ಬೆಂಗಳೂರು: ನೇರಳೆ ಮಾರ್ಗದಲ್ಲಿ ಭಾನುವಾರ (ಜುಲೈ 02) ನಮ್ಮ ಮೆಟ್ರೋ(Metro Rail)ಸಂಚಾರ ತಾತ್ಕಾಲಿಕವಾಗಿ ಎರಡು ಗಂಟೆ ಸ್ಥಗಿತವಾಗಲಿದೆ. ಟ್ರಿನಿಟಿ-ಎಂ.ಜಿ ರಸ್ತೆ ಮೆಟ್ರೋ ನಡುವೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ MG ರಸ್ತೆ ಮೆಟ್ರೋದಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಭಾನುವಾರ ಎರಡು ಗಂಟೆಗಳ ಕಾಲ ನಮ್ಮ ಮೆಟ್ರೋ ಸಂಚರಿಸುವುದಿಲ್ಲ. ಈ ಬಗ್ಗೆ ಇಂದು( ಜೂನ್ 30) ಬಿಎಂಆರ್ಸಿಎಲ್ (BMRCL) ಪ್ರಕಟಣೆ ಮೂಲಕ ಮಾಹಿತಿ ನಿಡಿದೆ.
ಇದನ್ನೂ ಓದಿ: Employees Transfer: 2023-24ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಅವಧಿ ವಿಸ್ತರಣೆ
ಬೆಂಗಳೂರು ಮೆಟ್ರೋ ರೈಲು ನಿಗಮವು ಜುಲೈ 2 ರಂದು (ಭಾನುವಾರ) ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ. ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಬೆಳಗ್ಗೆ 7 ಗಂಟೆಯಿಂದ 9 ಗಂಟೆ (ಎರಡು ಗಂಟೆ ಮಾತ್ರ) ಮೆಟ್ರೋ ಸಂಚಾರ ಇರುವುದಿಲ್ಲ. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ನಮ್ಮ ಮೆಟ್ರೋ ವಿಷಾದಿಸಿದೆ ಎಂದು ಬಿಎಂಆರ್ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಕೆಂಗೇರಿ ಮತ್ತು ಎಂ.ಜಿ ರಸ್ತೆ, ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ಕೃಷ್ಣರಾಜಪುರ ಮತ್ತು ವೈಟ್ ಫೀಲ್ಡ್ (ಕಾಡುಗೋಡಿ) ವಿಭಾಗಗಳ ರೈಲುಗಳ ಸೇವೆಯು ಆಯಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07:00 ಗಂಟೆಗೆ ವೇಳಾಪಟ್ಟಿಯ ಪ್ರಕಾರ ಸಂಚರಿಸಲಿದೆ. ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಬೇಕೆಂದು ಕೋರಿದೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 2:38 pm, Fri, 30 June 23