AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಶಾಲೆ ಪ್ರಿನ್ಸಿಪಾಲ್ ಪೊಲೀಸ್ ವಶಕ್ಕೆ

ವರ್ತೂರು ಸಮೀಪದ ಖಾಸಗಿ ಶಾಲೆಯೊಂದರಲ್ಲಿ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಲಾಗಿದೆ. ವರ್ತೂರು ಪೊಲೀಸರು ಶಾಲಾ‌ ಸಂಸ್ಥಾಪಕ ಮತ್ತು ಪ್ರಾಂಶುಪಾಲನಾಗಿರುವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಲ್ಲಿ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಶಾಲೆ ಪ್ರಿನ್ಸಿಪಾಲ್ ಪೊಲೀಸ್ ವಶಕ್ಕೆ
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on:Aug 04, 2023 | 11:31 AM

Share

ಬೆಂಗಳೂರು, ಆ.04: ಬೆಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಶಾಲೆಯಲ್ಲೇ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಲಾಗಿದೆ. ವರ್ತೂರು ಸಮೀಪದ ಖಾಸಗಿ ಶಾಲೆಯೊಂದರಲ್ಲಿ ಘಟನೆ ನಡೆದಿದ್ದು ವರ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲಾ‌ ಸಂಸ್ಥಾಪಕ ಮತ್ತು ಪ್ರಾಂಶುಪಾಲನಾಗಿರುವ ವ್ಯಕ್ತಿಯೇ ಕೃತ್ಯ ಎಸಗಿರುವ ಆರೋಪ ಕೇಳಿ ಬಂದಿದೆ.

ನಿನ್ನೆ(ಆ.03) ಎಂದಿನಂತೆ 10 ವರ್ಷದ ವಿದ್ಯಾರ್ಥಿನಿ ಶಾಲೆಗೆ ತೆರಳಿದ್ದಳು. ಶಾಲೆಗೆ ಬಂದ ವಿದ್ಯಾರ್ಥಿನಿಯನ್ನು ಕಂಡ ಕಾಮುಕ ಪ್ರಾಂಶುಪಾಲ ವಿದ್ಯಾರ್ಥಿನಿಯನ್ನು ಖಾಲಿ ರೂಮಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಮನೆಗೆ ಬಂದ ಮಗಳು ನೋವು ತಾಳದೆ ಒದ್ದಾಡಿದನ್ನು ಕಂಡ ಪೋಷಕರು ಮಗಳ ಬಳಿ ವಿಚಾರಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಈ ವೇಳೆ ಕೃತ್ಯ ಬಯಲಾಗಿದೆ. ವರ್ತೂರು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಅತ್ಯಾಚಾರಕ್ಕೊಳಗಾದ 10 ವರ್ಷದ ಬಾಲಕಿ ನರದೌರ್ಬಲ್ಯ(Mild Dyslexia oct) ಕಾಯಿಲೆಯಿಂದ ಬಳಲುತ್ತಿದ್ದಳು. ಗುಂಜೂರು ಸಮೀಪದ ಖಾಸಗಿ ಶಾಲೆಯಲ್ಲಿ 2ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು. ನಿನ್ನೆ ಬೆಳಗ್ಗೆ 8.30 ಕ್ಕೆ ಶಾಲೆಗೆ ತೆರಳಿದ್ದು ಮಧ್ಯಾಹ್ನ 3.30 ಕ್ಕೆ ಶಾಲೆಯಿಂದ ಮನೆಗೆ ವಾಪಸ್ಸಾಗಿದ್ದಾಳೆ. ತನ್ನ ತಾಯಿಗೆ ಹೊಟ್ಟೆ ನೋವು ಎಂದು ಹೇಳಿಕೊಂಡಿದ್ದಾಳೆ. ಸ್ನಾನ ಮಾಡಿಸಿ ಕರೆತರುವಾಗ ರಕ್ತದ ಕಲೆಗಳು ಕಂಡುಬಂದಿದೆ. ಈ ವಿಚಾರವಾಗಿ ಕೇಳಿದಾಗ ಪುಟ್ಟ ಬಾಲಕಿ ಘಟನೆ ವಿವರಿಸಿದ್ದಾಳೆ. ಮೊದಲು ಪ್ರಾಂಶುಪಾಲರ ಕೊಠಡಿಗೆ ಕರೆದುಕೊಂಡು ಹೋದರು. ವಿಶ್ರಾಂತಿ ಪಡೆಯುವಂತೆ ಹೇಳಿ ಅತ್ಯಾಚಾರ ಎಸಗಿದರು. ನಂತರ ಕೇಕ್ ತಿನ್ನಿಸಿ ಕಳುಹಿಸಿದರು ಎಂದು ಪುಟ್ಟ ಬಾಲಕಿ ತಾಯಿಯ ಮುಂದೆ ಕೃತ್ಯವನ್ನು ವಿವರಿಸಿದ್ದಾಳೆ. ಸದ್ಯ ಮಗುವಿಗೆ ರಕ್ತಸ್ರಾವ ಹೆಚ್ಚಾಗಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:17 am, Fri, 4 August 23