ನ್ಯೂಇಯರ್​ ಪಾರ್ಟಿಗೆ ಡ್ರಗ್ಸ್​ ಸಪ್ಲೈ ಮಾಡುತ್ತಿದ್ದ ವೇಳೆ ಪೊಲೀಸ್​​​​ ಕೈಗೆ ಸಿಕ್ಕಿಬಿದ್ದ ನೈಜಿರಿಯಾ ಮೂಲದ ವ್ಯಕ್ತಿ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ನೈಜಿರಿಯಾ ಮೂಲದ ವ್ಯಕ್ತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವಿಶೇಷ ಕಾರ್ಯಾಚರಣೆಯಲ್ಲಿ 21 ಗ್ರಾಂ ಕೊಕೇನ್ ಹಾಗೂ 30 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಈ ಹಿಂದೆ ಕೂಡ ಡ್ರಗ್ಸ್ ಮಾರಾಟದಲ್ಲಿ ಭಾಗಿಯಾಗಿದ್ದ ಆರೋಪಿ, ಏರ್‌ಪೋರ್ಟ್ ಬಳಿ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನಲ್ಲಿ ನಡೆಯುವ ಪಾರ್ಟಿಗಳಿಗೆ ಡ್ರಗ್ಸ್ ಪೂರೈಕೆ ತಡೆಯಲು ತನಿಖೆ ಮುಂದುವರಿದಿದೆ.

ನ್ಯೂಇಯರ್​ ಪಾರ್ಟಿಗೆ ಡ್ರಗ್ಸ್​ ಸಪ್ಲೈ ಮಾಡುತ್ತಿದ್ದ ವೇಳೆ ಪೊಲೀಸ್​​​​ ಕೈಗೆ ಸಿಕ್ಕಿಬಿದ್ದ ನೈಜಿರಿಯಾ ಮೂಲದ ವ್ಯಕ್ತಿ
ಬೆಂಗಳೂರು ಡ್ರಗ್ಸ್ ವಶ
Edited By:

Updated on: Dec 31, 2025 | 10:08 PM

ಬೆಂಗಳೂರು, ಡಿ.31: ಒಂದು ಕಡೆಯಲ್ಲಿ ಬೆಂಗಳೂರಿನಲ್ಲಿ (Bengaluru drug) ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇಂದಿರಾನಗರ ಇನ್ನು ಅನೇಕ ಕಡೆ ಈಗಾಗಲೇ ಜನ ಸೇರಿದ್ದಾರೆ. ಪಬ್​​​ಗಳಲ್ಲಿ ಪಾರ್ಟಿ ಶುರುವಾಗಿದೆ. ಜತೆಗೆ ಪೊಲೀಸ್​​​​ ಕಣ್ಗಾವಲು ಇದೆ. ಬಿಗಿ ಭದ್ರತೆ ಇದೆ. ಇದರ ನಡುವೆ ನ್ಯೂಇಯರ್​ ಪಾರ್ಟಿಗೆ ಡ್ರಗ್ಸ್​ ಸಪ್ಲೈ ಮಾಡಲು ಹೋಗಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ. ನೈಜಿರಿಯಾ ಮೂಲದ ವ್ಯಕ್ತಿ ಡ್ರಗ್ಸ್​ ಸಪ್ಲೈ ಮಾಡುತ್ತಿದ್ದ ಎಂದು ಹೇಳಲಾಗಿದೆ. ದೇವನಹಳ್ಳಿ ಠಾಣೆ ಪೊಲೀಸರಿಂದ ವಿಶೇಷ ಕಾರ್ಯಾಚರಣೆ ನಡೆಸಿದ ವೇಳೆ ಈತ ಸಿಕ್ಕಿಬಿದ್ದಿದ್ದಾನೆ. ಏರ್​​ಪೋರ್ಟ್​ ಬ್ಯಾಕ್​ ಗೇಟ್​ ಬಳಿ ಮಾರುತ್ತಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಇದೀಗ ಈ ನೈಜಿರಿಯಾ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದ್ದು, 21 ಗ್ರಾಂ ಕೊಕೇನ್ ಹಾಗೂ 30 ಗ್ರಾಂ MDMA ಸೀಜ್​ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಹೊಸ ವರ್ಷ ಹಿನ್ನೆಲೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಎಂದು ಹೇಳಲಾಗಿದೆ. ಈ ಹಿಂದೆ ಕೂಡ ಈ ವ್ಯಕ್ತಿ ಡ್ರಗ್ಸ್​​​​​ ಮಾರಾಟ ಮಾಡುತ್ತಿದ್ದ ಎಂದು ಹೇಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ. ಇತರ ಪ್ರದೇಶದಲ್ಲೂ ಕೂಡ ಪೊಲೀಸರ ವಿಶೇಷ ತಂಡ ಕಾರ್ಯಚರಣೆ ನಡೆಸಿದ್ದಾರೆ.

ಡ್ರಗ್ ಫ್ಯಾಕ್ಟರಿ ಪತ್ತೆ ಮಾಡಿದ ಮಹಾ ಪೊಲೀಸ್:

ಈ ಹಿಂದೆ ಮಹಾರಾಷ್ಟ್ರ ಪೊಲೀಸರು ಬಂದು ಬೆಂಗಳೂರಿನಲ್ಲಿದ್ದ ಡ್ರಗ್ಸ್ ಫ್ಯಾಕ್ಟರಿಯನ್ನು ಪತ್ತೆ ಮಾಡಿದ್ದರು. ಫ್ಯಾಕ್ಟರಿ ತಯಾರಿಸಲು ದಂಧೆಕೋರರು ಆಲ್ ಇಂಡಿಯಾ ಪ್ಲಾನ್ ಮಾಡುತ್ತಿದ್ದರು ಎಂದು ತಿಳಿದು ಬಂದಿತು. ಕೇವಲ 8 ಕಿ.ಮೀ ವ್ಯಾಪ್ತಿಯಲ್ಲಿ ದಂಧೆ ನಡೆಸಲು ಪಕ್ಕಾ ಸೆಟಪ್ ಮಾಡಿದ್ದರು. ಇದರ ಮಧ್ಯೆ ಡ್ರಗ್ಸ್ ದಂಧೆಯನ್ನು ಭೇದಿಸಿದ್ದಾರೆ. ಈ ಸಂಬಂಧ ಬೆಂಗಳೂರಿನ ವಿವಿಧ ಪೊಲೀಸ್ ಠಾಣೆ ಮೂವರು ಇನ್ಸ್​​ಪೆಕ್ಟರ್​​ಗಳನ್ನು ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಜಾಲಕ್ಕೆ NCB ಶಾಕ್​​: 8 ಕೋಟಿ ಮೌಲ್ಯದ ಡ್ರಗ್ಸ್​​ ಸೀಜ್​

ಅಂತಾರಾಷ್ಟ್ರೀಯ ಮಾದಕವಸ್ತು ಜಾಲವನ್ನು ಭೇದಿಸಿದ ಎನ್‌ಸಿಬಿ:

ಅಂತಾರಾಷ್ಟ್ರೀಯ ಮಾದಕವಸ್ತು ಜಾಲವನ್ನು ಎನ್‌ಸಿಬಿ ಭೇದಿಸಿದೆ. ಬೆಂಗಳೂರು ಮೂಲಕ ಕಾರ್ಯನಿರ್ವಹಿಸುತ್ತಿದ್ದ ಅಂತಾರಾಷ್ಟ್ರೀಯ ಮಾದಕವಸ್ತು ಜಾಲಗಳು ಕಂಡು ಬಂದಿದೆ. ಸುಮಾರು 160 ಕಿಲೋಗ್ರಾಂ ತೂಕದ ಖಾಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಮೌಲ್ಯವು ಸುಮಾರು 8 ಕೋಟಿ ರೂ. ಎಂದು ಅಂದಾಜಿಸಲಾಗಿದೆ. 2018ರಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಖಾಟ್ ಅನ್ನು ಮಾದಕ ವಸ್ತು ಪಟ್ಟಿಗೆ ಸೇರಿಸಿಸಲಾಗಿತ್ತು. ಆ ಬಳಿಕ ಇಷ್ಟು ದೊಡ್ಡ ಪ್ರಮಾಣದಲ್ಲಿ ಖಾಟ್​​ ಎಲೆಗಳನ್ನು ವಶಪಡಿಸಿಕೊಂಡಿರೋದು ರಾಜ್ಯದಲ್ಲಿ ಇದೇ ಮೊದಲು ಎಂದು ಎನ್​​ಸಿಬಿ ತಿಳಿಸಿದೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

 

 

Published On - 10:08 pm, Wed, 31 December 25