Bengaluru Namma Metro: ಫೆ.11ರಂದು ಎರಡು ಗಂಟೆ ಈ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಇರಲ್ಲ

| Updated By: ರಮೇಶ್ ಬಿ. ಜವಳಗೇರಾ

Updated on: Feb 09, 2024 | 3:56 PM

Bengaluru Namma Metro: ಬೆಂಗಳೂರು ನಗರದ ಟ್ರಿನಿಟಿ ಮತ್ತು ಎಂ.ಜಿ ರಸ್ತೆ ನಿಲ್ದಾಣಗಳ ನಡುವೆ ಎರಡು ಗಂಟೆಗಳ ಕಾಲ ನಮ್ಮ ಮೆಟ್ರೋ ಸಂಚಾರ ಇರುವುದಿಲ್ಲ. ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ 2 ತಾಸು ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಬಿಎಂಆರ್​ಸಿಎಲ್​ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದೆ.

Bengaluru Namma Metro: ಫೆ.11ರಂದು ಎರಡು ಗಂಟೆ ಈ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಇರಲ್ಲ
ಮೆಟ್ರೋ
Follow us on

ಬೆಂಗಳೂರು, (ಫೆಬ್ರವರಿ 09): ನಗರದ ಟ್ರಿನಿಟಿ ಮತ್ತು ಎಂ.ಜಿ ರಸ್ತೆ (Trinity And MG Road) ನಿಲ್ದಾಣಗಳ ನಡುವೆ ಭಾನುವಾರ ಅಂದರೆ (ಫೆಬ್ರವರಿ 11) ಎರಡೂ ಗಂಟೆ ನಮ್ಮ ಮೆಟ್ರೋ (Namma Metro) ಸಂಚಾರ ಸ್ಥಗಿತವಾಗಲಿದೆ. ನೇರಳೆ ಮಾರ್ಗದಲ್ಲಿ (Purple Line) ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಂ.ಜಿ. ರಸ್ತೆ ಮತ್ತು ಟ್ರಿನಿಟಿ ಮೆಟ್ರೋ ನಿಲ್ದಾಣಗಳ ನಡುವೆ ಭಾನುವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ (ಎರಡು ಗಂಟೆಗಳ ಅವಧಿಗೆ) ಮೆಟ್ರೋ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಬಗ್ಗೆ ಬಿಎಂಆರ್​ಸಿಎಲ್ (BMRCL)​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಈ ಅವಧಿಯಲ್ಲಿ ರೈಲುಗಳು ಎಂ.ಜಿ ರಸ್ತೆ ಮತ್ತು ಚಲ್ಲಘಟ್ಟ ಹಾಗೂ ಇಂದಿರಾನಗರ, ವೈಟ್‌ಫೀಲ್ಡ್ (ಕಾಡುಗೋಡಿ) ನಡುವೆ ಮಾತ್ರ ನಮ್ಮ ಮೆಟ್ರೋ ಬೆಳಗ್ಗೆ  7 ಗಂಟೆಯಿಂದ ಎಂದಿನಂತೆ ಸಂಚರಿಸು್ತತವೆ.ಆದ್ರೆ, ಬೆಳಗ್ಗೆ 9 ಗಂಟೆಯ ನಂತರ ವೈಟ್‌ ಫೀಲ್ಡ್ (ಕಾಡುಗೋಡಿ) ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವಿನ ಸಂಪೂರ್ಣ ನೇರಳೆ ಮಾರ್ಗದಲ್ಲಿ ವೇಳಾಪಟ್ಟಿಯಂತೆ ಮೆಟ್ರೋ ರೈಲು ಸೇವೆಗಳು ಲಭ್ಯವಿರುತ್ತವೆ.

ಇನ್ನೂ ಓದಿ: Namma Metro: ವಿಮಾನ ನಿಲ್ದಾಣಕ್ಕೆ ರಸ್ತೆ ಜತೆಗೇ ಇರಲಿದೆ ಮೆಟ್ರೋ ಲೈನ್: 2026ಕ್ಕೆ ಪಿಂಕ್ ಲೈನ್ ಸಿದ್ಧ

ಇನ್ನು ಹಸಿರು ಮಾರ್ಗದಲ್ಲಿ ರೈಲುಗಳ ಸೇವೆ ಆಯಾ ಟರ್ಮಿನಲ್ ನಿಲ್ದಾಣಗಳಿಂದ ವೇಳಾಪಟ್ಟಿಯ ಪ್ರಕಾರ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿ ಎಂದಿನಂತೆ ಚಲಿಸುತ್ತವೆ ಎಂದು ಬಿಎಂಆರ್​ಸಿಎಲ್​ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:41 pm, Fri, 9 February 24