ಜು.6ರಂದು ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ, ಎಲ್ಲಿಂದ ಎಲ್ಲಿಗೆ
Bengaluru Namma Metro: ನಮ್ಮ ಮೆಟ್ರೋ ಕಾಮಗಾರಿ ಹಿನ್ನೆಲೆ ಭಾನುವಾರ ಅಂದರೆ ಜುಲೈ 06 ನೇರಳೆ ಮಾರ್ಗದಲ್ಲಿ ರೈಲುಗಳ ಸಂಚಾರದಲ್ಲಿ ಕೊಂಚ ವ್ಯತ್ಯಯವಾಗಲಿದೆ. ನೇರಳೆ ಮಾರ್ಗದ(ಪರ್ಪಲ್ ಲೈನ್) ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಯು ತಾತ್ಕಾಲಿಕವಾಗಿ ಸ್ವಗಿತಗೊಳಿಸಲಾಗುತ್ತದೆ. ಈ ಬಗ್ಗೆ ಬಿಎಂಆರ್ ಸಿಎಲ್ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದೆ.

ಬೆಂಗಳೂರು, (ಜುಲೈ 04): ನಮ್ಮ ಮೆಟ್ರೋದ (Namma Metr0) ನೇರಳೆ (ಪರ್ಪಲ್ ಲೈನ್) ಮಾರ್ಗದ ಸ್ವಾಮಿ ವಿವೇಕಾನಂದ ಹಾಗೂ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವೆ ಅಗತ್ಯ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಗಳನ್ನು ನಿರ್ವಹಿಸಲು ಭಾನುವಾರ (ಜುಲೈ 06) ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ವಗಿತಗೊಳಿಸಲಾಗುತ್ತದೆ. ಅಂದು ಬೆಳಗ್ಗೆ 7 ರಿಂದ ಬೆಳಗ್ಗೆ 8ರ ವರೆಗೆ ಒಂದು ಗಂಟೆ ಕಾಲ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ಈ ಬಗ್ಗೆ ಬಿಎಂಆರ್ ಸಿಎಲ್ (Bangalore Metro Rail Corporation Limited (BMRCL)) ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದೆ.
ನೇರಳೆ ಮಾರ್ಗದಲ್ಲಿ ಜುಲೈ 06 ಭಾನುವಾರ ಬೆಳಿಗ್ಗೆ 7 ರಿಂದ 8ರವರೆಗೆ ಅಂದರೆ ಒಂದು ಗಂಟೆಯ ಅವಧಿಗೆ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ ಟು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವಿನ ಅಗತ್ಯ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಿದೆ. ಹೀಗಾಗಿ ಬೆಳಗ್ಗೆ 7 ರಿಂದ 8ರವರೆಗೆ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ಮಾರ್ಗದಲ್ಲಿ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತವಾಗಲಿದ್ದು, ಬೆಳಿಗೆ 8 ರಿಂದ ಸಾಮಾನ್ಯ ರೈಲು ಸಂಚಾರ ಸೇವೆ ಎಂದಿನಂತೆ ಸಾಮಾನ್ಯವಾಗಿ ಪುನರಾರಂಭಿಸುತ್ತದೆ.
ಇದನ್ನೂ ಓದಿ: ನೀರಜ್ ಚೋಪ್ರಾ ಕ್ಲಾಸಿಕ್ 2025: ಬೆಂಗಳೂರಿನ ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ, ಪಾರ್ಕಿಂಗ್ ನಿಷೇಧ
ಇತರೆ ಎಲ್ಲಾ ಮಾರ್ಗಗಳಲ್ಲಿ ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸಲಿದ್ದು, ಚಲ್ಲಘಟ್ಟದಿಂದ ಇಂದಿರಾನಗರ, ಬೈಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್ (ಕಾಡುಗೋಡಿ), ಮಾದಾವರದಿಂದ ರೇಷ್ಮೆ ಸಂಸ್ಥೆ ವರೆಗಿನ ಸೇವೆಗಳು ಬೆಳಿಗ್ಗೆ 7 ಗಂಟೆಯಿಂದ ಮೆಟ್ರೋ ಸಂಚಾರವಿರಲಿದೆ ಎಂದು ಬಿಎಂಆರ್ ಸಿಎಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
ಈ ತಾತ್ಕಾಲಿಕ ತೊಂದರೆಗೆ ವಿಷಾದ ವ್ಯಕ್ತಪಡಿಸಿರುವ ಬಿಎಂಆರ್‌ಸಿಎಲ್, ಪ್ರಯಾಣಿಕರು ತಮ್ಮ ದಿನಚರಿ ಪ್ರವಾಸದ ಯೋಜನೆಯನ್ನು ಮುಂಚಿತವಾಗಿ ರೂಪಿಸಿಕೊಳ್ಳುವಂತೆ ವಿನಂತಿಸಿದೆ. ಮೆಟ್ರೋ ಸೇವೆಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ಪ್ರಯಾಣಿಕರು ಬಿಎಂಆರ್‌ಸಿಎಲ್ ವೆಬ್‌ಸೈಟ್ ಅಥವಾ ಅಧಿಕೃತ ಸಾಮಾಜಿಕ ಜಾಲತಾಣಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಹೇಳಿದೆ.




