ಆಂಬ್ಯುಲೆನ್ಸ್ ಡ್ರೈವರ್ ಅವಾಂತರ; ಮೂರು ಕಾರು, ಒಂದು ಬೈಕ್ ನಡುವೆ ಸರಣಿ ಅಪಘಾತ

ಬೆಂಗಳೂರಿನ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಿನ್ನೆ (ಏ.26) ರಾತ್ರಿ 10.45 ರ ಸುಮಾರಿಗೆ ಆಂಬ್ಯುಲೆನ್ಸ್ ಡ್ರೈವರ್(Ambulance driver)ಅವಾಂತರದಿಂದ ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ(Accident)ವಾದ ಘಟನೆ ನಡೆದಿದೆ. ಘಟನೆಯ ಭಯಾನಕ‌ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಆಂಬ್ಯುಲೆನ್ಸ್ ಡ್ರೈವರ್ ಅವಾಂತರ; ಮೂರು ಕಾರು, ಒಂದು ಬೈಕ್ ನಡುವೆ ಸರಣಿ ಅಪಘಾತ
ಬೆಂಗಳೂರಿನಲ್ಲಿ ಆಂಬ್ಯಯಲೇನ್ಸ್​ ಡ್ರೈವರ್​ ಅಪಘಾತ
Follow us
ರಾಚಪ್ಪಾಜಿ ನಾಯ್ಕ್
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 27, 2024 | 3:55 PM

ಬೆಂಗಳೂರು, ಏ.27: ಆಂಬ್ಯುಲೆನ್ಸ್ ಡ್ರೈವರ್(Ambulance driver)ಅವಾಂತರದಿಂದ ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ(Accident)ವಾದ ಘಟನೆ ನಿನ್ನೆ (ಏ.26) ರಾತ್ರಿ 10.45 ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ನಡೆದಿದೆ. ಈ ವೇಳೆ ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿ ಬಚಾವ್ ಆಗಿದ್ದಾರೆ. ಮಾರ್ಕೆಟ್​ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ಆಂಬ್ಯುಲೆನ್ಸ್ ಚಾಲಕ ಸುಮಂತ್ ವೇಗವಾಗಿ ಬರುತ್ತಿದ್ದ. ಈ ಸಂದರ್ಭದಲ್ಲಿ ನಿಯಂತ್ರಣ ಸಿಗದೆ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ.

ಕಾರಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಪ್ರಾಣಾಪಾಯದಿಂದ ಪಾರು

ಇನ್ನು ಕಾರು ಡಿಕ್ಕಿಯಿಂದ ಮುಂದಿದ್ದ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತವಾಗಿದೆ.  ಈ ವೇಳೆ ಟೆಂಕ್ಷನ್​ನಲ್ಲಿ ಬ್ರೇಕ್ ತುಳಿಯದೆ ಎಕ್ಸಲೇಟರ್ ತುಳಿದು ಮತ್ತೆ ಅವಾಂತರವಾಗಿದೆ. ಬಳಿಕ ಕಾರಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‘

ಇದನ್ನೂ ಓದಿ:ಮಂಗಳೂರು: ಲಾರಿ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ; ಕಾರಿನಲ್ಲಿದ್ದವರು ಜಸ್ಟ್​ ಮಿಸ್​

ಘಟನೆಯ ಭಯಾನಕ‌ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಈ ಘಟನೆಯ ಭಯಾನಕ‌ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ವಲ್ಪ ಯಾಮಾರಿದ್ರು ಸಾವು ನೋವು ಸಂಭವಿಸುತ್ತಿತ್ತು. ಕರೆ ಬಂದ ಹಿನ್ನಲೆ ರೋಗಿ ಕರೆದೊಯ್ಯಲು ಮಾರ್ಕೆಟ್ ಕಡೆಯಿಂದ ಸ್ಯಾಟಲೈಟ್ ಕಡೆಗೆ ಆಂಬ್ಯುಲೆನ್ಸ್ ಆಗಮಿಸುತ್ತಿದ್ದು, ಈ ವೇಳೆ ಬ್ಯಾಲೆನ್ಸ್ ತಪ್ಪಿ ಆಪೋಸಿಟ್ ರಸ್ತೆಗೆ ನುಗ್ಗಿ, ಬಳಿಕ ಪಕ್ಕದಲ್ಲೇ ನಿಂತಿದ್ದ ಕಾರನ್ನು ಗುದ್ದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ