Bengaluru Metro: ಬೆಂಗಳೂರು ಮೆಟ್ರೋ ರೈಲು ಸೇವೆ ಅವಧಿ ವಿಸ್ತರಣೆ; ವಿವರ ಇಲ್ಲಿದೆ

Bengaluru Metro Timings: ಇದೀಗ ಕೊರೊನಾ ಪ್ರಕರಣಗಳು ಇಳಿಕೆ ಆಗುತ್ತಿದ್ದು ಜನಜೀವನ ಬಹುತೇಕ ಸಹಜ ಸ್ಥಿತಿಗೆ ಮರಳುವ ಹಂತದಲ್ಲಿದೆ. ಹೀಗಾಗಿ, ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ ಮೆಟ್ರೋ ಕಾರ್ಯನಿರ್ವಹಿಸುವ ಅವಧಿಯನ್ನು ಪರಿಷ್ಕರಿಸಲಾಗಿದೆ.

Bengaluru Metro: ಬೆಂಗಳೂರು ಮೆಟ್ರೋ ರೈಲು ಸೇವೆ ಅವಧಿ ವಿಸ್ತರಣೆ; ವಿವರ ಇಲ್ಲಿದೆ
ನಮ್ಮ ಮೆಟ್ರೋ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Sep 17, 2021 | 7:26 PM

ಬೆಂಗಳೂರು: ಬೆಂಗಳೂರು ನಮ್ಮ ಮೆಟ್ರೋ ರೈಲು ಸೇವೆಯ ಅವಧಿಯನ್ನು ವಿಸ್ತರಿಸಲಾಗಿದೆ. ಮೆಟ್ರೋ ರೈಲು ಓಡಾಟದ ಅವಧಿಯನ್ನು ಬೆಳಗ್ಗೆ 6 ರಿಂದ ರಾತ್ರಿ 9.30 ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಮೊದಲು ರೈಲು ಓಡಾಟದ ಅವಧಿ ಬೆಳಗ್ಗೆ 7 ಗಂಟೆಯಿಂದ ಸಂಜೆ 8 ಗಂಟೆ ವರೆಗೆ ಮಾತ್ರ ಇತ್ತು. ಕೊರೊನಾ ಸಾಂಕ್ರಾಮಿಕ ಸೋಂಕು ಕಾಣಿಸಿಕೊಂಡ ಬಳಿಕ ಜನಜೀವನ ಅಸ್ತವ್ಯಸ್ತವಾಗಿತ್ತು. ಲಾಕ್​ಡೌನ್ ವಿಧಿಸಿದ್ದರಿಂದ ಹಾಗೂ ಆ ನಂತರವೂ ಮೆಟ್ರೋ ಸೇವೆ ಸಮಯದಲ್ಲಿ ವ್ಯತ್ಯಾಸ ಆಗಿತ್ತು. ಇದೀಗ, ಕೊರೊನಾ ಪ್ರಕರಣಗಳು ಇಳಿಕೆ ಆಗುತ್ತಿದ್ದು ಜನಜೀವನ ಬಹುತೇಕ ಸಹಜ ಸ್ಥಿತಿಗೆ ಮರಳುವ ಹಂತದಲ್ಲಿದೆ. ಹೀಗಾಗಿ, ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ ಮೆಟ್ರೋ ಕಾರ್ಯನಿರ್ವಹಿಸುವ ಅವಧಿಯನ್ನು ಪರಿಷ್ಕರಿಸಲಾಗಿದೆ.

ನಮ್ಮ ಮೆಟ್ರೋ ಸೇವಾ ಅವಧಿಯನ್ನು ವಿಸ್ತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಬಿಜೆಪಿ ಶಾಸಕ, ಮಾಜಿ ಸಚಿವ ಸುರೇಶ್‌ಕುಮಾರ್‌ ಪತ್ರ ಬರೆದಿದ್ದರು. ನೈಟ್ ಕರ್ಫ್ಯೂ ಹಿನ್ನೆಲೆ ರಾತ್ರಿ 9ರವರೆಗೆ ಮಾತ್ರ ಮೆಟ್ರೋ ಸಂಚಾರವಿದೆ. ರಾತ್ರಿ 9 ಗಂಟೆಯ ಬಳಿಕ ಮೆಟ್ರೋ ಸಂಚಾರ ಇರುವುದಿಲ್ಲ. ಇದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ರಾತ್ರಿ 10 ಗಂಟೆಯವರೆಗೆ ಮೆಟ್ರೋ ಸೌಲಭ್ಯ ಕಲ್ಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಶಾಸಕ ಸುರೇಶ್‌ಕುಮಾರ್ ಪತ್ರ ಬರೆದಿದ್ದರು.

ನೈಟ್ ಕರ್ಫ್ಯೂ 11 ಗಂಟೆಯ ನಂತರ ವಿಧಿಸುವ ಬಗ್ಗೆ ಪರಿಶೀಲನೆ ನಡೆಸಬೇಕು. ಲಾಕ್​ಡೌನ್ ಮುಂಚೆ ಮೆಟ್ರೋ ನಿಲ್ದಾಣಗಳಲ್ಲಿ ಎರಡು ಕಡೆ ದ್ವಾರಗಳು ಇದ್ದವು. ಈಗ ಒಂದು ಕಡೆ ಮಾತ್ರ ದ್ವಾರ ಇದ್ದು, ಸಮಸ್ಯೆಯಾಗುತ್ತಿದೆ. ಹೀಗಾಗಿ ಎರಡು ಕಡೆ ಪ್ರವೇಶ ದ್ವಾರ ತೆರೆದು ಸಾರ್ವಜನಿಕರಿಗೆ ಅನುಕೂಲ‌ ಮಾಡಿ ಕೊಡಿ‌ ಎಂದು ಸುರೇಶ್ ಕುಮಾರ್ ಬರೆದ ಪತ್ರದಲ್ಲಿ ವಿನಂತಿ ಮಾಡಿದ್ದರು. ಸುರೇಶ್ ಕುಮಾರ್ ಹೊರತಾಗಿ ಇತರ ಕೆಲವು ರಾಜಕಾರಣಿಗಳು ಕೂಡ ಈ ಬಗ್ಗೆ ಒತ್ತಾಯಿಸಿದ್ದರು. ಇದೀಗ, ಮೆಟ್ರೋ ಕಾರ್ಯನಿರ್ವಹಿಸುವ ಅವಧಿ ವಿಸ್ತರಣೆ ಮಾಡಲಾಗಿದೆ.

ಇದನ್ನೂ ಓದಿ: Namma Metro: ನಮ್ಮ ಮೆಟ್ರೋ ಸೇವಾ ಅವಧಿ ವಿಸ್ತರಿಸುವಂತೆ ಸಿಎಂಗೆ ಸುರೇಶ್ ಕುಮಾರ್ ಪತ್ರ

ಇದನ್ನೂ ಓದಿ: ಬೆಂಗಳೂರು ಮೆಟ್ರೋ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣನೆ: ಎಂಡಿಗೆ ಸರ್ಕಾರದಿಂದ ನೋಟಿಸ್

Published On - 7:08 pm, Fri, 17 September 21

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್