AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಂತಲಾ ಸಿಗ್ನಲ್​ನಲ್ಲಿ 2 ಕೆಎಸ್​ಆರ್​ಟಿಸಿ ಬಸ್​ಗಳ ಮೇಲೆ ದೊಣ್ಣೆಯಿಂದ ದಾಳಿ; ಇಬ್ಬರು ವಶ

ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ 2 KSRTC ಬಸ್​ಗಳು ಶಾಂತಲಾ ಸಿಗ್ನಲ್​ ಬಳಿ ನಿಂತಿವೆ. ಹಿಂದೆಯೇ 1 ಆಟೋ, ಎರಡು ಬೈಕ್​ಗಳಲ್ಲಿ ಬಂದಿದ್ದ ಐವರು ಪುಂಡರು ಏಕಾಏಕಿ ರಾಡ್​, ದೊಣ್ಣೆ, ಕಲ್ಲುಗಳಿಂದ ಕೆಎಸ್​ಆರ್​ಟಿಸಿ ಬಸ್​ನ ಗಾಜು ಹೊಡೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಮಧ್ಯರಾತ್ರಿ 1.45ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.

ಶಾಂತಲಾ ಸಿಗ್ನಲ್​ನಲ್ಲಿ 2 ಕೆಎಸ್​ಆರ್​ಟಿಸಿ ಬಸ್​ಗಳ ಮೇಲೆ ದೊಣ್ಣೆಯಿಂದ ದಾಳಿ; ಇಬ್ಬರು ವಶ
ಕೆಎಸ್​ಆರ್​ಟಿಸಿ ಬಸ್​ಗಳ ಮೇಲೆ ದೊಣ್ಣೆಯಿಂದ ದಾಳಿ
ರಾಚಪ್ಪಾಜಿ ನಾಯ್ಕ್
| Edited By: |

Updated on: Jan 17, 2024 | 10:21 AM

Share

ಬೆಂಗಳೂರು, ಜ.17: ನಗರದಲ್ಲಿ ಕೆಎಸ್​ಆರ್​ಟಿಸಿ ಬಸ್​ಗಳ​ ಮೇಲೆ ಕಲ್ಲು ತೂರಾಟವಾಗಿದೆ. ಬೆಂಗಳೂರಿನ ಶಾಂತಲಾ ಸಿಗ್ನಲ್​ನಲ್ಲಿ ನಿನ್ನೆ ಮಧ್ಯ ರಾತ್ರಿ 2 ಕೆಎಸ್​ಆರ್​ಟಿಸಿ ಬಸ್​ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. KSRTC ಬಸ್​ಗಳ ಗ್ಲಾಸ್ ಹೊಡೆದು ಅಟ್ಟಹಾಸ ಮೆರೆದಿದ್ದಾರೆ. ಎರಡು KSRTC ಬಸ್​ಗಳ ಗ್ಲಾಸ್​ಗಳು ಪುಡಿ ಪುಡಿಯಾಗಿವೆ. ಇಮ್ರಾನ್ ಮತ್ತು ಆರೀಫ್ ಎಂಬ ಇಬ್ಬರು ಕಿಡಿಗೇಡಿಗಳು ದೊಣ್ಣೆಯಿಂದ ಗ್ಲಾಸ್ ಹೊಡೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ 2 KSRTC ಬಸ್​ಗಳು ಶಾಂತಲಾ ಸಿಗ್ನಲ್​ ಬಳಿ ನಿಂತಿವೆ. ಹಿಂದೆಯೇ 1 ಆಟೋ, ಎರಡು ಬೈಕ್​ಗಳಲ್ಲಿ ಬಂದಿದ್ದ ಐವರು ಪುಂಡರು ಏಕಾಏಕಿ ರಾಡ್​, ದೊಣ್ಣೆ, ಕಲ್ಲುಗಳಿಂದ ಕೆಎಸ್​ಆರ್​ಟಿಸಿ ಬಸ್​ನ ಗಾಜು ಹೊಡೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಮಧ್ಯರಾತ್ರಿ 1.45ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಘಟನೆ ನಡೆಯಲು ಕಾರಣ ಏನು ಎಂಬ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ. ಸದ್ಯ ಕಾಟನ್ ಪೇಟೆ ಪೊಲೀಸರು ಇಮ್ರಾನ್ ಮತ್ತು ಆರೀಫ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಇಂದು ಮಧ್ಯರಾತ್ರಿಯಿಂದ ಲಾರಿ ಮುಷ್ಕರ; 2 ಲಕ್ಷ ಲಾರಿ ಸ್ಥಗಿತ, ಲಾರಿ ಸಂಘಟನೆಗಳ ಬೇಡಿಕೆಗಳೇನು?

ಹೋಟೆಲ್‌ನಲ್ಲಿ ಊಟ ಸೇವಿಸಿ ವಾಪಸಾಗುತ್ತಿದ್ದ ಯುವಕನ ಮೇಲೆ ಪುಂಡರ ಹಲ್ಲೆ

ಇನ್ನು ಮತ್ತೊಂದೆಡೆ ಹುಬ್ಬಳ್ಳಿಯ ವಿದ್ಯಾನಗರದ ರೇಣುಕಾ ಹೋಟೆಲ್‌ನಲ್ಲಿ ಊಟ ಸೇವಿಸಿ ವಾಪಸಾಗುತ್ತಿದ್ದ ಯುವಕನನ್ನು ವೀರಾಪುರ ಓಣಿಗೆ ಕರೆದೊಯ್ದು ಬೆಳಿಗ್ಗೆ ಎಂಟು ಘಂಟೆವರೆಗೆ ರೂಮ್‌ನಲ್ಲಿ ಕೂಡಿಹಾಕಿ ಪುಂಡರ ಗುಂಪೊಂದು ಹಲ್ಲೆ ನಡೆಸಿದೆ. ಹಳೇಹುಬ್ಬಳ್ಳಿಯ ಗುರುನಾಥನಗರದ ವಿವಿನ್ ರಿಚರ್ಡ್(23) ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ವೀರಾಪುರ ಓಣಿಗೆ ಕರೆದೊಯ್ದು ರೂಮ್‌ನಲ್ಲಿ ಕೂಡಿಹಾಕಿ ಹಲ್ಲೆಗೈದಿದ್ದಾರೆ.

ಜ.15ರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿವಿನ್ ರಿಚರ್ಡ್ ತಲೆ, ಕೈ, ಮುಖ, ಬೆನ್ನು, ಹೊಟ್ಟೆಗೆ ಕಲ್ಲಿನಿಂದ‌ ಜಜ್ಜಿ ಗಾಯಗೊಳಿಸಲಾಗಿದೆ. ವೀರಾಪೂರ ಓಣಿಯ ವಿಜಯ ಬಿಜವಾಡ ಹಾಗೂ ಸಹಚರರು ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ವಿದ್ಯಾನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಇನ್ನು ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?