AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Year: 2 ಕೋಟಿ ರೂ. ಅಧಿಕ ಮೌಲ್ಯದ ಡ್ರಗ್ಸ್​​​​​ ಜಪ್ತಿ, ಮೇಲ್ಸೇತುವೆಗಳು ಬಂದ್​

ಹೊಸ ವರ್ಷಾಚರಣೆ 2025: ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಮೂವರು ವಿದೇಶಿ ಡ್ರಗ್ ಪೆಡ್ಲರ್‌ಗಳು ಸೇರಿದಂತೆ 70 ಜನರನ್ನು ಬಂಧಿಸಲಾಗಿದೆ ಮತ್ತು ಎರಡೂವರೆ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಲಾಗಿದೆ. ರಾತ್ರಿ 1 ಗಂಟೆ ಒಳಗಾಗಿ ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಪಬ್‌ಗಳು ಮುಚ್ಚಬೇಕು ಎಂದು ಸೂಚಿಸಲಾಗಿದೆ. ನಗರದ ಮೇಲ್ಸೇತುವೆಗಳನ್ನು ಬಂದ್ ಮಾಡಲಾಗುತ್ತದೆ ಮತ್ತು ಹೆಚ್ಚಿನ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಪೊಲೀಸ್​ ಆಯುಕ್ತ ಬಿ. ದಯಾನಂದ್​ ತಿಳಿಸಿದರು.

New Year: 2 ಕೋಟಿ ರೂ. ಅಧಿಕ ಮೌಲ್ಯದ ಡ್ರಗ್ಸ್​​​​​ ಜಪ್ತಿ, ಮೇಲ್ಸೇತುವೆಗಳು ಬಂದ್​
ಆಯುಕ್ತ ಬಿ. ದಯಾನಂದ್
Shivaprasad B
| Edited By: |

Updated on:Dec 28, 2024 | 12:38 PM

Share

ಬೆಂಗಳೂರು, ಡಿಸೆಂಬರ್​ 28: ಹೊಸ ವರ್ಷಾಚರಣೆ (New Year) ದಿನ ಬೆಂಗಳೂರು (Bengaluru) ನಗರದಲ್ಲಿ ಯಾವುದೇ ರೀತಿಯಾದ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಮಾದಕ ಜಾಲದ ಮೇಲೂ ಕೂಡ ಕಣ್ಣಿಡಲಾಗಿದೆ. ಈಗಾಗಲೇ‌ ಮೂವರು ವಿದೇಶಿ ಡ್ರಗ್ ಪೆಡ್ಲರ್ ಸೇರಿದಂತೆ‌ 70 ಜನರನ್ನು ಬಂಧಿಸಲಾಗಿದೆ. ಎರಡೂವರೆ ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್​​ ಸೇರಿದಂತೆ, ವಿವಿಧ ಮಾದಕ ವಸ್ತು ಜಪ್ತಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ. ದಯಾನಂದ್ (B Dayananda)​ ತಿಳಿಸಿದ್ದಾರೆ.

ಕಮಿಷನರ್​ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೆಸ್ಟೋರೆಂಟ್, ಹೋಟೆಲ್ ಮತ್ತು ಪಬ್​ಗಳನ್ನು ಹೊಸ ವರ್ಷಾಚರಣೆ ದಿನ (ಡಿಸೆಂಬರ್​.31) ರಂದು ರಾತ್ರಿ 1 ಗಂಟೆಯ ಒಳಗಾಗಿ ಬಂದ್​​ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಅಂದು, ನಶೆಯಲ್ಲಿ ಮೇಲ್ಸೇತುವೆಗಳ ಮೇಲೆ ರಂಪಾಟ ಮಾಡುವ, ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ, ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಮೇಲ್ಸೇತುವೆ ಸೇರಿದಂತೆ ನಗರದ ಎಲ್ಲ ಮೇಲ್ಸೇತುವೆಗಳನ್ನು ಬಂದ್​ ಮಾಡಲಾಗುತ್ತದೆ ಎಂದರು.

ಇದನ್ನೂ ಓದಿ: New Year 2025: ಮೈಸೂರಿನ ಅರಮನೆ ಬಳಿ ಹೊಸ ವರ್ಷಾಚರಣೆ ರದ್ದು, ಕಾರಣ?

ಬೆಂಗಳೂರು ಹೊರ ವಲಯದಲ್ಲಿ ನಡೆಯುವ ರೇವ್ ಪಾರ್ಟಿ ಸೇರಿದಂತೆ ಎಲ್ಲ ಪಾರ್ಟಿಗಳ ಮೇಲೆ ಕಣ್ಣಿಡಲಾಗಿದೆ. ಇನ್ನು, ನಗರದಲ್ಲಿ ಎಂಜಿ ರೋಡ್, ಬ್ರಿಗೆಡ್ ರೋಡ್, ಕೋರಮಂಗಲ, ಇಂದಿರಾನಗರ ಸೇರಿ ಎಲ್ಲಿ ಹೆಚ್ಚು ಜನರು ಸೇರುತ್ತಾರೆ ಅಲ್ಲಿ ಸೇಫ್ಟಿ ಐಲ್ಯಾಂಡ್, ಸಿಸಿಟಿವಿ, ಡ್ರೋಣ್ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಲ್ಲದೇ, ಶ್ವಾನದಳದಿಂದ ತಪಾಸಣೆ ಮಾಡಲಾಗುತ್ತೆ. ಹೆಚ್ಚಿನ ಲೈಟಿಂಗ್ ವ್ಯವಸ್ಥೆ, ಬ್ಯಾರಿಕೇಡ್ ವ್ಯವಸ್ಥೆ, ಅಗ್ನಿಶಾಮಕ ದಳ ವಾಹನ ಇರುತ್ತದೆ ಎಂದು ತಿಳಿಸಿದರು.

ಬ್ರಿಗೆಡ್, ಎಂಜಿ ರೋಡ್​​ನಲ್ಲಿ ಏಕಮುಖ ಸಂಚಾರವಿರುತ್ತದೆ. ಡಿಸೆಂಬರ್​ 31ರಂದು ರಾತ್ರಿ 11 ಗಂಟೆಯಿಂದ ಎಂಜಿ ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ದ್ವಾರಗಳನ್ನು ಮುಚ್ಚಲಾಗುತ್ತದೆ. ಹತ್ತಿರದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ರೈಲುಗಳು ನಿಲ್ಲುತ್ತವೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ಸೈಬರ್ ವಂಚನೆಗೆ ಒಳಗಾಗಿದ್ದರೆ ಟೋಲ್ ಫ್ರೀ ನಂಬರ್ 1930ಗೆ ಕರೆ ಮಾಡಿ ಮಾಹಿತಿ ನೀಡಿ. ಅದನ್ನ ಹೊರತುಪಡಿಸಿ ಪೊಲೀಸ್ ಸಿಬ್ಬಂದಿಯ ವೈಯಕ್ತಿಕ ನಂಬರ್​​ಗೆ ಕರೆ ಮಾಡಬೇಡಿ. ಏಕೆಂದರೆ, ಅಧಿಕಾರಿಗಳು ಬೇರೆ ಕೆಲಸದಲ್ಲಿ ನಿರತರಾಗಿದ್ದರೆ ಕೂಡಲೇ ಪ್ರತಿಕ್ರಿಯೆ ನೀಡಲು ಸಾಧ್ಯವಾಗುವುದಿಲ್ಲ. ಹೀಗಾಗಿ, 1930 ಕರೆ ಮಾಡಿ ಮಾಹಿತಿ ನೀಡಿ ಎಂದು ಮನವಿ ಮಾಡಿಕೊಂಡರು.

ಚಿನ್ನದ ಅಂಗಡಿ ಮಾಲೀಕರಿಗೆ ವಂಚನೆ ಮಾಡಿದ ಪ್ರಕರಣ ಸಂಬಂಧ ಎರಡು ಕೇಸ್ ದಾಖಲಾಗಿವೆ. ಎರಡೂ ವಂಚನೆ ಪ್ರಕರಣದ ಬಗ್ಗೆ ಪ್ರತ್ಯೇಕವಾಗಿ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳ ವಿರುದ್ಧ ದಾಖಲಾಗಿರುವ ಸೆಕ್ಷನ್​ಗಳ ಆಧಾರದಲ್ಲಿ, ಆರೋಪಿಗಳ ಸಹಕಾರದ ಅನ್ವಯ ಬಂಧನ ಮಾಡಲಾಗುವುದು. ಚಂದ್ರಾಲೇಔಟ್ ಠಾಣೆ ಪ್ರಕರಣದ ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ. ಠಾಣೆಗೆ ಕರೆಸಿ ವಿಚಾರಣೆ ನಡೆಸುತ್ತೇವೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:32 pm, Sat, 28 December 24

Follow Us
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?