ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ, ಬೆಂಗಳೂರಿನ ಎಲ್ಲಾ ಕ್ಯಾಬ್​ಗಳಲ್ಲಿ 112 ತುರ್ತು ಸಹಾಯವಾಣಿ ಸ್ಟಿಕ್ಕರ್​ ಅಂಟಿಸಲು ಸೂಚನೆ

Bangalore Cabs KSP App: ಬೆಂಗಳೂರಿನಲ್ಲಿ ಕ್ಯಾಬ್ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಪೊಲೀಸರು ಹೊಸ ಸುರಕ್ಷತಾ ಕ್ರಮವನ್ನು ಪರಿಚಯಿಸಿದ್ದಾರೆ. ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವ ಕ್ಯಾಬ್​ಗಳಲ್ಲಿ 112 ತುರ್ತು ಸಹಾಯವಾಣಿ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಮೊಬೈಲ್ ಅಪ್ಲಿಕೇಷನ್ ಬಗ್ಗೆ ಮಾಹಿತಿಯನ್ನು ಹೊಂದಿರುವ ಸ್ಟಿಕ್ಕರ್​ಗಳನ್ನು ಅಂಟಿಸಬೇಕೆಂದು ಪೊಲೀಸರು ಸೂಚನೆ ನೀಡಿದ್ದಾರೆ. ಸಾರ್ವಜನಿಕರ ಸುರಕ್ಷತೆಯನ್ನು ಸುಧಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಮಹಿಳಾ ಪ್ರಯಾಣಿಕರ ಮೇಲೆ ಹೆಚ್ಚಿನ ಗಮನಹರಿಸಲಾಗಿದೆ.

ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ, ಬೆಂಗಳೂರಿನ ಎಲ್ಲಾ ಕ್ಯಾಬ್​ಗಳಲ್ಲಿ 112 ತುರ್ತು ಸಹಾಯವಾಣಿ ಸ್ಟಿಕ್ಕರ್​ ಅಂಟಿಸಲು ಸೂಚನೆ
ಬೆಂಗಳೂರು ಟ್ರಾಫಿಕ್
Image Credit source: PTI

Updated on: Nov 20, 2025 | 10:24 AM

ಬೆಂಗಳೂರು, ನವೆಂಬರ್ 20: ಬೆಂಗಳೂರಿನ ಕ್ಯಾಬ್(Cab)​ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ಸಾಕಷ್ಟು ದೂರುಗಳು ಕೇಳಿಬರುತ್ತಿವೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಪೊಲೀಸರು ಹೊಸ ಸುರಕ್ಷತಾ ಕ್ರಮವನ್ನು ಪರಿಚಯಿಸಿದ್ದಾರೆ. ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವ ಕ್ಯಾಬ್​ಗಳಲ್ಲಿ 112 ತುರ್ತು ಸಹಾಯವಾಣಿ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಮೊಬೈಲ್ ಅಪ್ಲಿಕೇಷನ್ ಬಗ್ಗೆ ಮಾಹಿತಿಯನ್ನು ಹೊಂದಿರುವ ಸ್ಟಿಕ್ಕರ್​ಗಳನ್ನು ಅಂಟಿಸಬೇಕೆಂದು ಪೊಲೀಸರು ಸೂಚನೆ ನೀಡಿದ್ದಾರೆ.

ಸಾರ್ವಜನಿಕರ ಸುರಕ್ಷತೆಯನ್ನು ಸುಧಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಮಹಿಳಾ ಪ್ರಯಾಣಿಕರ ಮೇಲೆ ಹೆಚ್ಚಿನ ಗಮನಹರಿಸಲಾಗಿದೆ. ಡೆಕ್ಕನ್ ಹೆರಾಲ್ಡ್​ ಈ ಕುರಿತು ವರದಿ ಪ್ರಕಟ ಮಾಡಿದ್ದು, ಸ್ಪಷ್ಟವಾಗಿ ಗೋಚರಿಸುವ ಸಹಾಯವಾಣಿ ವಿವರಗಳು ಅಪರಾಧವನ್ನು ತಡೆಯಲು ಮತ್ತು ಸಂಚಾರ ನಿರ್ವಹಣೆಗೆ ಸಹಾಯ ಮಾಡಬಹುದು ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ತಿಳಿಸಿದ್ದಾರೆ.

ವರದಿಯ ಪ್ರಕಾರ, ಕ್ಯಾಬ್ ನಿರ್ವಾಹಕರು ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಮುದ್ರಿತವಾದ ಸ್ಟಿಕ್ಕರ್​ಗಳನ್ನು ತಮ್ಮ ವಾಹನಗಳ ಎರಡು ಬದಿಗಳಲ್ಲಿ ಅಂಟಿಸುವಂತೆ ಸೂಚನೆ ನೀಡಿದ್ದಾರೆ. ಹೊಸ ಆದೇಶದಲ್ಲಿ 12,000 ಕ್ಕೂ ಹೆಚ್ಚು ಕ್ಯಾಬ್‌ಗಳನ್ನು ಈಗಾಗಲೇ ಶಾರ್ಟ್​ ಲಿಸ್ಟ್​ ಮಾಡಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಉಳಿದ ಎಲ್ಲಾ ವಾಹನಗಳು ಅನುಮೋದಿತ ಸ್ಟಿಕ್ಕರ್‌ಗಳನ್ನು ಅಳವಡಿಸಲು ದೃಢವಾದ ಗಡುವನ್ನು ಸಹ ನಿಗದಿಪಡಿಸಲಾಗಿದೆ.

ಮತ್ತಷ್ಟು ಓದಿ: ಬೆಂಗಳೂರು: ಟೋಲ್ ಮಾರ್ಗ ತಪ್ಪಿಸಿದ್ದಕ್ಕೆ ಪ್ರಶ್ನಿಸಿದ ವಿದ್ಯಾರ್ಥಿನಿ ಮೇಲೆ ಹಲ್ಲೆ ಮಾಡಿದ ಕ್ಯಾಬ್ ಚಾಲಕ

ಪೊಲೀಸರು ನೀಡಿದ ಟೆಂಪ್ಲೇಟ್ 112 ಸಹಾಯವಾಣಿ ಸಂಖ್ಯೆಯೊಂದಿಗೆ ಬಳಕೆದಾರರನ್ನು ನೇರವಾಗಿ ಕೆಎಸ್​ಪಿ ಮೊಬೈಲ್ ಅಪ್ಲಿಕೇಶನ್‌ಗೆ ಸಂಪರ್ಕಿಸುವ ಕ್ಯೂಆರ್ ಕೋಡ್ ಅನ್ನು ಒಳಗೊಂಡಿರುತ್ತದೆ. ಅಧಿಕಾರಿಗಳ ಪ್ರಕಾರ, ಇದರಿಂದ ಒಂಟಿಯಾಗಿ ಅಥವಾ ದೂರದ ಸ್ಥಳಗಳಿಗೆ ಪ್ರಯಾಣಿಸುವವರಿಗೆ ಹೆಚ್ಚು ಅನುಕೂಲವಾಗಲಿದೆ. ಈ ತುರ್ತು ಸಹಾಯವಾಗಿ ಪೊಲೀಸ್ ಕಮಿಷನರ್ ಕಚೇರಿಯಿಂದ ಕಾರ್ಯ ನಿರ್ವಹಿಸುತ್ತಿದೆ.

112 ಸಂಖ್ಯೆಗೆ ಕರೆ ಮಾಡಿದರೆ ಹದಿನೈದೇ ನಿಮಿಷಗಳಲ್ಲಿ ಪೊಲೀಸರು ನೀವು ಕೊಟ್ಟ ವಿಳಾಸಕ್ಕೆ ಹಾಜರಾಗಿ ಸಮಸ್ಯೆಗೆ ಪರಿಹಾರವನ್ನು ಕೊಡುವ ಕೆಲಸವನ್ನು ಮಾಡುತ್ತಾರೆ. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ನಿರ್ಭಯಾ ನಿಧಿ ಯೋಜನೆಯಡಿ ಏಕ ಸಂಖ್ಯೆಯ ಬಳಕೆಯನ್ನು ಜಾರಿಗೆ ತರಲಾಗಿದೆ. ಮಹಿಳೆಯರು ರಾತ್ರಿ ವೇಳೆ ಒಬ್ಬರೇ ಓಡಾಟವನ್ನು ನಡೆಸಿದಾಗ ಯಾರಾದರೂ ಕೆಟ್ಟದಾಗಿ ನಡೆದುಕೊಂಡರೆ ಅವರ ಸಹಾಯಕ್ಕೆ ಧಾವಿಸಲು ಈ ಸಂಖ್ಯೆಯನ್ನು ಪರಿಚಯಿಸಲಾಗಿದೆ.

112ಗೆ ಕರೆ ಮಾಡಿದಾಗ ಮೊದಲು ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ಪೊಲೀಸ್ ಠಾಣೆ ಯಾವ ವ್ಯಾಪ್ತಿಗೆ ಬರುತ್ತದೆ ಎಂಬುದನ್ನು ಖಾತರಿ ಮಾಡಬೇಕು. ನಂತರ ಎಲ್ಲಿಂದ ಮಾತನಾಡುತ್ತಿದ್ದೇವೆ ಏನು ಸಮಸ್ಯೆ ಆಗಿದೆ, ಪೋನ್ ನಂಬರ್ ಇತ್ಯಾದಿ ಮಾಹಿತಿ ನೀಡಬೇಕಾಗುತ್ತದೆ.

ಕೆಎಸ್​ಪಿ ಮೊಬೈಲ್ ಅಪ್ಲಿಕೇಷನ್ ಎಂದರೇನು?
ಕೆಎಸ್‌ಪಿ ಮೊಬೈಲ್ ಅಪ್ಲಿಕೇಶನ್ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಆ್ಯಪ್ ಆಗಿದ್ದು, ನಾಗರಿಕರು ಸುಲಭವಾಗಿ ಪೊಲೀಸ್ ಸೇವೆಗಳನ್ನು ಪಡೆಯಲು ಸಹಾಯ ಮಾಡುತ್ತದೆ. ಈ ಆ್ಯಪ್ ಬಳಸಿ ತುರ್ತು ಸಂದರ್ಭಗಳಲ್ಲಿ ಸಹಾಯಕ್ಕಾಗಿ SOS ಕಳುಹಿಸಬಹುದು, ಇ-ಲಾಸ್ಟ್ (ಕಳೆದುಹೋದ ವಸ್ತುಗಳ) ದೂರು ದಾಖಲಿಸಬಹುದು, ಟ್ರಾಫಿಕ್ ದಂಡ ಪಾವತಿಸಬಹುದು, ಮತ್ತು ಪೊಲೀಸ್ ಠಾಣೆಗಳ ವಿವರಗಳನ್ನು ಪಡೆಯಬಹುದು.

 

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us