ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ನೇರಳೆ ಮಾರ್ಗದ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
ಬೆಂಗಳೂರಿನ ಕೆಂಗೇರಿ-ಚಲ್ಲಘಟ್ಟ ಹಾಗೂ ಬೈಯಪ್ಪನಹಳ್ಳಿ- ಕೃಷ್ಣರಾಜಪುರ ಮೆಟ್ರೋ ಉದ್ಘಾಟನೆಗೆ ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಈ ಬಗ್ಗೆ ಬಿಎಂಆರ್‌ಸಿಎಲ್ ಪ್ರಕಟಣೆ ಹೊರಡಿಸಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ ನೋಡಿ.
ಬೆಂಗಳೂರು, (ಆಗಸ್ಟ್ 17): ಬೆಂಗಳೂರಿನ ನಮ್ಮ ಮೆಟ್ರೋ (Namma Metro) ನೇರಳೆ ಮಾರ್ಗ ವಿಸ್ತರಣೆಯ ಕಾಮಗಾರಿ ನಡೆದಿದೆ. ಕೆಂಗೇರಿ-ಚಲ್ಲಘಟ್ಟ ಹಾಗೂ ಬೈಯಪ್ಪನಹಳ್ಳಿ- ಕೃಷ್ಣರಾಜಪುರ ಮೆಟ್ರೋ ಉದ್ಘಾಟನೆಗೆ ಸಿದ್ಧವಾಗಿದೆ. ಹೀಗಾಗಿ ಸಿಗ್ನಲಿಂಗ್ ಪರೀಕ್ಷೆ ನಡೆಸಲಾಗುತ್ತಿದೆ. ಇದರಿಂದ ಈ ಮಾರ್ಗದಲ್ಲಿ ಇಂದಿನಿಂದ ಅಂದರೆ ಆಗಸ್ಟ್ 17ರಿಂದ ಆ.29ರವರೆಗೆ ನಮ್ಮ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕೋ-ಆಪರೇಷನ್ ಲಿಮಿಟೆಡ್ (BMRLC) ತಿಳಿಸಿದೆ. ಇನ್ನು ಗುರುವಾರ (ಆ.17) ಕೆಂಗೇರಿ ಮತ್ತು ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಬೆಳಗ್ಗೆ 5 ರಿಂದ ರಾತ್ರಿ 11 ಗಂಟೆಯವರೆಗೆ ರೈಲು ಸೇವೆಗಳು ಲಭ್ಯವಿರುತ್ತವೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.
ಬೈಯಪ್ಪನಹಳ್ಳಿ-ಮೈಸೂರು ರಸ್ತೆ ಮತ್ತು ಮೈಸೂರು ರಸ್ತೆ- ಬೈಯಪ್ಪನ ಹಳ್ಳಿ ನಡುವೆ ಮೆಟ್ರೋ ರೈಲು ಸಂಚಾರ ಎಂದಿನಂತೆ ಇರಲಿದೆ. ಅದೇ ರೀತಿ, ಆಗಸ್ಟ್ 23 ಮತ್ತು ಆ. 24ರಂದು ಬೆಳಗ್ಗೆ 5 ಗಂಟೆಯಿಂದ ಬೆಳಗ್ಗೆ 7 ಗಂಟೆ ವರೆಗೆ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ. ಬೆಳಗ್ಗೆ 7 ಗಂಟೆ ನಂತರ ಎಂದಿನಂತೆ ಮೆಟ್ರೋ ಸಂಚಾರ ಇರಲಿದೆ.
ಇನ್ನು ಆಗಸ್ಟ್ 20 ರಿಂದ 29ರ ತನಕ ನೇರಳೆ ಮಾರ್ಗದಲ್ಲಿ ಸ್ವಾಮಿ ವಿವೇಕಾನಂದ ರಸ್ತೆ- ಬೈಯಪ್ಪನಹಳ್ಳಿ, ಕೆ.ಆರ್.ಪುರ, ವೈಟ್‍ಫೀಲ್ಡ್ (ಕಾಡುಗೋಡಿ) ನಡುವೆ ಬೆಳಗ್ಗೆ 5 ರಿಂದ 7 ರ ತನಕ ರೈಲು ಸಂಚಾರ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್ ಪ್ರಕರಣಯಣೆಯಲ್ಲಿ ತಿಳಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:37 am, Thu, 17 August 23