Bengaluru Metro: ವೀಕೆಂಡ್ ಕರ್ಫ್ಯೂ ವೇಳೆ ಬೆಂಗಳೂರು ಮೆಟ್ರೋ ಸಂಚಾರ ಹೇಗಿರಲಿದೆ? ವಿವರ ಇಲ್ಲಿದೆ
ಬೆಳಗ್ಗೆ 8 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಮೆಟ್ರೋ ರೈಲು ಕಾರ್ಯಾಚರಣೆ ಮಾಡಲಿದೆ. ಉಳಿದಂತೆ ವಾರದ 5 ದಿನಗಳಲ್ಲಿ ಮೆಟ್ರೋ ಎಂದಿನಂತೆ ಸಂಚರಿಸಲಿದೆ ಎಂದು ಬಿಎಂಆರ್ಸಿಎಲ್ನಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.
ಬೆಂಗಳೂರು: ವೀಕೆಂಡ್ ಲಾಕ್ಡೌನ್ ವೇಳೆ ಬೆಂಗಳೂರು ನಮ್ಮ ಮೆಟ್ರೋ ರೈಲು ಸಂಚಾರಕ್ಕೆ ಸಮಯ ನಿಗದಿ ಮಾಡಲಾಗಿದೆ. ನಾಗಸಂದ್ರ ಮೆಟ್ರೋ ನಿಲ್ದಾಣ, ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣ, ಕೆಂಗೇರಿ ಮೆಟ್ರೋ ನಿಲ್ದಾಣ, ಬೈಯ್ಯಪ್ಪನಹಳ್ಳಿಯಿಂದ ಸಂಚಾರ ಮಾಡುವ ಮೆಟ್ರೋ ರೈಲುಗಳಿಗೆ ಸಮಯ ನಿಗದಿಪಡಿಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ. ಪ್ರತಿ 20 ನಿಮಿಷಕ್ಕೊಮ್ಮೆ ನಮ್ಮ ಮೆಟ್ರೋ ರೈಲು ಸಂಚಾರ ಇರಲಿದೆ ಎಂದು ಹೇಳಲಾಗಿದೆ.
ಬೆಳಗ್ಗೆ 8 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಮೆಟ್ರೋ ರೈಲು ಕಾರ್ಯಾಚರಣೆ ಮಾಡಲಿದೆ. ಉಳಿದಂತೆ ವಾರದ 5 ದಿನಗಳಲ್ಲಿ ಮೆಟ್ರೋ ಎಂದಿನಂತೆ ಸಂಚರಿಸಲಿದೆ ಎಂದು ಬಿಎಂಆರ್ಸಿಎಲ್ನಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.
ನಮ್ಮ ಮೆಟ್ರೋದಲ್ಲಿ ಶೇಕಡಾ 50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ: ವೀಕೆಂಡ್ ಕರ್ಫ್ಯೂ ವೇಳೆ ನಮ್ಮ ಮೆಟ್ರೋ ಸಂಚಾರಕ್ಕೆ ಅಡ್ಡಿಯಿಲ್ಲ. ಶನಿವಾರ ಮತ್ತು ಭಾನುವಾರ ಎಂದಿನಂತೆ ನಮ್ಮ ಮೆಟ್ರೋ ರೈಲು ಸಂಚರಿಸಲಿದೆ. ನಮ್ಮ ಮೆಟ್ರೋ ಹಸಿರು, ನೇರಳೆ ಮಾರ್ಗದಲ್ಲಿ ಯಾವುದೇ ಬದಲಾವಣೆಯಿಲ್ಲ. ನಮ್ಮ ಮೆಟ್ರೋದಲ್ಲಿ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಅವಕಾಶ ಇರಲಿದೆ. ಮೆಟ್ರೋ ರೈಲಿನಲ್ಲಿ ಸದ್ಯ 1800-1900 ಜನ ಪ್ರಯಾಣಿಸುತ್ತಿದ್ದಾರೆ. ಕೊವಿಡ್ ಹೆಚ್ಚಳ ಹಿನ್ನೆಲೆ 800-900 ಜನ ಪ್ರಯಾಣಕ್ಕೆ ಅವಕಾಶ ನೀಡಲಿದ್ದೇವೆ ಎಂದು ಬಿಎಂಆರ್ಸಿಎಲ್ ಎಂಡಿ ಅಂಜುಂ ಪರ್ವೇಜ್ ತಿಳಿಸಿದ್ದಾರೆ.
ಕೊರೊನಾ ನಿಯಮ ಪಾಲಿಸಿ ಮೆಟ್ರೋ ರೈಲು ಓಡಿಸಲು ನಿರ್ಧಾರ ಮಾಡಿದ್ದೇವೆ. ನಮ್ಮ ಮೆಟ್ರೋ ಸಂಚಾರದ ಅವಧಿ ಕಡಿತಗೊಳಿಸಿ ಮೆಟ್ರೋ ಕಾರ್ಯಾಚರಣೆ ನಡೆಸಲಿದೆ. ಪ್ರಸ್ತುತ 15 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸುತ್ತಿದೆ. ವೀಕೆಂಡ್ ಕರ್ಫ್ಯೂ ವೇಳೆ 30 ನಿಮಿಷಕ್ಕೊಂದು ಮೆಟ್ರೋ ಸಂಚಾರ ಮಾಡಲಿದೆ. ಎಂದು ಟಿವಿ9ಗೆ ಬಿಎಂಆರ್ಸಿಎಲ್ ಎಂಡಿ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ.
ಪ್ರೆಸ್ಕ್ಲಬ್ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ ಕೊರೊನಾ ತಡೆಗೆ ಸಮಾರಂಭಗಳಿಗೆ ಸರ್ಕಾರ ನಿರ್ಬಂಧ ಹಿನ್ನೆಲೆ ಪ್ರೆಸ್ಕ್ಲಬ್ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಲಾಗಿದೆ. ಗುರುವಾರ ನಿಗದಿಯಾಗಿದ್ದ ಪ್ರೆಸ್ ಕ್ಲಬ್ ಸಮಾರಂಭ ಮುಂದೂಡಿ ಮಾಹಿತಿ ನೀಡಲಾಗೊದೆ. ಬೆಂಗಳೂರು ಪ್ರೆಸ್ ಕ್ಲಬ್ ಪದಾಧಿಕಾರಿಗಳಿಂದ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಸಮಾರಂಭದ ಮುಂದಿನ ದಿನಾಂಕ ಶೀಘ್ರವೇ ಪ್ರಕಟಣೆ ಆಗಲಿದೆ. ಅರಮನೆ ಮೈದಾನದಲ್ಲಿ ನಾಳೆ ನಡೆಸಬೇಕಿದ್ದ ಸಮಾರಂಭ ರದ್ದು ಮಾಡಲಾಗಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: BMTC Guidelines: ಬಿಎಂಟಿಸಿ ಬಸ್ನಲ್ಲಿ ಪ್ರಯಾಣಿಸಲು ಗುರುತಿನ ಚೀಟಿ ಕಡ್ಡಾಯ: ಹೊಸ ಮಾರ್ಗಸೂಚಿ ಪ್ರಕಟ
ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ವೇಳೆ ನಮ್ಮ ಮೆಟ್ರೋ ಸಂಚಾರಕ್ಕೆ ಅಡ್ಡಿಯಿಲ್ಲ; ಆದರೆ ಗಮನಿಸಿ, ಶೇ 50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ
Published On - 4:46 pm, Wed, 5 January 22