AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಎನ್‌ಸಿಬಿ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ; ಬರೋಬ್ಬರಿ 50 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ!

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್‌ಸಿಬಿ ಅಧಿಕಾರಿಗಳು ಬರೋಬ್ಬರಿ 50 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ವರ್ಷ ಎನ್‌ಸಿಬಿಯಿಂದ 18 ಪ್ರಕರಣಗಳಲ್ಲಿ 45 ಆರೋಪಿಗಳನ್ನ ಬಂಧಿಸುವ ಮೂಲಕ 100 ಕೋಟಿ ಮೌಲ್ಯದ ಮಾದಕವಸ್ತು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು: ಎನ್‌ಸಿಬಿ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ; ಬರೋಬ್ಬರಿ 50 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ!
ಅಧಿಕಾರಿಗಳು ಜಪ್ತಿ ಮಾಡಿರುವ ಡ್ರಗ್ಸ್
ಗಂಗಾಧರ​ ಬ. ಸಾಬೋಜಿ
|

Updated on: Oct 12, 2025 | 10:12 PM

Share

ಬೆಂಗಳೂರು, ಅಕ್ಟೋಬರ್​ 12: ಬೆಂಗಳೂರು ವಲಯದ ಎನ್‌ಸಿಬಿ (NCB) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಬರೋಬ್ಬರಿ 50 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ (Drug) ಜಪ್ತಿ ಮಾಡಿದ್ದಾರೆ. ಜೊತೆಗೆ ಮೂವರು ಪ್ರಮುಖ ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಸದ್ಯ ಬಂಧಿತರಿಂದ ಒಟ್ಟು 45 ಕೆಜಿ ಹೈಡ್ರೋಗಾಂಜಾ, 6 ಕೆಜಿ ಸೈಲೋಸಿಬಿನ್ ಅಣಬೆ ಸೀಜ್ ಮಾಡಲಾಗಿದೆ. ಥೈಲ್ಯಾಂಡ್‌ನಿಂದ ಡ್ರಗ್ಸ್‌ ಸಾಗಾಟ ಬಗ್ಗೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ. ಮಾಹಿತಿಯಂತೆ ಅ.9ರಂದು ಕೊಲಂಬೋದಿಂದ ಬರುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಕೇವಲ ನಾಲ್ಕು ನಿಮಿಷದಲ್ಲಿ 24 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆ ಮಾಡಿದ ಶ್ವಾನಗಳು!

ಈ ಇಬ್ಬರಿಂದ 31 ಕೆಜಿ ಹೈಡ್ರೋಗಾಂಜಾ, 4 ಕೆಜಿ ಸೈಲೋಸಿಬಿನ್ ಅಣಬೆ ಜಪ್ತಿ ಮಾಡಲಾಗಿದ್ದು, ಇಬ್ಬರ ವಿಚಾರಣೆ ವೇಳೆ ಮುಂದಿನ ವಿಮಾನದಲ್ಲಿ ಹ್ಯಾಂಡ್ಲರ್ ಶ್ರೀಲಂಕಾದಿಂದ ಬರುವ ಮಾಹಿತಿ ಸಿಕ್ಕಿತ್ತು. ಅದರಂತೆ ಕಾದು ಇನ್ನೋರ್ವ ಶ್ರೀಲಂಕಾ ಪ್ರಜೆಯನ್ನು ಕೂಡ ಎನ್​​ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಶ್ರೀಲಂಕಾದ ಹ್ಯಾಂಡ್ಲರ್​ನಿಂದ ತಂದಿದ್ದ 14 ಕೆ.ಜಿ ಹೈಡ್ರೋಗಾಂಜಾ, 2 ಕೆಜಿ ಅಣಬೆ, 250 ಫುಡ್ ಟಿನ್​ಗಳಲ್ಲಿ ತಂದಿದ್ದ ಡ್ರಗ್ಸ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

100 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡ ಎನ್‌ಸಿಬಿ 

ಬೆಂಗಳೂರು ಎನ್‌ಸಿಬಿ ಘಟಕವು ಈ ವರ್ಷದಲ್ಲಿ ಇದುವರೆಗೆ ಒಟ್ಟು 18 ಪ್ರಕರಣಗಳಲ್ಲಿ ಸುಮಾರು 100 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ. 18 ಪ್ರಕರಣಗಳಲ್ಲಿ 45 ಆರೋಪಿಗಳನ್ನ ಎನ್​ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕೇರಳ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರದಲ್ಲಿ ಗಾಂಜಾ ದಂಧೆ ನಡೆಸುತ್ತಿದ್ದರು ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ.

23 ಕೋಟಿ ರೂ. ಮೌಲ್ಯದ ಡ್ರಗ್ ಸೀಜ್: 6 ಮಂದಿ ಅರೆಸ್ಟ್​​

ಇತ್ತೀಚೆಗೆ ಸಿಸಿಬಿ ಹಾಗೂ ಸಿಟಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಡ್ರಗ್ ಪೆಡ್ಲಿಂಗ್​​ನಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಪ್ರಜೆಗಳು ಸೇರಿ 6 ಜನರನ್ನು ಬಂಧಿಸಿದ್ದರು. ಕೆಜಿ ನಗರ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್ ನಲ್ಲಿ ತೊಡಗಿ ಹೆಚ್ಚಿನ ಹಣ ಗಳಿಸುತ್ತಿದ್ದ ರಶೀದ್ ಎಂಬಾತನನ್ನು ಬಂಧಿಸಿ ಏಳು ಕೆಜಿ ಹೈಡ್ರೋ ಗಾಂಜಾ ಸೀಜ್ ಮಾಡಿದ್ದರು.

ಇದನ್ನೂ ಓದಿ: ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ ಮಾರಾಟ! ನೈಜೀರಿಯಾ ಪ್ರಜೆಗಳಿಬ್ಬರು ಪೊಲೀಸ್ ವಶಕ್ಕೆ

ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ಮಾರ್ವ ಎಸ್ಸೆಂ ಒಸ್ಸಾಂ, ಜಾರ್ಗುನ್ ಸಲಾಹೆಲ್ದಿನ್ ಎಂಬ ವಿದೇಶಿ ಪ್ರಜೆಗಳನ್ನು ಬಂಧಿಸಿ 12 ಕೋಟಿ ರೂ. ಮೌಲ್ಯಸ 4.8 ಕೆ.ಜಿ ಎಂಡಿಎಂಎ ಕ್ರಿಸ್ಟಲ್ ಸೀಜ್ ಮಾಡಲಾಗಿತ್ತು.

ವರದಿ: ಪ್ರದೀಪ್​ ಚಿಕ್ಕಾಟಿ 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.