ಬೆಂಗಳೂರು: ತೆಲುಗು ನಟಿಯರು ಭಾಗಿಯಾಗಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ದಾಳಿ; ಡ್ರಗ್ಸ್, ಕೊಕೇನ್ ಪತ್ತೆ

ಎಲೆಕ್ಟ್ರಾನಿಕ್ ಸಿಟಿ ಬಳಿಯ G.R.ಫಾರ್ಮ್​​​ಹೌಸ್​​ನಲ್ಲಿ ತಡರಾತ್ರಿ ವರೆಗೂ ರೇವ್ ಪಾರ್ಟಿ ನಡೆದಿದ್ದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ರು. ದಾಳಿ ವೇಲೆ ಡ್ರಗ್ಸ್, ಕೊಕೇನ್ ಪತ್ತೆಯಾಗಿದ್ದು ಈ ಪಾರ್ಟಿಯಲ್ಲಿ ಮಾಡೆಲ್​​ಗಳು, ಟೆಕ್ಕಿಗಳು ಹಾಗೂ ತೆಲುಗು ನಟಿಯರು ಕೂಡ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

ಬೆಂಗಳೂರು: ತೆಲುಗು ನಟಿಯರು ಭಾಗಿಯಾಗಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ದಾಳಿ; ಡ್ರಗ್ಸ್, ಕೊಕೇನ್ ಪತ್ತೆ
ಬೆಂಗಳೂರು: ತೆಲುಗು ನಟಿಯರು ಭಾಗಿಯಾಗಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ದಾಳಿ
Follow us
ಆಯೇಷಾ ಬಾನು
|

Updated on: May 20, 2024 | 7:47 AM

ಬೆಂಗಳೂರು, ಮೇ.20: ನಗರದ ಎಲೆಕ್ಟ್ರಾನಿಕ್ ಸಿಟಿ ಬಳಿಯ G.R.ಫಾರ್ಮ್​​​ಹೌಸ್​​ನಲ್ಲಿ ನಡೆಯುತ್ತಿದ್ದ ರೇವ್​​ಪಾರ್ಟಿ (Rave Party) ಮೇಲೆ ಸಿಸಿಬಿ (CCB) ತಂಡ ದಾಳಿ ನಡೆಸಿದೆ. ಬೆಳಗಿನ ಜಾವ 3 ಗಂಟೆಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು ದಾಳಿ ವೇಳೆ ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ. ಹಾಗೂ ಕೆಲ ತೆಲುಗು ನಟಿಯರು ಕೂಡ ಈ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.

ಕಾನ್ ಕಾರ್ಡ್ ಮಾಲೀಕ ಗೋಪಾಲ ರೆಡ್ಡಿ ಎಂಬುವವರ ಮಾಲಿಕತ್ವದ G.R.ಫಾರ್ಮ್​​​ಹೌಸ್​​ನಲ್ಲಿ ಹೈದ್ರಾಬಾದ್ ಮೂಲದ ವಾಸು ಎಂಬಾತ ಪಾರ್ಟಿ ಆಯೋಜನೆ ಮಾಡಿದ್ದ. ಬರ್ತಡೇ ಪಾರ್ಟಿ ಹೆಸರಿನಲ್ಲಿ ನಡೆಯುತ್ತಿದ್ದ ಈ ಪಾರ್ಟಿ ತಡರಾತ್ರಿ 2 ಗಂಟೆಯಾದ್ರೂ ಮುಗಿದಿರಲಿಲ್ಲ. ಅವಧಿ ಮೀರಿ ಪಾರ್ಟಿ ಮಾಡಲಾಗುತ್ತಿತ್ತು. ಹೀಗಾಗಿ ಸಿಸಿಬಿಯ ಆಂಟಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದು ಪಾರ್ಟಿಯಲ್ಲಿ ಡ್ರಗ್ಸ್ ಪತ್ತೆಯಾಗಿದೆ.

ದಾಳಿ ವೇಳೆ 17 ಎಂಡಿಎಂಎ ಮಾತ್ರೆ, ಕೊಕೇನ್ ಪತ್ತೆಯಾಗಿದೆ. ಆಂಧ್ರ, ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನ ಮತ್ತು 25ಕ್ಕೂ ಹೆಚ್ಚು ಯುವತಿಯರು ಪಾರ್ಟಿಯಲ್ಲಿ ಭಾಗಿಯಾಗಿದ್ದು ತಿಳಿದುಬಂದಿದೆ. ಆಯೋಜಕ ಪಾರ್ಟಿಗಾಗಿಯೇ ಆಂಧ್ರದಿಂದ ಫ್ಲೈಟ್ ನಲ್ಲಿ ಜನರನ್ನು ಕರೆಸಿಕೊಂಡಿದ್ದ. ಇನ್ನು ಅಚ್ಚರಿ ಎಂದರೆ

ಇದನ್ನೂ ಓದಿ: ಬೆಂಗಳೂರು; ಡ್ರೈವರ್ ಸೀಟ್​ನಲ್ಲಿ ಡ್ರೈವರ್ ಇಲ್ಲ, ಆದರೂ ಊರೆಲ್ಲ ಸುತ್ತುತ್ತಿದೆ ಈ ಕಾರು

ಒಂದು ಬೆಂಜ್ ಕಾರಿನಲ್ಲಿ ಆಂಧ್ರ ಶಾಸಕನ ಪಾಸ್ ಪತ್ತೆಯಾಗಿದೆ. ಎಂಎಲ್​ಎ ಕಾಕನಿ ಗೋವರ್ಧನರೆಡ್ಡಿ ಹೆಸರಿನ ಪಾಸ್ ಸಿಕ್ಕಿದೆ. ಜೊತೆಗೆ ದಾಳಿ ನಡೆದ ಫಾರ್ಮ್​​​ಹೌಸ್ ಬಳಿ ಮರ್ಸಿಡಿಸ್-ಬೆನ್ಜ್, ಜಾಗ್ವಾರ್, ಆಡಿ ಕಾರ್ ಸೇರಿದಂತೆ 15ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಪತ್ತೆಯಾಗಿವೆ. ಇನ್ನು ಈ ಪಾರ್ಟಿಯಲ್ಲಿ ಮಾಡೆಲ್​​ಗಳು ಹಾಗೂ ಟೆಕ್ಕಿಗಳು ಭಾಗಿಯಾಗಿದ್ದರು ಜೊತೆಗೆ ತೆಲುಗು ನಟಿಯರು ಕೂಡ ಭಾಗಿಯಾಗಿದ್ದರು. ಸದ್ಯ ಈ ಘಟನೆ ಸಂಬಂಧ ಎಲೆಕ್ಟ್ರಾನಿಕ್​​ಸಿಟಿ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಭಾನುವಾರ ಸಂಜೆ ಐದು ಘಂಟೆಯಿಂದ ಬೆಳಗ್ಗೆ ಆರು ಘಂಟೆ ತನಕ ಈ ಪಾರ್ಟಿ ನಡೆಯಬೇಕಿತ್ತು. ಸದ್ಯ ಸಿಸಿಬಿ ಪೊಲೀಸರು ತಡರಾತ್ರಿ ದಾಳಿ ನಡೆಸಿ ಅಕ್ರಮ ಬಯಲಿಗೆಳೆದಿದ್ದಾರೆ. ನಗರದ ಒಳಭಾಗದಲ್ಲಿ ದಾಳಿಗಳು ನಿರಂತರ ನಡೆಯುತಿದ್ದ ಹಿನ್ನಲೆ ಹೊರ ವಲಯದಲ್ಲಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಒಂದು ದಿನದ ಪಾರ್ಟಿಗೆ ಮೂವತ್ತರಿಂದ ಐವತ್ತು ಲಕ್ಷ ಖರ್ಚು ಮಾಡಿ ಆಯೋಜನೆ ಮಾಡಲಾಗಿತ್ತು. ಸದ್ಯ ನಾರ್ಕೊಟಿಕ್ಸ್ ಸ್ನಿಫರ್ ಡಾಗ್ ಗಳಿಂದ ಸ್ಥಳ ಪರಿಶೀಲನೆ ನಡೆಸಲಾಗಿದೆ. ಪೊಲೀಸರು ಪಾರ್ಟಿಯಲ್ಲಿ ಭಾಗಿಯಾದವರ ಗುರುತು ಪತ್ತೆ ಮಾಡುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ