ಬೆಂಗಳೂರು: ಕೆಪಿಎಸ್​ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ 4 ಕೋಟಿ ವಂಚನೆ, ನಾಲ್ವರನ್ನು ಬಂಧಿಸಿದ ಸಿಸಿಬಿ

ನಾಲ್ವರ ಗುಂಪೊಂದು ಮಹಿಳೆಯೊಬ್ಬರಿಗೆ ಕೆಪಿಎಸ್​ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಒರೋಬ್ಬರಿ 4.10 ಕೋಟಿ ಹಣ ಪಡೆದು ವಂಚನೆ ಮಾಡಿದ್ದಾರೆ. ಆರೋಪಿಗಳು ಸಿಎಂ ಹಾಗೂ ರಾಜ್ಯಪಾಲರ ನಕಲಿ ಲೆಟರ್ ಹೆಡ್ ಹಾಗೂ ನಕಲಿ ಸಹಿ ಬಳಸಿ ಹಣ ಪಡೆದು ವಂಚಿಸಿದ್ದಾರೆ. ಸದ್ಯ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕೆಪಿಎಸ್​ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ 4 ಕೋಟಿ ವಂಚನೆ, ನಾಲ್ವರನ್ನು ಬಂಧಿಸಿದ ಸಿಸಿಬಿ
ಪ್ರಾತಿನಿಧಿಕ ಚಿತ್ರ
Follow us
ರಾಚಪ್ಪಾಜಿ ನಾಯ್ಕ್
| Updated By: ಆಯೇಷಾ ಬಾನು

Updated on: Apr 02, 2024 | 1:07 PM

ಬೆಂಗಳೂರು, ಏಪ್ರಿಲ್.02: ಖತರ್ನಾಕ್ ಗ್ಯಾಂಗೊಂದು ಕೆಪಿಎಸ್​ಸಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 4 ಕೋಟಿ ಹಣ ಪಡೆದು ವಂಚನೆ ಮಾಡಿರುವ ಘಟನೆ ಬಯಲಾಗಿದೆ. ಕೆಪಿಎಸ್​ಸಿ ಸದಸ್ಯತ್ವ (KPSC Membership) ಕೊಡಿಸುವುದಾಗಿ ಹೇಳಿ ಸಿಎಂ ಹಾಗೂ ರಾಜ್ಯಪಾಲರ ನಕಲಿ ಲೆಟರ್ ಹೆಡ್ ಹಾಗೂ ನಕಲಿ ಸಹಿ ಬಳಸಿ 4 ಕೋಟಿ ಹಣ ಪಡೆದು ವಂಚನೆ (Cheating) ಮಾಡಲಾಗಿದೆ. ಘಟನೆ ಸಂಬಂಧ ನಾಲ್ವರನ್ನು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಿಯಾಜ್ ಅಹ್ಮದ್, ಯೂಸುಫ್, ಚಂದ್ರಪ್ಪ ಸೇರಿ ನಾಲ್ವರು ಅರೆಸ್ಟ್ ಆಗಿದ್ದಾರೆ.

ಬಂಧಿತ ಕಿಲಾಡಿ ಗ್ಯಾಂಗ್ ಮಹಿಳೆಯೊಬ್ಬರಿಗೆ ವಂಚಿಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯತ್ವ ಕೊಡಿಸಲು 5 ಕೋಟಿ ಆಫರ್ ನೀಡಿದ್ದು ಬಳಿಕ 4.10 ಕೋಟಿ ಹಣ ಪಡೆದಿದ್ದಾರೆ. ಆರೋಪಿಗಳ ಚಲನವಲನ ಬಗ್ಗೆ ಸಂಶಯ ಬಂದು ಮಹಿಳೆ ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಪಡೆದು ಸಿಸಿಬಿ ಪೊಲೀಸರು ನಾಲ್ವರನ್ನ ಬಂಧಿಸಿದ್ದಾರೆ. ರಾಜ್ಯ ಸರ್ಕಾರದ ನಡಾವಳಿಗಳು, ಟಿಪ್ಪಣಿಯನ್ನ ನಕಲು ಮಾಡಿದ್ದ ಆರೋಪಿಗಳು ನೇಮಕಾತಿ ಬಗ್ಗೆ ನಕಲಿ ಟಿಪ್ಪಣಿ ತಯಾರಿಸಿ, ಸಿಎಂ ಹಾಗೂ ರಾಜ್ಯಪಾಲರ ನಕಲಿ ಸಹಿ ಬಳಕೆ ಮಾಡಿ ಮಹಿಳೆಯನ್ನು ವಂಚಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಸಿಸಿಬಿ ಪೊಲೀಸರು ಮಾರ್ಚ್ 26 ರಂದು ಇಬ್ಬರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ನಕಲಿ ನೇಮಕಾತಿ ಬಗ್ಗೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

ಇದನ್ನೂ ಓದಿ: ನಕಲಿ ಕೆವೈಸಿ ಅಪ್‌ಡೇಟ್ ಲಿಂಕ್ ಬಗ್ಗೆ ಎಚ್ಚರ: ಅಕ್ರಮಗಳು ಹೀಗೂ ನಡೆಯುತ್ತಿವೆ

ಸರ್ಕಾರದ ಹೆಸರಿನಲ್ಲಿ‌ ನಕಲಿ ಆದೇಶ ಹೊರಡಿಸಿ ವಂಚನೆಗೆ ಯತ್ನ

ಸರ್ಕಾರದ ಹೆಸರಿನಲ್ಲಿ‌ ನಕಲಿ ಆದೇಶಗಳ ಹಾವಳಿ ಹೆಚ್ಚಾಗಿದೆ. ಸರ್ಕಾರದ ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಆದೇಶ ಪತ್ರಗಳು ಹರಿದಾಡುತ್ತಿದ್ದು ಇದರಿಂದ ಭಾರೀ ಸಮಸ್ಯೆಯಾಗಿದೆ. ಸದ್ಯ ವಿಧಾನ ಸೌಧ ಠಾಣೆಯಲ್ಲಿ ಎರಡು ಪ್ರತ್ಯೇಕ ಕೇಸ್​ಗಳು ದಾಖಲಾಗಿವೆ. ಒಂದೇ ವಾರದಲ್ಲಿ ವಿಧಾನಸೌಧ ಪೊಲೀಸ್ ಠಾಣೆಗೆ ಇಬ್ಬರು ಸರ್ಕಾರಿ ‌ಹಿರಿಯ‌ ಅಧಿಕಾರಿಗಳಿಂದ ದೂರು ದಾಖಲಾಗಿದೆ. ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿಗಳ‌ ಹೆಸರಿನಲ್ಲಿ ನಕಲಿ ಆದೇಶ ಪತ್ರ ಹರಿದಾಡುತ್ತಿವೆ. ಆರೋಗ್ಯ ಮತ್ತು ಕುಟುಂಬ ಇಲಾಖೆಯಲ್ಲಿ ಎನ್​ಹೆಚ್​ಎಂಗಳನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ. ಎನ್​ಹೆಚ್​ಎಂ ನೌಕರರನ್ನು ಖಾಯಂ ಗೊಳಿಸಲಾಗಿದೆ ಎಂಬ ಆದೇಶದ ನಕಲಿ ಆದೇಶ ಪ್ರತಿಗಳು ಹರಿದಾಡುತ್ತಿವೆ. ಆರೋಪಿಗಳು ಆದೇಶದ ಪ್ರತಿಯನ್ನು ಆರ್ಥಿಕ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರವಾನಿಸಿದ್ದು ಈ ಆದೇಶ ಕುರಿತು ನೈಜತೆ ಪರಿಶೀಲನೆ ವೇಳೆ ನಕಲಿ ಆದೇಶ ಪತ್ರ ಎಂಬುವುದು ಬೆಳಕಿಗೆ ಬಂದಿದೆ. ಸದ್ಯ ಈ ಕುರಿತು ಮುಖ್ಯಮಂತ್ರಿ‌ ಮುಖ್ಯ ಕಾರ್ಯದರ್ಶಿ ಸಿದ್ದೇಶ ಪೊತಲಕಟ್ಟಿ ಅವರು ಪ್ರಕರಣ ದಾಖಲಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ