ಇಂದಿನಿಂದ ಮೂರು ದಿನ ಬೆಳಗ್ಗೆ ಕೆಲ ಗಂಟೆಗಳ ಸಮಯ ನಮ್ಮ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ಇಂದಿನಿಂದ ಅಂದರೆ ಆಗಸ್ಟ್ 10ರಿಂದ ಆಗಸ್ಟ್ 14ರ ವರೆಗೆ ನೇರಳೆ(ಪರ್ಪಲ್ ಲೈನ್) ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ (ಕೇವಲ ಎರಡು ಗಂಟೆ ಮಾತ್ರ) ರೈಲು ಸಂಚಾರ ಸ್ಥಗಿತಗೊಳ್ಳಲಿದೆ.

ಇಂದಿನಿಂದ ಮೂರು ದಿನ ಬೆಳಗ್ಗೆ ಕೆಲ ಗಂಟೆಗಳ ಸಮಯ ನಮ್ಮ ಮೆಟ್ರೋ ಸೇವೆಯಲ್ಲಿ ವ್ಯತ್ಯಯ
ನಮ್ಮ ಮೆಟ್ರೋ
Follow us
Shivaprasad
| Updated By: ರಮೇಶ್ ಬಿ. ಜವಳಗೇರಾ

Updated on:Aug 10, 2023 | 6:37 AM

ಬೆಂಗಳೂರು, (ಆಗಸ್ಟ್ 10): ಇಂದಿನಿಂದ ಅಂದರೆ ಆಗಸ್ಟ್ 10ರಿಂದ ಆಗಸ್ಟ್ 14ರ ವರೆಗೆ ಬೆಂಗಳುರಿನ (Bengaluru) ನಮ್ಮ ಮೆಟ್ರೋ  (Namma Metro) ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ನೇರಳೆ(ಪರ್ಪಲ್ ಲೈನ್) ಮಾರ್ಗದಲ್ಲಿ ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ (ಕೇವಲ ಎರಡು ಗಂಟೆ ಮಾತ್ರ) ರೈಲು ಸಂಚಾರ ಸ್ಥಗಿತಗೊಳ್ಳಲಿದೆ. ಬೈಯಪ್ಪನಹಳ್ಳಿ ಟರ್ಮಿನಲ್‌ನಿಂದ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣ, ಕೃಷ್ಣರಾಜಪುರ, ವೈಟ್‌ಫೀಲ್ಡ್‌ವರೆಗೆ ಮೆಟ್ರೋ ಸಂಚಾರ ವಿಸ್ತರಿತ ಮಾರ್ಗದಲ್ಲಿ ಸಿಗ್ನಲಿಂಗ್‌ ಸೇರಿದಂತೆ ಇತರೆ ಕಾಮಗಾರಿಗಳು ನಡೆಯಲಿವೆ. ಬೈಯಪ್ಪನಹಳ್ಳಿವರೆಗೆ ಎಂದಿನಂತೆ ಮೆಟ್ರೋ ರೈಲುಗಳು ಸಂಚರಿಸಲಿದ್ದು, ಅಲ್ಲಿಂದ ಮುಂದಕ್ಕೆ ವೈಟ್‌ಫೀಲ್ಡ್‌ವರೆಗೆ ಬೆಳಗ್ಗೆ 7 ಗಂಟೆಯವರೆಗೆ ಸಂಚಾರ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಪ್ರವಾಸಿಗರ ಪ್ರವಾಸದ ಕನಸು ನನಸು ಮಾಡಲು ಮುಂದೆ ಬಂದ ಕೆಎಸ್ಆರ್​ಟಿಸಿ, ಟೂರ್ ಪ್ಯಾಕೇಜ್ ಮಾಹಿತಿ ಇಲ್ಲಿದೆ

ಬೆಳ್ಳಗೆ 5.00 ಗಂಟೆಯಿಂದ 7.00 ಗಂಟೆಯವರೆಗೆ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ನಿಲ್ದಾಣದವರೆಗೆ ಮೆಟ್ರೋ ರೈಲು ಸೇವೆಗಳು ಲಭ್ಯವಿರುತ್ತದೆ. ಇದಲ್ಲದೆ, ಕೆಂಗೇರಿ ನಿಲ್ದಾಣದಿಂದ ರೈಲು ಸೇವೆಯನ್ನು ಚಲ್ಲಘಟ್ಟ ನಿಲ್ದಾಣದವರೆಗೆ ವಿಸ್ತರಿಸಲು ಸಿಗ್ನಲಿಂಗ್ ಮತ್ತು ಇತರ ಸಂಬಂಧಿತ ಕಾಮಗಾರಿಗಳಿಗಾಗಿ ಆಗಸ್ಟ್​​ 14 ರಂದು ಬೆಳಗ್ಗೆ 5.00 ಗಂಟೆಯಿಂದ ಬೆಳಗ್ಗೆ 7.00 ಗಂಟೆಯವರೆಗೆ ಕೆಂಗೇರಿ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ಮೆಟ್ರೋ ಸೇವೆಗಳು ಇರುವುದಿಲ್ಲ.

ಈ ಸಮಯದಲ್ಲಿ ಬೈಯಪ್ಪನಹಳ್ಳಿ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆ ಲಭ್ಯವಿರುತ್ತದೆ. ಬೆಳಿಗ್ಗೆ 7.00 ಗಂಟೆಯ ನಂತರ, ಬೈಯಪ್ಪನಹಳ್ಳಿ ಮತ್ತು ಕೆಂಗೇರಿ, ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣಗಳ ನಡುವೆ ಎಂದಿನಂತೆ ಮೆಟ್ರೋ ರೈಲು ಸೇವೆಗಳು ರಾತ್ರಿ 11.00 ರವರೆಗೆ ಲಭ್ಯವಿರುತ್ತವೆ. ಇನ್ನು ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಮ್ಮ ಮೆಟ್ರೋ ಪುಯಾಣಿಕರು ಬದಲಾವಣೆಯನ್ನು ಗಮನಿಸಿ ಹಾಗೂ ಸಹಕರಿಸುವಂತೆ ಬಿಎಂಆರ್​ಸಿಎಲ್ ಪ್ರಕರಣೆ ಮೂಲಕ ಮನವಿ ಮಾಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:35 am, Thu, 10 August 23

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್