ಬೆಂಗಳೂರು, ಡಿಸೆಂಬರ್ 22: 2024ಕ್ಕೆ ಗುಡ್ ಬೈ ಹೇಳಲು ಕೌಂಟ್ ಡೌನ್ ಶುರುವಾಗಿದೆ. ಬೆಂಗಳೂರು ಜನರು 2025 ಹೊಸ ವರ್ಷವನ್ನು (New Year) ಸ್ವಾಗತಿಸಲು ಕಾತುರರಾಗಿದ್ದಾರೆ. ಇತ್ತ ಬಿಬಿಎಂಪಿ (BBMP) ಹಾಗೂ ಪೊಲೀಸ್ ಇಲಾಖೆ (Police Department) ಹೊಸ ವರ್ಷಾಚರಣೆಯಲ್ಲಿ ಯಾವುದೇ ಅವಘಡ ಸಂಭವಿಸಿದಂತೆ ತಡೆಯಲು ಪ್ಲಾನ್ ನಡೆಸಿದೆ. ಈಗಾಗಲೇ ಜಂಟಿ ಸಭೆ ನಡೆಸಿರುವ ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸರು, ಹೊಸ ವರ್ಷಾಚರಣೆಗೆ ನಿಯಮಗಳನ್ನು ಸಿದ್ದಪಡಿಸಿದ್ದಾರೆ.
ಹೊಸ ವರ್ಷಾಚರಣೆಯ ಕೇಂದ್ರ ಬಿಂದುವಾಗಿರುವ ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್ ಗಳಲ್ಲಿ ಸಿಸಿಟಿವಿ ಕ್ಯಾಮರೆಗಳ ಸಂಖ್ಯೆಯನ್ನು ಹೆಚ್ಚಿಸಲು ಪೊಲೀಸ್ ಇಲಾಖೆ ಪಾಲಿಕೆಗೆ ಸೂಚನೆ ನೀಡಿದೆ. ಈ ಹಿಂದೆ ಕೇವಲ 200 ರಿಂದ 300 ಸಿಸಿಟಿವಿ ಕ್ಯಾಮೆರಾಗಳನ್ನು ಮಾತ್ರ ಅಳವಡಿಸಲಾಗಿತ್ತು. ಆದರೆ, ಈ ಬಾರೀ ಹೆಚ್ಚಿನ ಜನ ಸೇರುವ ನಿರೀಕ್ಷೆ ಇರುವುದರಿಂದ ಸುಮಾರು 800 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಪೊಲೀಸ್ ಇಲಾಖೆ ಬಿಬಿಎಂಪಿಗೆ ಸೂಚಿಸಿದೆ ಎಂದು ಮಾಹಿತಿ ಲಭ್ಯವಾಗಿದೆ. ಇದರ ಜೊತೆಗೆ ಇನ್ನೂ ಹಲವು ನಿಯಮಗಳನ್ನು ಜಾರಿ ಮಾಡಲು ತಯಾರಿ ನಡೆದಿದೆ.
ಇದನ್ನೂ ಓದಿ: New Year: ಕ್ರಿಸ್ಮಸ್, ಹೊಸ ವರ್ಷ ಪ್ರಯುಕ್ತ ರಾಜ್ಯದ ಈ ನಗರಗಳಿಗೆ ವಿಶೇಷ ರೈಲು
ನಗರದಲ್ಲಿನ ಕಸ ವಿಲೇವಾರಿ ಮಾಡುವುದು. ಬ್ಯಾರಿಕೇಟ್ ಅಳವಡಿಕೆಗೆ ಪೊಲೀಸ್ ಇಲಾಖೆ ಸೂಚಿಸಿದ ಜಾಗದಲ್ಲಿ ಲೈಟಿಂಗ್ ವ್ಯವಸ್ಥೆ ಮಾಡುವುದು. ಇನ್ನು, ಹೊಸ ವರ್ಷಾಚರಣೆಗೆ ಬಂದ ಜನರಲ್ಲಿ ಆರೋಗ್ಯ ಸಮಸ್ಯೆ ಕಂಡು ಬಂದರೇ, ಆರೋಗ್ಯ ತಪಾಸಣೆಗೆ ನಮ್ಮ ಸಿಬ್ಬಂದಿಗಳನ್ನು ನಿಯೋಜನೆ ಮಾಡುತ್ತೇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಒಟ್ಟಿನಲ್ಲಿ ಈ ಬಾರಿ ಹೊಸವರ್ಷ ಅಚರಣೆಗೆ ಯಾವುದೇ ಅಡೆತಡೆ ಅಗದಂತೆ ಪೊಲೀಸ್ ಇಲಾಖೆ ಹಾಗೂ ಬಿಬಿಎಂಪಿ ಸಹಭಾಗಿತ್ವದಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:34 am, Sun, 22 December 24