Bangalore Metro: ಜುಲೈ 2ರಂದು ಬೆಳಗ್ಗೆ ಎರಡು ಗಂಟೆ ಕಾಲ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಇರಲ್ಲ

ಭಾನುವಾರ (ಜುಲೈ 02) ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ(Metro Rail)ಸಂಚಾರ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ. ಕಾರಣವೇನು? ಈ ಬಗ್ಗೆ ಬಿಎಂಆರ್​ಸಿಎಲ್ ಪ್ರಕಟಣೆ ಹೊರಡಿಸಿದ್ದು, ಇದು ಈ ಕೆಳಗಿನಂತಿದೆ ನೊಡಿ.

Bangalore Metro: ಜುಲೈ 2ರಂದು ಬೆಳಗ್ಗೆ ಎರಡು ಗಂಟೆ ಕಾಲ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಇರಲ್ಲ
Follow us
Kiran Surya
| Updated By: ರಶ್ಮಿ ಕಲ್ಲಕಟ್ಟ

Updated on:Jun 30, 2023 | 3:22 PM

ಬೆಂಗಳೂರು: ನೇರಳೆ ಮಾರ್ಗದಲ್ಲಿ ಭಾನುವಾರ (ಜುಲೈ 02) ನಮ್ಮ ಮೆಟ್ರೋ(Metro Rail)ಸಂಚಾರ ತಾತ್ಕಾಲಿಕವಾಗಿ ಎರಡು ಗಂಟೆ ಸ್ಥಗಿತವಾಗಲಿದೆ. ಟ್ರಿನಿಟಿ-ಎಂ.ಜಿ ರಸ್ತೆ ಮೆಟ್ರೋ ನಡುವೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ MG ರಸ್ತೆ ಮೆಟ್ರೋದಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಭಾನುವಾರ ಎರಡು ಗಂಟೆಗಳ ಕಾಲ  ನಮ್ಮ ಮೆಟ್ರೋ ಸಂಚರಿಸುವುದಿಲ್ಲ. ಈ ಬಗ್ಗೆ ಇಂದು( ಜೂನ್ 30) ಬಿಎಂಆರ್​ಸಿಎಲ್ (BMRCL) ಪ್ರಕಟಣೆ ಮೂಲಕ ಮಾಹಿತಿ ನಿಡಿದೆ.

ಇದನ್ನೂ ಓದಿ: Employees Transfer: 2023-24ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಣೆ

ಬೆಂಗಳೂರು ಮೆಟ್ರೋ ರೈಲು ನಿಗಮವು ಜುಲೈ 2 ರಂದು (ಭಾನುವಾರ) ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ. ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಬೆಳಗ್ಗೆ 7 ಗಂಟೆಯಿಂದ 9 ಗಂಟೆ (ಎರಡು ಗಂಟೆ ಮಾತ್ರ) ಮೆಟ್ರೋ ಸಂಚಾರ ಇರುವುದಿಲ್ಲ. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ನಮ್ಮ ಮೆಟ್ರೋ ವಿಷಾದಿಸಿದೆ ಎಂದು ಬಿಎಂಆರ್​ಸಿಎಲ್​ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಂಗೇರಿ ಮತ್ತು ಎಂ.ಜಿ ರಸ್ತೆ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ಕೃಷ್ಣರಾಜಪುರ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ವಿಭಾಗಗಳ ರೈಲುಗಳ ಸೇವೆಯು ಆಯಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07:00 ಗಂಟೆಗೆ ವೇಳಾಪಟ್ಟಿಯ ಪ್ರಕಾರ ಸಂಚರಿಸಲಿದೆ. ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕೆಂದು ಕೋರಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:38 pm, Fri, 30 June 23

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!