AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಗಾಂಧಿ ಬಜಾರಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಿವಮೊಗ್ಗದ ವಕೀಲರಿಗೆ ಬೈಕ್​ನಿಂದ ಗುದ್ದಿದ ಯುವಕ, ವಕೀಲ ಸಾವು

ರಾತ್ರಿ 9 ಗಂಟೆ ಸುಮಾರಿಗೆ ಬಸವನಗುಡಿಯ ಗಾಂಧಿ ಬಜಾರ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಿವಮೊಗ್ಗ ಮೂಲದ ಹಿರಿಯ ವಕೀಲರಿಗೆ ಯುವಕ ಬೈಕ್ ಮೂಲಕ ಗುದ್ದಿದ್ದಾನೆ. ಅಪಫಾತದಲ್ಲಿ ವಕೀಲ ಮೃತಪಟ್ಟಿದ್ದು ಯುವಕನಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಬಸವನಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ಗಾಂಧಿ ಬಜಾರಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಿವಮೊಗ್ಗದ ವಕೀಲರಿಗೆ ಬೈಕ್​ನಿಂದ ಗುದ್ದಿದ ಯುವಕ, ವಕೀಲ ಸಾವು
ಹಿರಿಯ ವಕೀಲ ಕೆ.ಟಿ.ಡಾಕಪ್ಪ
ಜಗದೀಶ ಬಿ.
| Edited By: ಆಯೇಷಾ ಬಾನು|

Updated on:Feb 27, 2024 | 10:28 AM

Share

ಬೆಂಗಳೂರು, ಫೆ.27: ನಡೆದುಕೊಂಡು ಹೋಗುತಿದ್ದ ಶಿವಮೊಗ್ಗ ಮೂಲದ ಹಿರಿಯ ವಕೀಲರಿಗೆ ಬೈಕ್ ಡಿಕ್ಕಿಯಾಗಿ ವಕೀಲ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ (Accident). ಹಿರಿಯ ವಕೀಲ ಕೆ.ಟಿ.ಡಾಕಪ್ಪ ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಬಸವನಗುಡಿಯ ಗಾಂಧಿ ಬಜಾರ್ ರಸ್ತೆಯಲ್ಲಿ (Basavanagudi Gandhi Bazar) ಅಪಘಾತ ಸಂಭವಿಸಿದೆ. ಕೆ.ಟಿ.ಡಾಕಪ್ಪ ಅವರು ಕಾರು ನಿಲ್ಲಿಸಿ ಡಿವಿಜೆ ರಸ್ತೆಯ ಕಚೇರಿಗೆ ಹೋಗಿದರು. ಬಳಿಕ ಮನೆಗೆ ಹೋಗಲು ವಾಪಸ್ ಕಾರ್ ಬಳಿ ನಡೆದುಕೊಂಡು ಬರುವಾಗ ಅಪಘಾತ ಸಂಭವಿಸಿದೆ.

ಕೆಟಿಎಂ ಬೈಕ್​ನಲ್ಲಿ ಅತೀ ವೇಗವಾಗಿ ಬಂದ ಅದಿತ್ಯಾ (21) ಎಂಬ ಯುವಕ ನಡೆದುಕೊಂಡು ಹೋಗುತ್ತಿದ್ದ ವಕೀಲ ಡಾಕಪ್ಪ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಡಾಕಪ್ಪ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು ಡಾಕಪ್ಪ ಅವರನ್ನು ಸ್ಥಳೀಯರು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಡಾಕಪ್ಪ ನಿಧನರಾಗಿದ್ದಾರೆ. ಹೈ ಕೋರ್ಟ್ ಹಾಗೂ ಇತರ ನ್ಯಾಯಾಲಯದಲ್ಲಿ ಹಿರಿಯ ವಕೀಲರಾಗಿದ್ದ ಡಾಕಪ್ಪ ಶಿವಮೊಗ್ಗ ಮೂಲದ ತೀರ್ಥಹಳ್ಳಿಯ ಕೌರಿ ಮೂಲದವರು. ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ವಕೀಲ ವೃತ್ತಿ ಮಾಡುತ್ತಿದ್ರು.

ವಕೀಲ ಡಾಕಪ್ಪರಿಗೆ ಗುದ್ದಿದ ಬಳಿಕ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರ ಆದಿತ್ಯಾನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಸವನಗುಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವನಗುಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: 12 ಗಂಟೆಗೂ ಅಧಿಕ ಕಾಲ ಮನೆಯಲ್ಲೇ ಶವ ಇಟ್ಟುಕೊಂಡು ವೃದ್ಧೆಯ ದೇಹವನ್ನ ತುಂಡರಿಸಿದ ಹಂತಕ, ಕೊಲೆ ಹಿಂದಿನ ಕಾರಣ ರಿವಿಲ್​

ಎತ್ತಿನ ಬಂಡಿಗೆ, ಬೈಕ್ ಡಿಕ್ಕಿ ಮೂವರು ಸಾವು

ನಿಂತಿದ್ದ ಎತ್ತಿನ ಬಂಡಿಗೆ, ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಹೊಸ ದರೋಜಿ ಗ್ರಾಮದ ಬಳಿ ಅಪಘಾತ ನಡೆದಿದೆ. ಒಂದೇ ಬೈಕ್‌ನಲ್ಲಿ ಐದು ಜನ್ರು ಪ್ರಯಾಣಿಸ್ತಿದ್ದರು. ಬೈಕ್‌‌ನಲ್ಲಿದ್ದ ಜಂಬುನಾಥ್‌‌ಹಳ್ಳಿಯ ವೆಂಕಟೇಶ, ಹೊಸಪೇಟೆಯ ಅಖಿಲಾ, ಆಶಾ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ನಾಲ್ಕು ವರ್ಷದ ಸರಸ್ವತಿ ಮತ್ತು ಜಂಬಕ್ಕ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕುಡುತಿನಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ರು.

ಬೈಕ್ ಸವಾರ ದುರ್ಮರಣ

ಬೈಕ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರ ಭೀಮೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಬಳಿ ಅಪಘಾತ ಸಂಭವಿಸಿದ್ದು, ಹಿಂಬದಿ ಬೈಕ್ ಸವಾರ ಪ್ರತಾಪ್​ ನ ಎರಡು ಕಾಲು ಮುರಿದು ಆತನ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನ ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲು ಚಿಕಿತ್ಸೆಗೆ ನೀಡಲಾಗ್ತಿದೆ. ಶಿಕಾರಿಪುರ ತಾಲೂಕಿನಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನೋಡಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:09 am, Tue, 27 February 24

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ