AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಹೊಸ ವರ್ಷದ ದಿನ ಡ್ರಗ್ ನಶೆಯಲ್ಲಿದ್ದವರ ಪತ್ತೆಗೆ ಪೊಲೀಸರ ಕೈಗೆ ಸಿಕ್ತು ಹೊಸ ಅಸ್ತ್ರ

ಬೆಂಗಳೂರಿನಲ್ಲಿ ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಮಾದಕ ದ್ರವ್ಯ ಮತ್ತು ಮದ್ಯಪಾನದ ದುರುಪಯೋಗ ತಡೆಯಲು ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ತ್ವರಿತ ಪರೀಕ್ಷಾ ಕಿಟ್‌ಗಳನ್ನು ಬಳಸಿ, ಅನುಮಾನಾಸ್ಪದ ವ್ಯಕ್ತಿಗಳನ್ನು ಪರೀಕ್ಷಿಸಲಾಗುತ್ತದೆ. ಡ್ರಗ್ಸ್ ಪೆಡ್ಲರ್‌ಗಳು ಮತ್ತು ವ್ಯಸನಿಗಳ ಮೇಲೆ ನಿಗಾ ಇಡಲಾಗಿದೆ. 21 ವರ್ಷದೊಳಗಿನವರು ಪಬ್‌ಗಳಿಗೆ ಪ್ರವೇಶಿಸುವುದನ್ನು ತಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ.

ಬೆಂಗಳೂರು: ಹೊಸ ವರ್ಷದ ದಿನ ಡ್ರಗ್ ನಶೆಯಲ್ಲಿದ್ದವರ ಪತ್ತೆಗೆ ಪೊಲೀಸರ ಕೈಗೆ ಸಿಕ್ತು ಹೊಸ ಅಸ್ತ್ರ
ಪೊಲೀಸ್​
Jagadisha B
| Edited By: |

Updated on:Dec 08, 2024 | 10:35 AM

Share

ಬೆಂಗಳೂರು, ಡಿಸೆಂಬರ್​ 08: ಹೊಸ ವರ್ಷವನ್ನು (New Year) ಸ್ವಾಗತಿಸಲು ಜನರು ಸಕಲ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ರೆಸ್ಟೋರೆಂಟ್​ ಮತ್ತು ಪಬ್​ಗಳು ಹೊಸ ವರ್ಷಕ್ಕೆ ಆಶ್ಚರ್ಯಕರ ಆಫರ್​ಗಳನ್ನು ನೀಡಲು ಸಿದ್ದವಾಗಿವೆ. ಎಂಜಿ ರೋಡ್, ಬ್ರಿಗೇಡ್​ ರೋಡ್​ ಮತ್ತು ಕೋರಮಂಗಲದ ಪಬ್​ಗಳಲ್ಲಿ ಪಾರ್ಟಿ ಮಾಡಿ, ನಶೆಯಲ್ಲಿ ಹೊಸ ವರ್ಷವನ್ನು ಸ್ವಾಗತಿಸಲು ಸಜ್ಜಾಗಿದ್ದಾರೆ. ಆದರೆ, ನೀವೇನಾದರು ನಶೆಯಲ್ಲಿ ಹೊರಗಡೆ ಓಡಾಡಿದರೆ ಪೊಲೀಸರ (Police) ಕೈಯಲ್ಲಿ ಲಾಕ್​ ಆಗುವುದು ಪಕ್ಕಾ.

ಹೌದು, ಬೆಂಗಳೂರು ನಗರ ಪೊಲೀಸರು ಮತ್ತು ಸಿಸಿಬಿ ಪೊಲೀಸರು ಡ್ರಗ್ಸ್​ ಜಾಲದ ಮೇಲೆ ಕಣ್ಣಿಟ್ಟಿದ್ದು, ಈಗಾಗಲೆ ಹಲವು ಕಡೆ ದಾಳಿ ಮಾಡಿ, ಕೋಟ್ಯಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಇದೀಗ, ಮಾದಕ ವಸ್ತು ಅಥವಾ ಮದ್ಯಪಾನ ಮಾಡಿ ರಸ್ತೆಗಳಲ್ಲಿ ಸುತ್ತಾಡುವರನ್ನು ಪತ್ತೆ ಹಚ್ಚಲು ಪೊಲೀಸರು ತಪಾಸಣಾ ಕಿಟ್​ವೊಂದನ್ನು ಖರೀದಿಸಿದ್ದಾರೆ.

ಹೊಸ ವರ್ಷ ಸಂಭ್ರಮಾಚರಣೆ ಒಂದು ವಾರಕ್ಕೂ ಮುಂಚೆಯೇ ತಪಾಸಣೆ ಆರಂಭಿಸಲಿದ್ದಾರೆ. ಅನುಮಾನ ಬಂದವರನ್ನು ತಪಾಸಣೆಗೆ ಒಳಪಡಿಸುತ್ತಾರೆ. ಈ ಕಿಟ್​​ನಿಂದ ಕ್ಷಣಾರ್ಧದಲ್ಲೇ ವರದಿ ಬರಲಿದೆ. ಈ ತಪಾಸಣಾ ಕಿಟ್​ ಏಕಕಾಲದಲ್ಲಿ ಆರು ಟೆಸ್ಟಿಂಗ್ ರಿಪೋರ್ಟ್ ನೀಡುತ್ತದೆ. ಮೆತ್ ಆಂಫೆಟಮೈನ್, ಕೊಕೇನ್, ಓಪಿಐಓಡಿಎಸ್ ಸೇರಿದಂತೆ ಆರು ಮಾದಕ ದ್ರವ್ಯಗಳನ್ನು ತಪಾಸಣೆ ನಡೆಸಲಿದೆ. ಮಧ್ಯಪಾನ ಸೇರಿದಂತೆ ಗಾಂಜಾಸೇವನೆ, ಡ್ರಗ್ ಸೇವನೆ ​ವರದಿ ನೀಡಲಿದೆ.

ಇದನ್ನೂ ಓದಿ: ಅಂಚೆ ಇಲಾಖೆ ಮೂಲಕ ಬೆಂಗಳೂರಿಗೆ ಬರ್ತಾಯಿದೆ ವಿದೇಶಿ ಡ್ರಗ್ಸ್​: 21 ಕೋಟಿ ರೂ ಮೌಲ್ಯದ ಡ್ರಗ್ಸ್ ವಶಕ್ಕೆ 

ಈಗಾಗಲೆ ಪೊಲೀಸರ 120ಕ್ಕೂ ಹೆಚ್ಚು ಡ್ರಗ್​ ವ್ಯಸನಿಗಳ ಮೇಲೆ ಕಣ್ಣು ಇಟ್ಟಿದ್ದಾರೆ. ಹಾಗೇ, ಡ್ರಗ್ಸ್​ ಪೆಡ್ಲರ್​ಗಳ ಮೇಲೂ ಹದ್ದಿನ ಕಣ್ಣಿಟ್ಟಿದ್ದಾರೆ. 21 ವರ್ಷದ ಒಳಗಿರುವ ಯುವಕ, ಯುವತಿಯರ ಮೇಲೆ ನಿಗಾ ವಹಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. 21 ವರ್ಷದ ಒಳಗಿನ ಯುವಕ, ಯುವತಿಯರು ಪಬ್​ ಅಥವಾ ಬಾರ್​ಗೆ ಪ್ರವೇಶಿಸಿದರೇ, ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಗಂಗಾವತಿ ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಬಸವನಗೌಡನ ಬಂಧಿತ ಆರೋಪಿ. 218ಗ್ರಾಂ ಗಾಂಜಾ, ಬೈಕ್ ಜಪ್ತಿ ಮಾಡಲಾಗಿದೆ. ಅಬಕಾರಿ ಇನ್ಸ್​ಪೆಕ್ಟರ್ ವಿಠ್ಠಲ ಪೀರಣ್ಣನವರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಅಬಕಾರಿ ಪೊಲೀಸರು ಎನ್​ಡಿಪಿಎಸ್​​ ಕಾಯ್ದೆಯಡಿ ಕೇಸ್ ದಾಖಲಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:27 am, Sun, 8 December 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್