ಬೆಂಗಳೂರು ಹೊಸ ವರ್ಷಾಚರಣೆ: ಪೊಲೀಸ್​ ಸಿಬ್ಬಂದಿಗೆ ಆಯುಕ್ತ ದಯಾನಂದ್​ ಖಡಕ್​ ಸೂಚನೆ

ಬೆಂಗಳೂರು ಪೊಲೀಸ್ ಆಯುಕ್ತರು ಹೊಸ ವರ್ಷದ ಆಚರಣೆಗೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಜಾರಿಗೆ ತಂದಿದ್ದಾರೆ. ಭಯೋತ್ಪಾದನೆ ಹಾಗೂ ಶಾಂತಿ ಭಂಗದ ಉದ್ದೇಶದಿಂದ ಹೊಸ ವರ್ಷದ ಆಚರಣೆ ವಿರೋಧಿಸುವ ಸಂಘಟನೆಗಳ ಮೇಲೆ ನಿಗಾ ಇಡಲಾಗುವುದು ಎಂದು ತಿಳಿಸಿದ್ದಾರೆ. ಮದ್ಯದ ಅಂಗಡಿಗಳಲ್ಲಿನ ಗಲಭೆಗಳನ್ನು ತಡೆಯಲು ಹಾಗೂ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

ಬೆಂಗಳೂರು ಹೊಸ ವರ್ಷಾಚರಣೆ: ಪೊಲೀಸ್​ ಸಿಬ್ಬಂದಿಗೆ ಆಯುಕ್ತ ದಯಾನಂದ್​ ಖಡಕ್​ ಸೂಚನೆ
ಸಾಂದರ್ಭಿಕ ಚಿತ್ರ, ಬಿ ದಯಾನಂದ್​
Follow us
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ

Updated on: Dec 23, 2024 | 10:47 AM

ಬೆಂಗಳೂರು, ಡಿಸೆಂಬರ್​​ 23: ಹೊಸ ವರ್ಷಾಚರಣೆಗೆ (New Year) ದಿನಗಣನೆ ಆರಂಭವಾದ ಹಿನ್ನೆಲೆಯಲ್ಲಿ ನಗರದಲ್ಲಿ ಕಟ್ಟೆಚ್ಚರ ವಹಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ​ ಬಿ ದಯಾನಂದ್ (B Dayanand) ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್​​ ಸೂಚನೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಿದ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂದರ್ಭದಲ್ಲಿ ಶಾಂತಿಭಂಗವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅಂತವರ ಮೇಲೆ ನಿಗಾವಹಿಸಿ, ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಿ ಎಂದು ಆದೇಶಿಸಿದ್ದರೆ.

ಹೊಸ ವರ್ಷಾಚರಣೆ ವಿರೋಧಿಸುವ ಸಂಘ ಸಂಸ್ಥೆಗಳ ಬಗ್ಗೆ ಗುಪ್ತವಾಗಿ ಮಾಹಿತಿ ಸಂಗ್ರಹಿಸಿ, ಮುನ್ನೆಚ್ಚರಿಕೆ ವಹಿಸಿ. ಮಾಲ್​ಗಳಲ್ಲಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿ ಇಡುವಂತೆ ಅಲ್ಲಿನ ಸಿಬ್ಬಂದಿಗಳಿಗೆ ಸೂಚನೆ ನೀಡಿ. ಎಲ್ಲ ಅಧಿಕಾರಿಗಳು ಸರ್ವೀಸ್ ರಿವಾಲ್ವಾರ್ ಹೊಂದಿರಬೇಕು. ಪೊಲೀಸ್​​ ಸಿಬ್ಬಂದಿ ಹೆಲ್ಮೆಟ್, ಲಾಠಿಗಳನ್ನು ಹೊಂದಿರಬೇಕು. ಹೆಣ್ಣು ಮಕ್ಕಳನ್ನು ಚುಡಾಯಿಸುವವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಿ. ರಸ್ತೆ ಮೇಲೆ ಬಾಟಲಿ ಹೊಡೆದು ದಾಂದಲೆ ಮಾಡುವವರನ್ನು ಕೂಡಲೇ ವಶಕ್ಕೆ ಪಡೆದು ಕ್ರಮಕೈಗೊಳ್ಳಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹೊಸ ವರ್ಷಾಚರಣೆಗೆ ಬಿಬಿಎಂಪಿ-ಪೊಲೀಸ್ ಇಲಾಖೆಯಿಂದ ಹೊಸ ರೂಲ್ಸ್​​

ಮದ್ಯ ಮಾರಾಟ ಜಾಗದಲ್ಲಿ ಗಲಾಟೆ, ದೊಂಬಿ, ಬಾಟಲಿ ಎಸೆಯುವುದು, ಮಹಿಳೆಯರ ಚುಡಾಯಿಸುವುದು ನಡೆದರೆ ಅದಕ್ಕೆ ಮಾಲೀಕರೇ ಹೊಣೆಗಾರರಾಗುತ್ತಾರೆ. ಜನ ಸೇರುವ ರಸ್ತೆ ಮತ್ತು ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸಿ. ರಸ್ತೆಗಳಲ್ಲಿ ವಿದ್ಯುತ್ ದೀಪಗಳು ಕೆಲಸ ಮಾಡುವಂತೆ ನೋಡಿಕೊಳ್ಳಬೇಕು. ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಎಂ.ಜಿ.ರಸ್ತೆ ಸೇರಿದಂತೆ ಇತರೆಡೆ ಜನರ ಆಗಮನ ಮತ್ತು ನಿರ್ಗಮನಕ್ಕೆ ಸೂಕ್ತ ಕ್ರಮಕೈಗೊಳ್ಳಿ ಎಂದಿದ್ದಾರೆ.

ರೌಡಿಗಳ ಚಟುವಟಿಕೆಗಳ ಮೇಲೆ ನಿಗಾ ಇಡಿ. ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆ, ಪ್ರಮುಖ ಪ್ರೈಓವರ್‌ಗಳ ಮೇಲೆ ವಾಹನ ಸಂಚಾರ ನಿಷೇಧಿಸಿ. ಮತ್ತು ಠಾಣೆಯ ಹೊಯ್ಸಳ ಮತ್ತು ಚೀತಾಗಳು ಸದಾ ಗಸ್ತು ನಿರ್ವಹಿಸಬೇಕು ಎಂದು ಪೊಲೀಸ್​ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಮಕರ ರಾಶಿಯಲ್ಲಿ, ಚಂದ್ರ ತುಲಾ ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಕುಡಿದ ನಶೆಯಲ್ಲಿ ಏನೇನೋ ಮಾತನಾಡಿದ ಎನ್ನುವ ಕಾರಣಕ್ಕೆ ಹೊಡೆದು ಕೊಂದರು!
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಶ್ರೀರಾಮುಲು-ಜನಾರ್ಧನ ರೆಡ್ಡಿ ಜಗಳದ ಹಿನ್ನೆಲೆಯಲ್ಲಿ ಹಿರಿಯರ ಸಭೆ?
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು