ಬೆಂಗಳೂರು, ಜ.17: ನಗರದಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಮೇಲೆ ಕಲ್ಲು ತೂರಾಟವಾಗಿದೆ. ಬೆಂಗಳೂರಿನ ಶಾಂತಲಾ ಸಿಗ್ನಲ್ನಲ್ಲಿ ನಿನ್ನೆ ಮಧ್ಯ ರಾತ್ರಿ 2 ಕೆಎಸ್ಆರ್ಟಿಸಿ ಬಸ್ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. KSRTC ಬಸ್ಗಳ ಗ್ಲಾಸ್ ಹೊಡೆದು ಅಟ್ಟಹಾಸ ಮೆರೆದಿದ್ದಾರೆ. ಎರಡು KSRTC ಬಸ್ಗಳ ಗ್ಲಾಸ್ಗಳು ಪುಡಿ ಪುಡಿಯಾಗಿವೆ. ಇಮ್ರಾನ್ ಮತ್ತು ಆರೀಫ್ ಎಂಬ ಇಬ್ಬರು ಕಿಡಿಗೇಡಿಗಳು ದೊಣ್ಣೆಯಿಂದ ಗ್ಲಾಸ್ ಹೊಡೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ 2 KSRTC ಬಸ್ಗಳು ಶಾಂತಲಾ ಸಿಗ್ನಲ್ ಬಳಿ ನಿಂತಿವೆ. ಹಿಂದೆಯೇ 1 ಆಟೋ, ಎರಡು ಬೈಕ್ಗಳಲ್ಲಿ ಬಂದಿದ್ದ ಐವರು ಪುಂಡರು ಏಕಾಏಕಿ ರಾಡ್, ದೊಣ್ಣೆ, ಕಲ್ಲುಗಳಿಂದ ಕೆಎಸ್ಆರ್ಟಿಸಿ ಬಸ್ನ ಗಾಜು ಹೊಡೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಮಧ್ಯರಾತ್ರಿ 1.45ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಘಟನೆ ನಡೆಯಲು ಕಾರಣ ಏನು ಎಂಬ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ. ಸದ್ಯ ಕಾಟನ್ ಪೇಟೆ ಪೊಲೀಸರು ಇಮ್ರಾನ್ ಮತ್ತು ಆರೀಫ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಇಂದು ಮಧ್ಯರಾತ್ರಿಯಿಂದ ಲಾರಿ ಮುಷ್ಕರ; 2 ಲಕ್ಷ ಲಾರಿ ಸ್ಥಗಿತ, ಲಾರಿ ಸಂಘಟನೆಗಳ ಬೇಡಿಕೆಗಳೇನು?
ಇನ್ನು ಮತ್ತೊಂದೆಡೆ ಹುಬ್ಬಳ್ಳಿಯ ವಿದ್ಯಾನಗರದ ರೇಣುಕಾ ಹೋಟೆಲ್‌ನಲ್ಲಿ ಊಟ ಸೇವಿಸಿ ವಾಪಸಾಗುತ್ತಿದ್ದ ಯುವಕನನ್ನು ವೀರಾಪುರ ಓಣಿಗೆ ಕರೆದೊಯ್ದು ಬೆಳಿಗ್ಗೆ ಎಂಟು ಘಂಟೆವರೆಗೆ ರೂಮ್‌ನಲ್ಲಿ ಕೂಡಿಹಾಕಿ ಪುಂಡರ ಗುಂಪೊಂದು ಹಲ್ಲೆ ನಡೆಸಿದೆ. ಹಳೇಹುಬ್ಬಳ್ಳಿಯ ಗುರುನಾಥನಗರದ ವಿವಿನ್ ರಿಚರ್ಡ್(23) ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ವೀರಾಪುರ ಓಣಿಗೆ ಕರೆದೊಯ್ದು ರೂಮ್‌ನಲ್ಲಿ ಕೂಡಿಹಾಕಿ ಹಲ್ಲೆಗೈದಿದ್ದಾರೆ.
ಜ.15ರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿವಿನ್ ರಿಚರ್ಡ್ ತಲೆ, ಕೈ, ಮುಖ, ಬೆನ್ನು, ಹೊಟ್ಟೆಗೆ ಕಲ್ಲಿನಿಂದ ಜಜ್ಜಿ ಗಾಯಗೊಳಿಸಲಾಗಿದೆ. ವೀರಾಪೂರ ಓಣಿಯ ವಿಜಯ ಬಿಜವಾಡ ಹಾಗೂ ಸಹಚರರು ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ವಿದ್ಯಾನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಇನ್ನು ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ