BMTC: ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕೊಡುಗೆ, ವೋಲ್ವೊ ಸೇರಿ ಎಲ್ಲ ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣ ಉಚಿತ
75 ನೇ ಅಮೃತ ಮಹೋತ್ಸವ ಹಿನ್ನಲೆ ಆಗಸ್ಟ್ 14 ರಂದು 75 ಎಲೆಕ್ಟ್ರಿಕ್ ಬಸ್ ಲೋಕಾರ್ಪಣೆ ಮಾಡಲಾಗುತ್ತಿದೆ. ಈಗಾಗಲೇ 90 ಎಲೆಕ್ಟ್ರಿಕ್ ಬಸ್ಗಳು ಕಾರ್ಯಾಚರಣೆ ನಡೆಸುತ್ತಿವೆ.
ಬೆಂಗಳೂರು: 75ನೇ ಸ್ವತಂತ್ರ ಭಾರತದ ಅಮೃತ ಮಹೋತ್ಸವ (Azadi Ka Amrut Mahotsav) ಹಿನ್ನಲೆ ಆಗಸ್ಟ್ 15 ರಂದು ಬಿಎಂಟಿಸಿ ಇಡೀ ದಿನ ಬೆಂಗಳೂರಿನಾದ್ಯಂತ ಉಚಿತ ಪ್ರಯಾಣ ನೀಡುವುದಾಗಿ ಘೋಷಣೆ ಮಾಡಿದೆ. 24 ಗಂಟೆಗಳ ಕಾಲ ಸಂಪೂರ್ಣ ಫೀ ಸಂಚಾರವಿದ್ದು, ವೋಲ್ವೋ ಸೇರಿ ಎಲ್ಲಾ ಬಿಎಂಟಿಸಿ ಬಸ್ನಲ್ಲೂ ಉಚಿತ ಪ್ರಯಾಣ ಸೌಲಭ್ಯ ನೀಡಿದ್ದು ಇದರಿಂದ ಬಿಎಂಟಿಸಿಗೆ 3 ಕೋಟಿ ಹೊರೆ ಬೀಳಲಿದೆ. ಸರ್ಕಾರದ ಒಪ್ಪಿಗೆ ಕೊಟ್ಟ ಹಿನ್ನಲೆ ಉಚಿತ ಪ್ರಯಾಣದ ಘೋಷಣೆ ಮಾಡಲಾಗಿದೆ. ಅದೇ ರೀತಿಯಾಗಿ 75 ನೇ ಅಮೃತ ಮಹೋತ್ಸವ ಹಿನ್ನಲೆ ಆಗಸ್ಟ್ 14 ರಂದು 75 ಎಲೆಕ್ಟ್ರಿಕ್ ಬಸ್ ಲೋಕಾರ್ಪಣೆ ಮಾಡಲಾಗುತ್ತಿದೆ. ಈಗಾಗಲೇ 90 ಎಲೆಕ್ಟ್ರಿಕ್ ಬಸ್ಗಳು ಕಾರ್ಯಾಚರಣೆ ನಡೆಸುತ್ತಿವೆ. ಈಗ ಅದರ ಜೊತೆಗೆ ಹೊಸ 75 ಎಲೆಕ್ಟ್ರಿಕ್ ಬಸ್ ಸೇರ್ಪಡೆಯಾಗಿವೆ ಎಂದು ಬಿಎಂಟಿಸಿಯಿಂದ ಘೋಷಣೆ ಮಾಡಿದೆ.
ಇದನ್ನೂ ಓದಿ: Breaking News: ಕರ್ನಾಟಕದಲ್ಲಿ ಮಾಸ್ಕ್ ಕಡ್ಡಾಯ; ಆರೋಗ್ಯ ಸಚಿವ ಸುಧಾಕರ
300 ಎಲೆಕ್ಟ್ರಿಕ್ ಬಸ್ಗಳ ಲೋಕಾರ್ಪಣೆ:
ದಿನಾಂಕ: 14.08.2022 ರಂದು ವಿಧಾನಸೌಧ ಪೂರ್ವದ್ವಾರದಲ್ಲಿ 12 ಮೀಟರ್ ಉದ್ಯದ 300 ಎಲೆಕ್ಟ್ರಿಕ್ ಬಸ್ಗಳನ್ನು ಲೋಕಾರ್ಪಣೆಗೊಳಿಸಲಾಗುತ್ತಿದೆ. ದಿನಾಂಕ: 15.08.2022 ರಂದು ಸಂಸ್ಥೆಯ ಎಲ್ಲಾ ಮಾರ್ಗಗಳನ್ನು ಪ್ರಯಾಣಿಕರಿಗಾಗಿ ಉಚಿತವಾಗಿ ಆಚರಣೆ ಮಾಡಲಾಗುತ್ತದೆ. ದಿನಾಂಕ: 16.8.2022 ರಂದು ಕತ್ತರಿಗುಪ್ಪೆಯಲ್ಲಿರುವ ಸಂಸ್ಥೆಯ ಸಮುಧಾಯಭವನದಲ್ಲಿ ಅಪಘಾತ ರಹಿತ ಚಾಲಕರಿಗೆ ಚಿನ್ನ (168) ಮತ್ತು ಬೆಳ್ಳಿ (2968) ಪದಕಗಳನ್ನು ವಿತರಿಸಲಾಗುತ್ತದೆ. ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 45 ವರ್ಷ ಮೇಲ್ಪಟ್ಟ ಸುಮಾರು 10700 ಸಿಬ್ಬಂದಿ/ಅಧಿಕಾರಿಗಳಿಗೆ ಜಯದೇವ ಆಸ್ಪತ್ರೆಯಲ್ಲಿ ಉಚಿತವಾಗಿ ಹೃದಯ ಸಂಬಂಧಿತ ಆರೋಗ್ಯ ತಪಾಸಣೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತಿಳಿಸಿದೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 1:31 pm, Thu, 11 August 22