ಬೆಂಗಳೂರು, ಫೆ.27: ನಡೆದುಕೊಂಡು ಹೋಗುತಿದ್ದ ಶಿವಮೊಗ್ಗ ಮೂಲದ ಹಿರಿಯ ವಕೀಲರಿಗೆ ಬೈಕ್ ಡಿಕ್ಕಿಯಾಗಿ ವಕೀಲ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ (Accident). ಹಿರಿಯ ವಕೀಲ ಕೆ.ಟಿ.ಡಾಕಪ್ಪ ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಬಸವನಗುಡಿಯ ಗಾಂಧಿ ಬಜಾರ್ ರಸ್ತೆಯಲ್ಲಿ (Basavanagudi Gandhi Bazar) ಅಪಘಾತ ಸಂಭವಿಸಿದೆ. ಕೆ.ಟಿ.ಡಾಕಪ್ಪ ಅವರು ಕಾರು ನಿಲ್ಲಿಸಿ ಡಿವಿಜೆ ರಸ್ತೆಯ ಕಚೇರಿಗೆ ಹೋಗಿದರು. ಬಳಿಕ ಮನೆಗೆ ಹೋಗಲು ವಾಪಸ್ ಕಾರ್ ಬಳಿ ನಡೆದುಕೊಂಡು ಬರುವಾಗ ಅಪಘಾತ ಸಂಭವಿಸಿದೆ.
ಕೆಟಿಎಂ ಬೈಕ್‌ನಲ್ಲಿ ಅತೀ ವೇಗವಾಗಿ ಬಂದ ಅದಿತ್ಯಾ (21) ಎಂಬ ಯುವಕ ನಡೆದುಕೊಂಡು ಹೋಗುತ್ತಿದ್ದ ವಕೀಲ ಡಾಕಪ್ಪ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ಡಾಕಪ್ಪ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು ಡಾಕಪ್ಪ ಅವರನ್ನು ಸ್ಥಳೀಯರು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಡಾಕಪ್ಪ ನಿಧನರಾಗಿದ್ದಾರೆ. ಹೈ ಕೋರ್ಟ್ ಹಾಗೂ ಇತರ ನ್ಯಾಯಾಲಯದಲ್ಲಿ ಹಿರಿಯ ವಕೀಲರಾಗಿದ್ದ ಡಾಕಪ್ಪ ಶಿವಮೊಗ್ಗ ಮೂಲದ ತೀರ್ಥಹಳ್ಳಿಯ ಕೌರಿ ಮೂಲದವರು. ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ವಕೀಲ ವೃತ್ತಿ ಮಾಡುತ್ತಿದ್ರು.
ವಕೀಲ ಡಾಕಪ್ಪರಿಗೆ ಗುದ್ದಿದ ಬಳಿಕ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರ ಆದಿತ್ಯಾನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಸವನಗುಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವನಗುಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರು: 12 ಗಂಟೆಗೂ ಅಧಿಕ ಕಾಲ ಮನೆಯಲ್ಲೇ ಶವ ಇಟ್ಟುಕೊಂಡು ವೃದ್ಧೆಯ ದೇಹವನ್ನ ತುಂಡರಿಸಿದ ಹಂತಕ, ಕೊಲೆ ಹಿಂದಿನ ಕಾರಣ ರಿವಿಲ್
ನಿಂತಿದ್ದ ಎತ್ತಿನ ಬಂಡಿಗೆ, ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಹೊಸ ದರೋಜಿ ಗ್ರಾಮದ ಬಳಿ ಅಪಘಾತ ನಡೆದಿದೆ. ಒಂದೇ ಬೈಕ್‌ನಲ್ಲಿ ಐದು ಜನ್ರು ಪ್ರಯಾಣಿಸ್ತಿದ್ದರು. ಬೈಕ್‌ನಲ್ಲಿದ್ದ ಜಂಬುನಾಥ್‌ಹಳ್ಳಿಯ ವೆಂಕಟೇಶ, ಹೊಸಪೇಟೆಯ ಅಖಿಲಾ, ಆಶಾ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ನಾಲ್ಕು ವರ್ಷದ ಸರಸ್ವತಿ ಮತ್ತು ಜಂಬಕ್ಕ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕುಡುತಿನಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ರು.
ಬೈಕ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರ ಭೀಮೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಬಳಿ ಅಪಘಾತ ಸಂಭವಿಸಿದ್ದು, ಹಿಂಬದಿ ಬೈಕ್ ಸವಾರ ಪ್ರತಾಪ್ ನ ಎರಡು ಕಾಲು ಮುರಿದು ಆತನ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನ ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲು ಚಿಕಿತ್ಸೆಗೆ ನೀಡಲಾಗ್ತಿದೆ. ಶಿಕಾರಿಪುರ ತಾಲೂಕಿನಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನೋಡಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.
ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 10:09 am, Tue, 27 February 24