ಆನೇಕಲ್: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಸಾವು, 20 ಜನರಿಗೆ ಗಾಯ

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಮೃತಪಟ್ಟು 20 ಜನ ಗಾಯಗೊಂಡಿದ್ದಾರೆ. ಕಟ್ಟಡದ ಅವಶೇಷಗಳಡಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಆನೇಕಲ್: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಸಾವು, 20 ಜನರಿಗೆ ಗಾಯ
ಆನೇಕಲ್: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು 8 ಜನ ಗಂಭೀರ ಗಾಯ
Follow us
TV9 Web
| Updated By: Ganapathi Sharma

Updated on:Jan 19, 2024 | 10:18 AM

ಆನೇಕಲ್, ಜನವರಿ 18: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಮೃತಪಟ್ಟು 20 ಜನ ಗಾಯಗೊಂಡ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆ ಆನೇಕಲ್ (Anekal) ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಸಂಭವಿಸಿದೆ. ಮೃತರನ್ನು ಜಾರ್ಖಂಡ್​​ ಮೂಲದ ಮಿನರ್​ ಬಿಸ್ವಾಸ್​​, ಶಾಹೀದ್​ ಎಂದು ಗುರುತಿಸಲಾಗಿದೆ. ಗಾಯಾಳು ಕಾರ್ಮಿಕರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಕಟ್ಟಡದ ಅವಶೇಷಗಳಡಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ಇದೆ. ಎರಡನೇ ಅಂತಸ್ತಿನ ನಿರ್ಮಾಣದ ವೇಳೆ ಕಟ್ಟಡ ಕುಸಿದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.

ಚಿತ್ರದುರ್ಗ ಮದಕರಿಪುರ ಬಳಿ ಅಪಘಾತ; ಇಬ್ಬರು ಸಾವು

ಚಿತ್ರದುರ್ಗದ ಮದಕರಿಪುರ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಟ್ಯಾಂಕರ್ ಲಾರಿಗೆ ಕಾರ್ ಡಿಕ್ಕಿಯಾಗಿ ಸಂಭವಿಸಿದ ಭಿಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಕಾರ್ ನಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಬೆಂಗಳೂರು ಮೂಲದ ನಿರ್ಮಲ (55), ವಿನುತಾ (40) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಸಕಲೇಶಪುರ ಪೊಲೀಸ್​ ಕಾನ್ಸ್​ಟೇಬಲ್​ ಆತ್ಮಹತ್ಯೆ

ಫಣಿರಾಜ್ (36), ರಶ್ಮಿ (32), ಯಶಸ್ (02) ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿಂದ ಕಾರಲ್ಲಿ ಹೊಸಪೇಟೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:03 am, Fri, 19 January 24

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ