AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹೊಸ ವರ್ಷಾಚರಣೆಗೆ ಸಂಗ್ರಹಿಸಿಟ್ಟಿದ್ದ 6 ಕೋಟಿ ರೂ. ಮೌಲ್ಯದ ಕ್ವಿಂಟಾಲ್​ಗಟ್ಟಲೆ ಮಾದಕ ವಸ್ತು ಜಪ್ತಿ

ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದ ಮಾದಕ ವಸ್ತು ಜಾಲವನ್ನು ಪೊಲೀಸರು ಭೇದಿಸಿದ್ದಾರೆ. 6 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಮತ್ತು ಆರೋಪಿಗಳನ್ನು ಬಂಧಿಸಲಾಗಿದೆ. ಹೊಸ ವರ್ಷದ ಆಚರಣೆಗೆ ಗಾಂಜಾ ಸಾಗಿಸುತ್ತಿದ್ದ ಜಾಲವನ್ನು ಪತ್ತೆ ಹಚ್ಚಲಾಗಿದೆ. ಆರೋಪಿಗಳು ಒಡಿಶಾ ಮತ್ತು ಆಂಧ್ರಪ್ರದೇಶದಿಂದ ಗಾಂಜಾ ತಂದು ಬೆಂಗಳೂರು ಮತ್ತು ಕೇರಳದಲ್ಲಿ ಮಾರಾಟ ಮಾಡಲು ಯೋಜಿಸಿದ್ದರು. ಬಂಧಿತರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಹೊಸ ವರ್ಷಾಚರಣೆಗೆ ಸಂಗ್ರಹಿಸಿಟ್ಟಿದ್ದ 6 ಕೋಟಿ ರೂ. ಮೌಲ್ಯದ ಕ್ವಿಂಟಾಲ್​ಗಟ್ಟಲೆ ಮಾದಕ ವಸ್ತು ಜಪ್ತಿ
ಮಾದಕ ವಸ್ತು ಸಂಗ್ರಹಿಸಿದ್ದ ಆರೋಪಿಗಳ ಬಂಧನ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Nov 22, 2024 | 2:09 PM

Share

ಬೆಂಗಳೂರು, ನವೆಂಬರ್​ 22: ಬೆಂಗಳೂರು ಪೊಲೀಸರು (Bengaluru Police) ಮತ್ತು ಸಿಸಿಬಿ ಅಧಿಕಾರಿಗಳು (CCB) ಮಾದಕ ವಸ್ತು (Drugs) ಸಾಗಟ ಜಾಲ ಪತ್ತೆ ಹಚ್ಚಿದ್ದಾರೆ. ಪ್ರತ್ಯೇಕ ಪ್ರಕರಣದಲ್ಲಿ ಪೊಲೀಸರು ಮತ್ತು ಸಿಸಿಬಿ ಅಧಿಕಾರಿಗಳು ಒಟ್ಟು 6 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದಾರೆ. ​

ಹೊಸ ವರ್ಷಾಚರಣೆಗೆ ಕ್ವಿಂಟಾಲ್​​ಗಟ್ಟಲೆ ಗಾಂಜಾ ಸಪ್ಲೆ ಮಾಡುತ್ತಿದ್ದ ಆರೋಪಿಗಳನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆರೋಪಿಗಳಿಂದ 3.25 ಕೋಟಿ ರೂ. ಮೌಲ್ಯದ 318 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಡ್ರಗ್ ಪೆಡ್ಲರ್ ಅಚ್ಚು, ಜಮೀರ್ ಮತ್ತು ರೇಷ್ಮಾ ದಂಪತಿ ಬಂಧಿತ ಆರೋಪಿಗಳು.

ಮೂವರು ಆರೋಪಿಗಳು ಒಡಿಶಾ ಮತ್ತು ಆಂಧ್ರದಲ್ಲಿ ಗಾಂಜಾ ಸಂಗ್ರಹಿಸಿದ್ದರು. ಸಂಗ್ರಹಿಸಿದ್ದ ಗಾಂಜಾವನ್ನು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರು, ಕೇರಳದಲ್ಲಿ ಮಾರಲು ಯೋಜಿಸಿದ್ದರು. ಜಮೀರ್ ಮತ್ತು ರೇಷ್ಮಾ ದಂಪತಿ ಬೆಂಗಳೂರಿನಲ್ಲಿ ಮತ್ತು ಡ್ರಗ್ ಪೆಡ್ಲರ್ ಅಚ್ಚು ಕೇರಳದಲ್ಲಿ ಗಾಂಜಾ ಮಾರಲು ನಿರ್ಧರಿಸಿದ್ದನು.

ಹೀಗಾಗಿ, ಸಂಗ್ರಹಿಸಲಾಗಿದ್ದ ಗಾಂಜಾ ಅನ್ನು ಬೆಂಗಳೂರು ಮತ್ತು ಕೇರಳಕ್ಕೆ ಸಾಗಿಸಲು ಆರೋಪಿಗಳು ಸೆಲ್ಫ್​​ ಡ್ರೈವಿಂಗ್​​ ಕಾರು ಬಾಡಿಗೆ ಪಡೆದಿದ್ದರು. ಬಳಿಕ, ಬೆಡ್​ಶೀಟ್​​​ನಲ್ಲಿ ಗಾಂಜಾ ತುಂಬಿ, ಕಾರಿನಲ್ಲಿ ಬೆಂಗಳೂರಿಗೆ ತರುತ್ತಿದ್ದರು. ಗಾಂಜಾ ತರುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಗೋವಿಂದಪುರ ಠಾಣೆ ಪೊಲೀಸರು ಹೆಚ್​​ಬಿಆರ್​ ಲೇಔಟ್​ ಬಳಿ ಕಾರನ್ನು ಅಡ್ಡ ಹಾಕಿದ್ದಾರೆ.

ಇದನ್ನೂ ಓದಿ: ಡ್ರಗ್ಸ್​​ ಚಟಕ್ಕೆ ದಾಸನಾದ ಪುತ್ರ: ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ನೀಡಿ ಎಂದ ತಾಯಿ

ಪೊಲೀಸರು ತಪಾಸಣೆ ನಡೆಸಿದಾಗ ಕಾರಿನಲ್ಲಿ 3 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆಯಾಗಿದೆ. ಕೂಡಲೆ ಆರೋಪಿಗಳನ್ನು ವಶಕ್ಕೆ ಪಡೆದು, ಗಾಂಜಾ ಜಪ್ತಿ ಮಾಡಿದ್ದಾರೆ. ಸದ್ಯ, ಮೂವರು ಆರೋಪಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಡ್ರಗ್ ಪೆಡ್ಲರ್​ ಅಚ್ಚು ಕೇರಳ ಪೊಲೀಸರಿಗೆ ಬೇಕಾದ ಮೋಸ್ಟ್​ ವಾಂಟೆಡ್​ ಆರೋಪಿಯಂದು ತಿಳಿದಿದೆ. ಆರೋಪಿ ಅಚ್ಚು ವಿರುದ್ಧ ಕೇರಳದ ವಿವಿಧ ಪೊಲೀಸ್​ ಠಾಣೆಗಳಲ್ಲಿ ಹಲವು ಪ್ರಕರಣ ದಾಖಲಾಗಿವೆ ಎಂಬ ಮಾಹಿತಿ ತಿಳಿದುಕೊಂಡಿದ್ದಾರೆ. ಮೂವರು ಆರೋಪಿಗಳ ವಿರುದ್ಧ ಎನ್​ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

3 ಕೋಟಿ ಮೌಲ್ಯದ ಸಿಂಥೆಟಿಕ್​ ಡ್ರಗ್ಸ್ ಜಪ್ತಿ

ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಇಬ್ಬರು ವಿದೇಶಿ ಡ್ರಗ್​ ಪೆಡ್ಲರ್​ಗಳನ್ನು ಬಂಧಿಸಿದ್ದಾರೆ. ಬಂಧಿತರ ಬಳಿಯಿದ್ದ 3 ಕೋಟಿ ಮೌಲ್ಯದ ಸಿಂಥೆಟಿಕ್​ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಹೊಸ ವರ್ಷಾಚರಣೆಗೆಂದು ಆರೋಪಿಗಳು ಸೋಲದೇವನಹಳ್ಳಿ ಬಳಿ ಡ್ರಗ್ಸ್ ಸಂಗ್ರಹಿಸಿದ್ದರು.

ಈ ವಿಚಾರ ತಿಳಿಸಿದ ಸಿಸಿಬಿ ಅಧಿಕಾರಿಗಳು ಡ್ರಗ್ಸ್​ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ದಾಳಿ ಮಾಡಿದರು. ದಾಳಿ ವೇಳೆ, 1 ಕೆಜಿ 520 ಗ್ರಾಂ ಎಂಡಿಎಂಎ ಕ್ರಿಸ್ಟಲ್, 202 ಗ್ರಾಂ ಕೊಕೇನ್, 12 ಗ್ರಾಂ ಎಂಡಿಎಂಎ ಎಕ್ಸೆಟೆಸಿ ಪಿಲ್ಸ್ ಪತ್ತೆಯಾಗಿವೆ. ಕೂಡಲೆ ಸಿಸಿಬಿ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ, ಮಾದಕ ವಸ್ತು ಜಪ್ತಿ ಮಾಡಿದ್ದಾರೆ.

ಆರೋಪಿಗಳು ಹೊಸ ವರ್ಷಾಚರಣೆ ದಿನದಂದು ಬೆಂಗಳೂರಿನಲ್ಲಿ ಮಾರಲು ಸಜ್ಜಾಗಿದ್ದರು. ಇನ್ನು, ಆರೋಪಿಗಳು ಮುಂಬೈನಿಂದ ಬೆಂಗಳೂರಿಗೆ ಡ್ರಗ್ಸ್​ ತರಿಸುತ್ತಿದ್ದರು. ಈ ವಿದೇಶಿ ಡ್ರಗ್​ ಪೆಡ್ಲರ್​ಗಳು ಮೆಡಿಕಲ್ ವೀಸಾದಡಿ ಭಾರತಕ್ಕೆ ಬಂದಿದ್ದಾರೆ ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:58 pm, Fri, 22 November 24

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?