Yellow Line Metro: ಮುಂದಿನ ವಾರದಿಂದ ಟ್ರ್ಯಾಕಿಗಿಳಿಯಲಿದೆ ನಮ್ಮ ಮೆಟ್ರೋ ಯೆಲ್ಲೋ ಲೈನ್ ನಾಲ್ಕನೇ ರೈಲು

ನಮ್ಮ ಮೆಟ್ರೋ ಯೆಲ್ಲೋ ಲೈನ್​​ನಲ್ಲಿ ಪ್ರಸ್ತುತ ಕೇವಲ ಮೂರು ರೈಲುಗಳು ಮಾತ್ರ ಸಂಚಾರ ಮಾಡುತ್ತಿದ್ದು, ಪ್ರಯಾಣಿಕರು 25 ನಿಮಿಷ ಕಾಯಬೇಕಿದೆ. ಇದೀಗ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್​ಸಿಎಲ್ ಶುಭ ಸುದ್ದಿ ನೀಡಿದೆ. ಈ ಮಾರ್ಗದಲ್ಲಿ ನಾಲ್ಕನೇ ರೈಲು ಸೆಪ್ಟೆಂಬರ್ ಎರಡನೇ ವಾರದಲ್ಲಿ ಟ್ರ್ಯಾಕಿಗಿಳಿಯಲಿದೆ. ಈ ಬಗ್ಗೆ ಪ್ರಯಾಣಿಕರು ಸಂತಸ ವ್ಯಕ್ತಪಡಿಸುತ್ತಿದ್ದಾರೆ‌.

Yellow Line Metro: ಮುಂದಿನ ವಾರದಿಂದ ಟ್ರ್ಯಾಕಿಗಿಳಿಯಲಿದೆ ನಮ್ಮ ಮೆಟ್ರೋ ಯೆಲ್ಲೋ ಲೈನ್ ನಾಲ್ಕನೇ ರೈಲು
ನಮ್ಮ ಮೆಟ್ರೋ ಯೆಲ್ಲೋ ಲೈನ್ (ಸಾಂದರ್ಭಿಕ ಚಿತ್ರ)
Updated By: Ganapathi Sharma

Updated on: Sep 02, 2025 | 7:37 AM

ಬೆಂಗಳೂರು, ಸೆಪ್ಟೆಂಬರ್ 2: ಆರ್.ವಿ ರೋಡ್​ನಿಂದ ಬೊಮ್ಮಸಂದ್ರ ವರೆಗಿನ ನಮ್ಮ ಮೆಟ್ರೋ ಯೆಲ್ಲೋ ಲೈನ್​ಗೆ (Namma Metro Yellow Line) ಆಗಸ್ಟ್ 10 ರಂದು ಚಾಲನೆ ದೊರೆತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದಲೇ ಮೆಟ್ರೋ ಮಾರ್ಗ ಲೋಕಾರ್ಪಣೆಯಾಗಿದೆ. ಆದರೆ, ಈ ಮಾರ್ಗದಲ್ಲಿ ಸಂಚಾರ ಮಾಡಲು ನಮ್ಮ ಮೆಟ್ರೋ ಬಳಿ ಕೇವಲ ಮೂರು ರೈಲುಗಳಿದ್ದು, ಇದರಿಂದ 25 ನಿಮಿಷಕ್ಕೊಂದ ರಂತೆ ರೈಲು ಸಂಚಾರ ಮಾಡಲಾಗುತ್ತಿದೆ. ಇದರಿಂದ ಪ್ರಯಾಣಿಕರು ಹೆಚ್ಚು ಹೊತ್ತು ಕಾಯಬೇಕಾಗುತ್ತದೆ. ಈಗಾಗಲೇ ಕಲ್ಕತ್ತಾದಿಂದ ನಾಲ್ಕನೇ ರೈಲಿನ ಸೆಟ್ ಬಿಎಂಆರ್ಸಿಎಲ್ (BMRCL) ಡಿಪೋಗೆ ಬಂದಿದ್ದು, ನಾಲ್ಕನೇ ರೈಲಿನ ಟ್ರಯಲ್ ರನ್ ಕೂಡ ಯಶ್ವಸಿಯಾಗಿದೆ. ಅಕ್ಟೋಬರ್​ನಲ್ಲಿ ಕೋಲ್ಕತ್ತಾದಿಂದ ನಮ್ಮ ಮೆಟ್ರೋಗೆ ಐದನೇ ರೈಲು ಕೂಡ ಆಗಮಿಸಲಿದೆ ಎನ್ನಲಾಗಿದೆ. ನಂತರ ಪ್ರತಿ ತಿಂಗಳು ಒಂದು ಮೆಟ್ರೋ ರೈಲು ಸೆಟ್ ನಮ್ಮ ಮೆಟ್ರೋ ಗೆ ಸೇರ್ಪಡೆಯಾಗಲಿವೆ. ಹೊಸ ರೈಲಿನ ಆಗಮನದಿಂದ 15 ರಿಂದ 20 ನಿಮಿಷಕ್ಕೊಂದು ರೈಲು ಸಂಚಾರ ಮಾಡಲಿದೆ.

ಆಗಸ್ಟ್ 11 ರಿಂದ ನಮ್ಮ ಮೆಟ್ರೋದ ಮೂರು ಮಾರ್ಗದಲ್ಲೂ 10 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಪ್ರತಿ ದಿನ ಪ್ರಯಾಣ ಮಾಡುತ್ತಿದ್ದಾರೆ. ಆದರೆ ಯೆಲ್ಲೋ ಲೈನ್​ನಲ್ಲಿ ಕೇವಲ ಮೂರು ರೈಲುಗಳಿರುವ ಕಾರಣದಿಂದಾಗಿ, ಪ್ರಯಾಣಿಕರಿಗೆ ಅನಾನುಕೂಲವಾಗುತ್ತಿದೆ. 2026ರ ಮಾರ್ಚ್ ವೇಳೆಗೆ ಯೆಲ್ಲೋ ಲೈನ್​​ಗೆ ಎಲ್ಲಾ ರೈಲುಗಳು ಆಗಮಿಸಲಿದ್ದು, ಗ್ರೀನ್ ಮತ್ತು ಪರ್ಪಲ್ ಲೈನ್ ರೀತಿಯಲ್ಲಿ ಐದು ನಿಮಿಷಕ್ಕೊಂದರಂತೆ ರೈಲುಗಳು ಸಂಚಾರ ಮಾಡಲಿವೆ.

25 ನಿಮಿಷಕ್ಕೊಂದರಂತೆ ರೈಲು ಸಂಚಾರ ಮಾಡುತ್ತಿರುವುದರಿಂದ ತುಂಬಾ ಸಮಸ್ಯೆ ಆಗುತ್ತಿದೆ. ಹೊಸ ರೈಲು ಆಗಮನದಿಂದ ತುಂಬಾ ಸಹಾಯ ಆಗಲಿದೆ ಎಂದು ಪ್ರಯಾಣಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ
ಬೆಂಗಳೂರಿನಲ್ಲೇ ಅತಿ ಉದ್ದದ ಮೆಟ್ರೋ ಮಾರ್ಗವಾಗಲಿದೆ ಪಿಂಕ್ ಲೈನ್!
ಜೆಪಿ ನಗರ ಡಬಲ್ ಡೆಕ್ಕರ್ ಫ್ಲೈಓವರ್ ರ್ಯಾಂಪ್​ಗೆ ವಿರೋಧ! ಕಾರಣ ಇಲ್ಲಿದೆ
ಹೊಸೂರು ರಸ್ತೆ ಟ್ರಾಫಿಕ್​ಗೆ ಬಿಗ್ ರಿಲೀಫ್ ನೀಡಿದ ಮೆಟ್ರೋ ಯೆಲ್ಲೋ ಲೈನ್!
ಆರೆಂಜ್ ಲೈನ್​ಗಾಗಿ 6500 ಮರ ಕಡಿಯಲು ಮುಂದಾದ ನಮ್ಮ ಮೆಟ್ರೋ

ಇದನ್ನೂ ಓದಿ: ಬೆಂಗಳೂರಿನಲ್ಲೇ ಅತಿ ಉದ್ದದ ಮೆಟ್ರೋ ಮಾರ್ಗವಾಗಲಿದೆ ಪಿಂಕ್ ಲೈನ್, ಬಿಎಂಆರ್​ಸಿಎಲ್ ಬಿಗ್ ಅಪ್​ಡೇಟ್

ಒಟ್ಟಿನಲ್ಲಿ, ಯೆಲ್ಲೋ ಲೈನ್ ಮೆಟ್ರೋ ರೈಲು ಸಾವಿರಾರು ಐಟಿಬಿಟಿ ಕಂಪನಿಗಳಿರುವ ಪ್ರದೇಶಗಳಲ್ಲಿ ಹಾದುಹೋಗುತ್ತಿದ್ದು, ಲಕ್ಷಾಂತರ ಜನರಿಗೆ ಅನುಕೂಲ ಆಗಲಿದೆ. ಸದ್ಯ ಮೂರು ರೈಲು ಅಷ್ಟೇ ಸಂಚರಿಸುತ್ತಿರುವುದರಿಂದ ಜನಜಂಗುಳಿ ಹೆಚ್ಚಾಗಿ ನಿಲ್ಲಲ್ಲೂ ಆಗದೆ, ಕೂರಲು ಆಗದೆ ಪ್ರಯಾಣಿಕರು ಸಂಕಷ್ಟ ಎದುರಿಸುತ್ತಿದ್ದಾರೆ. ಹೊಸ ರೈಲು ಸಂಚಾರದಿಂದ ದೊಡ್ಡ ಮಟ್ಟದಲ್ಲಿ ಸಹಾಯವಾಗುವುದರಲ್ಲಿ ಅನುಮಾನವಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ