AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಉದ್ಯಮಿ ಮನೆಯಲ್ಲಿ ನೇಪಾಳ ಮೂಲದ ದಂಪತಿ ಸೇರಿ ಐವರಿಂದ ಕಳ್ಳತನ: ಕಾರಿನಲ್ಲಿ ಪರಾರಿ

ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ನೇಪಾಳ ಮೂಲದ ದಂಪತಿ ಸೇರಿ ಐವರು ಉದ್ಯಮಿಯ ಮನೆಯಿಂದ 10 ಲಕ್ಷ ರೂ ನಗದು, 2 ಕೆಜಿ ಚಿನ್ನ ಮತ್ತು ಲೈಸೆನ್ಸ್ ಪಿಸ್ತೂಲ್ ದೋಚಿ ಪರಾರಿಯಾಗಿದ್ದಾರೆ. ಮೂರು ತಿಂಗಳ ಹಿಂದೆ ಸೆಕ್ಯೂರಿಟಿ ಕೆಲಸಕ್ಕೆ ಸೇರಿದ್ದ ದಂಪತಿಯೇ ಈ ಕಳ್ಳತನವೆಸಗಿದ್ದಾರೆ. ಮನೆಯ ಮಾಲೀಕರು ತಿರುಪತಿಗೆ ತೆರಳಿದ್ದ ಸಮಯದಲ್ಲಿ ಈ ಕೃತ್ಯ ನಡೆದಿದೆ.

ಬೆಂಗಳೂರಿನ ಉದ್ಯಮಿ ಮನೆಯಲ್ಲಿ ನೇಪಾಳ ಮೂಲದ ದಂಪತಿ ಸೇರಿ ಐವರಿಂದ ಕಳ್ಳತನ: ಕಾರಿನಲ್ಲಿ ಪರಾರಿ
ನೇಪಾಳ ಮೂಲದ ದಂಪತಿ
ಗಂಗಾಧರ​ ಬ. ಸಾಬೋಜಿ
|

Updated on: Jun 01, 2025 | 11:38 AM

Share

ಬೆಂಗಳೂರು, ಜೂನ್​ 01: ಅರಿಹಂತ್ ಜ್ಯುವೆಲ್ಲರ್ಸ್ ಮಾಲೀಕನ ಮನೆ ಕಳ್ಳತನ ಕೇಸ್​​ ಇಡೀ ಬೆಂಗಳೂರನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣದಲ್ಲಿ ನೇಪಾಳಿ (Nepali) ಕಳ್ಳರು ತಮ್ಮ ಕೈಚಳಕ ತೋರಿಸಿದ್ದರು. ಇದೀಗ ಮತ್ತೆ ನಗರದಲ್ಲಿ ನೇಪಾಳಿ ದಂಪತಿಯಿಂದ ಮನೆಗಳ್ಳತನವೊಂದು (robbery) ನಡೆದಿದೆ. ಉದ್ಯಮಿ ಮನೆಯಲ್ಲಿದ್ದ ನಗದು, ಚಿನ್ನಾಭರಣ, ಲೈಸೆನ್ಸ್ ಪಿಸ್ತೂಲ್, 2 ಕೆಜಿ ಚಿನ್ನ ಮತ್ತು 10 ಲಕ್ಷ ರೂ ನಗದು ಕಳ್ಳತನ ದೋಚಿ ಪರಾರಿ ಆಗಿದ್ದಾರೆ. ಹೆಚ್ಎಎಲ್​ನ ಶಾಸ್ತ್ರಿನಗರದಲ್ಲಿರುವ ಉದ್ಯಮಿ ಮನೆಯಲ್ಲಿ ಕಳ್ಳತನ ನಡೆದಿದೆ.

3 ತಿಂಗಳ ಹಿಂದೆ ನೇಪಾಳಿ ಮೂಲದ ರಾಜ್ ಮತ್ತು ದೀಪಾ ದಂಪತಿ ಸೆಕ್ಯೂರಿಟಿ ಕೆಲಸಕ್ಕೆ ಸೇರಿದ್ದರು. ಮೇ 27ರಂದು ರಮೇಶ್ ಕುಟುಂಬ ಸಮೇತ ತಿರುಪತಿಗೆ ಹೋಗಿದ್ದರು. ನಂಬಿಕೆ ಗಳಿಸಿದ್ದ ನೇಪಾಳಿ ದಂಪತಿ ಬಿಟ್ಟು ತಿರುಪತಿಗೆ ತೆರಳಿದ್ದರು. ಇದೇ ಒಳ್ಳೆಯ ಅವಕಾಶವೆಂದು ನೇಪಾಳಿ ದಂಪತಿ ಸೇರಿ ಐದು ಜನರಿಂದ ಮನೆಯ ಪ್ರಮುಖ ಮತ್ತು ಬೆಡ್ ರೂಂ ಬಾಗಿಲು ಮುರಿದು ಕಳ್ಳತನ ಮಾಡಿದ ಲಕ್ಷಾಂತರ ರೂ ಸೇರಿದಂತೆ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಅಂಧರು ಬಟನ್ ಪ್ರೆಸ್ ಮಾಡಿದ್ರೆ ಸಾಕು, ಅವರಿದ್ದಲ್ಲಿಗೆ ಬರುತ್ತೆ ಬಿಎಂಟಿಸಿ ಬಸ್! ಬಂದಿದೆ ಹೊಸ ಡಿವೈಸ್

ಇದನ್ನೂ ಓದಿ
Image
ಆರ್​ಸಿಬಿ ಫೈನಲ್​ಗೇರಿದ ಖುಷಿಯಲ್ಲಿ ಪೆಟ್ರೋಲ್ ಚೀಲ ಸಿಡಿಸಿದ 8 ಯುವಕರ ಬಂಧನ
Image
ಮಳೆ ಹಾನಿ ಪ್ರದೇಶಗಳ ಮೇಲೆ ನಿಗಾ ಇಡಲು ಡ್ರೋನ್ ಮೊರೆ ಹೋದ ಬಿಬಿಎಂಪಿ!
Image
ಮಂಡ್ಯದಲ್ಲಿ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್​​ ಇಲಾಖೆ: ಡಿಜಿಪಿ ಸೂಚನೆ
Image
ಅಂಧರು ಬಟನ್ ಪ್ರೆಸ್ ಮಾಡಿದ್ರೆ ಸಾಕು, ಇದ್ದಲ್ಲಿಗೆ ಬರುತ್ತೆ ಬಿಎಂಟಿಸಿ ಬಸ್

ಮಾಮೂಲಿಯಂತೆ ಕಾರ್ ಬುಕ್‌ ಮಾಡಿದ್ದ ಕಳ್ಳರು ನಾಲ್ಕು ಜನ ಮನೆ ಬಳಿ ಬಂದ ಕಾರಿನಲ್ಲಿ ಚಿನ್ನಭರಣ, ಹಣದ ಬ್ಯಾಗ್​ಗಳನ್ನು ತುಂಬಿಕೊಂಡು ಹೋಗಿದ್ದಾರೆ. ಕಾರಿನ ಚಾಲಕನಿಗೂ ಕಳ್ಳತನಕ್ಕೂ ಯಾವುದೇ  ಸಂಬಂಧವಿಲ್ಲ.

ಇತ್ತ ಮೇ 28ರ ಬೆಳಗಿನ ಜಾವ ರಮೇಶ್, ಮೊಬೈಲ್​ನಲ್ಲಿ ಮನೆಯ ಸಿಸಿಟಿವಿ ಪರಿಶೀಲಿಸಿದ್ದು, ಆಫ್​ ಆಗಿತ್ತು. ಕರೆಂಟ್ ಹೋಗಿ ಸಿಸಿಟಿವಿ ಆಫ್ ಆಗಿರಬಹುದು ಅಂದುಕೊಂಡಿದ್ದಾರೆ. ಬಳಿಕ ಪಕ್ಕದ ಮನೆಯವರು ಕರೆ ಮಾಡಿ ಮನೆಯಲ್ಲಿ ಯಾರೂ ಇಲ್ಲ ಎಂದಿದ್ದಾರೆ. ನಂತರ ತಮ್ಮ ಸ್ನೇಹಿತರಿಗೆ ಮನೆ ಬಳಿ ಹೋಗಲು ತಿಳಿಸಿದ್ದ ರಮೇಶ್, ಈ ವೇಳೆ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬೆಂಗಳೂರಿನ ಮಲ್ಲಸಂದ್ರ ಬಳಿ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ, ಕ್ಯಾಮರಾ ಅಳವಡಿಕೆ

ಸದ್ಯ ಹೆಚ್​ಎಎಲ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ.

ವರದಿ: ಪ್ರದೀಪ್​ ಚಿಕ್ಕಾಟಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್