಲ್ಲದೆ, ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಸಹಕರಿಸದ ಮಹಿಳೆಯರಿಗೆ ಬೇರೆ ಕಡೆ ವರ್ಗಾವಣೆ ಮಾಡುವುದಾಗಿ ಬೆದರಿಕೆ‌ ಹಾಕಿದ್ದಾರೆ ಎಂಬ ಆರೋಪ ಕೂಡ ಗಜೇಂದ್ರ ವಿರುದ್ಧ ಕೇಳಿ ಬಂದಿದೆ. ಸೆಕ್ಯೂರಿಟಿ ಏಜೆನ್ಸಿ ಮಾಲೀಕನಿಂದಲೂ ಸಹಕರಿಸುವಂತೆ ಒತ್ತಾಯ ಮಾಡಿದ ಆರೋಪ ಕೇಳಿ ಬಂದಿದೆ. ಸಹಕರಿಸಿ ಇಲ್ಲ ಕೆಲಸದಿಂದ ತೆಗೆಯುತ್ತೇನೆ ಅಂತಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಹಿಳಾ ಸಿಬ್ಬಂದಿ ಬಿಎಂಆರ್​ಸಿಎಲ್ ಹಿರಿಯ ಅಧಿಕಾರಿಗಳಿಗೂ ದೂರು ನೀಡಿದ್ದಾರೆ.

ಇದನ್ನೂ ಓದಿ: ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ; ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ದುರ್ವರ್ತನೆ

ದೂರಿನಲ್ಲಿ ಏನಿದೆ?

ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡ್ತಿರುವ ಮಹಿಳಾ ಸಿಬ್ಬಂದಿಗೆ ನಿಲ್ದಾಣದ ಎಎಸ್ಓ ಗಜೇಂದ್ರ.ಪಿ ನಿಂದಿಸಿದ್ದಾರೆ.  ಒತ್ತಾಯ ಪೂರ್ವಕವಾಗಿ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾರೆ. ವಿರೋಧ ವ್ಯಕ್ತಪಡಿಸಿದ್ರೆ ಸುಳ್ಳು ಕೇಸ್ ಹಾಕಿ ವರ್ಗಾವಣೆ ಮಾಡ್ತೀವಿ ಅಂತ ಬೆದರಿಸ್ತಾರೆ. ನಮ್ಮ ಏಜೆನ್ಸಿ ಮಾಲೀಕರಿಗೆ ದೂರು ನೀಡಿದ್ರೆ ಸಹಕರಿಸಿ, ಇಲ್ಲ ಕೆಲಸ ಬಿಡಿ ಅಂತಾರೇ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:04 pm, Sat, 16 March 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ