Bengaluru Metro: 4 ದಿನ ನಮ್ಮ ಮೆಟ್ರೋ ಸಂಚಾರ ಸ್ಥಗಿತ: ಯಾವ ಮಾರ್ಗ? ಎಲ್ಲಿಯವರೆಗೆ? ಇಲ್ಲಿದೆ ಮಾಹಿತಿ

ನಮ್ಮ ಮೆಟ್ರೋದಲ್ಲಿ ಓಡಾಡುವ ಪ್ರಯಾಣಿಕರ ಗಮನಕ್ಕೆ, ಜನವರಿ 27ರಿಂದ 4 ದಿನ ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಸೇವೆ ಲಭ್ಯ ಇರಲಿದೆ.

Bengaluru Metro: 4 ದಿನ ನಮ್ಮ ಮೆಟ್ರೋ ಸಂಚಾರ ಸ್ಥಗಿತ: ಯಾವ ಮಾರ್ಗ? ಎಲ್ಲಿಯವರೆಗೆ? ಇಲ್ಲಿದೆ ಮಾಹಿತಿ
ಬೆಂಗಳೂರು ನಮ್ಮ ಮೆಟ್ರೋ
Follow us
TV9 Web
| Updated By: Rakesh Nayak Manchi

Updated on:Jan 24, 2023 | 6:06 PM

ಬೆಂಗಳೂರು: ಅನೇಕ ಕಂಪನಿಗಳನ್ನು ಸಂಪರ್ಕಿಸಲು ಸಹಾಯಕವಾಗುವ ಹಾಗೂ ರಸ್ತೆ ಮಾರ್ಗದಲ್ಲಿ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಮೆಟ್ರೋ (Bengaluru Namma Metro) ಪ್ರಯಾಣ ಬೆಳೆಸುವ ಸಾರ್ವಜನಿಕರು ಸ್ವಲ್ಪ ಗಮನಹರಿಸುವುದು ಅವಶ್ಯಕ. ಏಕೆಂದರೆ, ಜನವರಿ 27ರಿಂದ 4 ದಿನ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತಗೊಳ್ಳಲಿದೆ. ಕೆಂಗೇರಿಯಿಂದ ಚಲ್ಲಘಟ್ಟದವರೆಗೆ ವಿಸ್ತರಣಾ ಮಾರ್ಗದಲ್ಲಿ ಕಾಮಗಾರಿ ನಡೆಯಲಿರುವ ಹಿನ್ನಲೆ ನೇರಳೆ ಮಾರ್ಗದ ಮೈಸೂರು ರಸ್ತೆ ನಿಲ್ದಾಣದಿಂದ ಕೆಂಗೇರಿವರೆಗೆ ಮೆಟ್ರೋ ರೈಲುಗಳ ಓಡಾಡವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಅದಾಗ್ಯೂ, ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆ ಲಭ್ಯ ಇರಲಿದೆ. ಜನವರಿ 31ರಿಂದ ಬೈಯಪ್ಪನಹಳ್ಳಿಯಿಂದ ಕೆಂಗೇರಿವರೆಗೆ ಎಂದಿನಂತೆ ಮೆಟ್ರೋ ರೈಲು ಸೇವೆ ಲಭ್ಯವಿರಲಿದೆ.

ಲಾಲ್​ಬಾಗ್ ಫ್ಲವರ್ ಶೋ, .26ಕ್ಕೆ ಪೇಪರ್ ಟಿಕೆಟ್ ನೀಡಲಿರುವ ಮೆಟ್ರೋ

ಬೆಂಗಳೂರಿನ ಲಾಲ್ ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ ಜನವರಿ 20ರಿಂದ ಆರಂಭವಾಗಿದ್ದು, ಜನವರಿ 30ಕ್ಕೆ ಮುಕ್ತಾಯಗೊಳ್ಳಲಿದೆ. 11 ದೇಶಗಳಿಂದ 69 ವಿವಿಧ ಹೂವುಗಳ ಪ್ರದರ್ಶನ ನಡೆಯುತ್ತಿದೆ. ಈ ಫಲಪುಷ್ಟ ಪ್ರದರ್ಶನ ಕಣ್ತುಂಬಿಕೊಳ್ಳಲು ಜನವರಿ 26ರಂದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿರೀಕ್ಷೆ ಇದ್ದು, ಅಂದು ಶೋ ನೋಡಲು ಬರುವ ಜನರ ಅನುಕೂಲಕ್ಕಾಗಿ ಬಿಎಂಆರ್‌ಸಿಎಲ್‌ ಪೇಪರ್ ಟಿಕೆಟ್ ವ್ಯವಸ್ಥೆ ಕಲ್ಪಿಸುತ್ತಿದೆ.

ಇದನ್ನೂ ಓದಿ: ಭೂಲ್​ ಭುಲೈಯ್ಯಾದ ಮಂಜುಲಿಕಾ ಮೆಟ್ರೋ ರೈಲಿನಲ್ಲಿ; ಪ್ರಯಾಣಿಕರಿಗೆ ಕಿರಿಕಿರಿ

ಬೆಳಗ್ಗೆ 10 ಗಂಟೆಯಿಂದ ರಾತ್ರಿ 08 ಗಂಟೆವರೆಗೆ ಲಾಲ್ ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಲು 30ರೂ. ನೀಡಿ ಪೇಪರ್ ಟಿಕೆಟ್ ಪಡೆಯಬಹುದಾಗಿದೆ. ಬೆಳಗ್ಗೆ 8ರಿಂದ ಸಂಜೆ 6 ರವರೆಗೆ ಯಾವುದೇ ಮೆಟ್ರೋ ನಿಲ್ದಾಣಗಳಲ್ಲಿ ಪೇಪರ್ ಟಿಕೆಟ್ ಖರೀದಿಸಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:48 pm, Tue, 24 January 23