AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಡೆಂಗ್ಯೂ ಹಾವಳಿ: ಸೆಪ್ಟೆಂಬರ್​ನಲ್ಲಿ ಪ್ರತಿ ದಿನ 77 ರಿಂದ 109 ಪ್ರಕರಣಗಳು ಪತ್ತೆ

ಆಗಸ್ಟ್ ಮತ್ತು ಸೆಪ್ಟೆಂಬರ್‌ ತಿಂಗಳಲ್ಲಿ ಬೆಂಗಳೂರು ಪೂರ್ವ, ದಕ್ಷಿಣ ಮತ್ತು ಮಹದೇವಪುರ ವಲಯಗಳಲ್ಲಿ ಹೆಚ್ಚಿನ ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿಅಂಶಗಳ ಪ್ರಕಾರ ಕರ್ನಾಟಕದಲ್ಲಿ ಜನವರಿ 1 ರಿಂದ ಸೆಪ್ಟೆಂಬರ್ 19 ರವರೆಗೆ 9,208 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 5,220 ಪ್ರಕರಣಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ಪತ್ತೆಯಾಗಿವೆ.

ಬೆಂಗಳೂರಿನಲ್ಲಿ ಡೆಂಗ್ಯೂ ಹಾವಳಿ: ಸೆಪ್ಟೆಂಬರ್​ನಲ್ಲಿ ಪ್ರತಿ ದಿನ 77 ರಿಂದ 109 ಪ್ರಕರಣಗಳು ಪತ್ತೆ
ಡೆಂಗ್ಯೂ
ಆಯೇಷಾ ಬಾನು
|

Updated on: Sep 21, 2023 | 9:38 AM

Share

ಬೆಂಗಳೂರು, ಸೆ.21: ಅನಿಯಮಿತ ಮಳೆಯ ನಡುವೆ, ಬೆಂಗಳೂರಿನಲ್ಲಿ ಈ ತಿಂಗಳು ಡೆಂಗ್ಯೂ(Dengue) ಪ್ರಕರಣಗಳು ಹೆಚ್ಚಾಗುತ್ತಿವೆ. ನಗರದಲ್ಲಿ ದಿನೇ ದಿನೇ ಡೆಂಗ್ಯೂ ಸೋಂಕು ತಗುಲುವವರ ಸಂಖ್ಯೆ ಹೆಚ್ಚಾಗುತ್ತಿದೆ. ಜೊತೆಗೆ ನಿಫಾ ವೈರಸ್​ನ ಆತಂಕವೂ ಹೆಚ್ಚಾಗಿದ್ದು ಇದರಿಂದ ನಗರದಲ್ಲಿ(Bengaluru) ಭಯದ ವಾತಾವರಣ ನಿರ್ಮಾಣವಾಗಿದೆ. ಆಗಸ್ಟ್‌ನಲ್ಲಿ 2,374 ಸೋಂಕುಗಳು ಪತ್ತೆಯಾಗಿವೆ. ಅಂದರೆ ದಿನಕ್ಕೆ ಸರಾಸರಿ 77 ಕೇಸ್​ಗಳು. ಇನ್ನು ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 20ರ ನಡುವೆ ಬಿಬಿಎಂಪಿ ವ್ಯಾಪ್ತಿಯಲ್ಲಿ 2,182 ಪ್ರಕರಣಗಳು ದಾಖಲಾಗಿವೆ. ಅಂದರೆ ದೈನಂದಿನ ಸರಾಸರಿ 109 ಪ್ರಕರಣಗಳು.

ಆಗಸ್ಟ್ ಮತ್ತು ಸೆಪ್ಟೆಂಬರ್‌ ತಿಂಗಳಲ್ಲಿ ಬೆಂಗಳೂರು ಪೂರ್ವ, ದಕ್ಷಿಣ ಮತ್ತು ಮಹದೇವಪುರ ವಲಯಗಳಲ್ಲಿ ಹೆಚ್ಚಿನ ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಈ ತಿಂಗಳು ಹಾಟ್‌ಸ್ಪಾಟ್‌ಗಳನ್ನು ಗುರುತಿಸಲಾಗುವುದಿಲ್ಲ. ಏಕೆಂದರೆ ಪ್ರತಿದಿನವೂ ಅಂಕಿಅಂಶಗಳಲ್ಲಿ ಬದಲಾವಣೆಗಳಾಗುತ್ತಿವೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಕೆ.ವಿ.ತ್ರಿಲೋಕ್ ಚಂದ್ರ ಅವರು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿಅಂಶಗಳ ಪ್ರಕಾರ ಕರ್ನಾಟಕದಲ್ಲಿ ಜನವರಿ 1 ರಿಂದ ಸೆಪ್ಟೆಂಬರ್ 19 ರವರೆಗೆ 9,208 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 5,220 ಪ್ರಕರಣಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ಪತ್ತೆಯಾಗಿವೆ. ಎರಡನೇ ಮತ್ತು ಮೂರನೇ ಅತಿ ಹೆಚ್ಚು ಡೆಂಗ್ಯೂ ಹರಡುವ ಜಿಲ್ಲೆಗಳಾಗಿ ಮೈಸೂರು ಮತ್ತು ಉಡುಪಿಯನ್ನು ಗುರುತಿಸಲಾಗಿದೆ. ಕರ್ನಾಟಕದಲ್ಲಿ ಈ ವರ್ಷ ಪತ್ತೆಯಾದ ಡೆಂಗ್ಯೂ ಪ್ರಕರಣಗಳಲ್ಲಿ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು BBMP ಪ್ರದೇಶ ವ್ಯಾಪ್ತಿಯಲ್ಲಿ ಕಂಡುಬಂದಿದೆ. ಆದರೆ ಡೆಂಗ್ಯೂ ಟೆಸ್ಟ್ ಮಾಡಿಸಿದವರ ಒಟ್ಟು ಸಂಖ್ಯೆಗೆ ಹೋಲಿಸಿದರೆ ಡೆಂಗ್ಯೂ ಸೋಂಕು ದೃಢಪಟ್ಟವರ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ. ಪಾಸಿಟಿವಿಟಿ ದರವು ಆಗಸ್ಟ್‌ನಲ್ಲಿ 43% ರಿಂದ ಸೆಪ್ಟೆಂಬರ್‌ನಲ್ಲಿ 13% ಕ್ಕೆ ಇಳಿದಿದೆ” ಎಂದು ಕೆ.ವಿ.ತ್ರಿಲೋಕ್ ಚಂದ್ರ ಅವರು ಹೇಳಿದರು.

ಇದನ್ನೂ ಓದಿ: ರಾಜ್ಯದಲ್ಲಿ ಹೆಚ್ಚಾದ ಡೆಂಗ್ಯೂ ಪ್ರಕರಣಗಳು; ಆರೋಗ್ಯ ಇಲಾಖೆಯಿಂದ ಗೈಡ್​​ಲೈನ್ಸ್ ಬಿಡುಗಡೆ

ಇನ್ನು ಸೋಂಕು ಕಡಿಮೆ ಮಾಡಲು ಬಿಬಿಎಂಪಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ನಾವು ಡೆಂಗ್ಯೂ ಹೆಚ್ಚಿರುವ ಕಡೆ ಹೆಚ್ಚಿನ ನಿಗಾವಹಿಸುತ್ತಿದ್ದೇವೆ. ಹೆಚ್ಚಿನ ತಂಡಗಳನ್ನು ಡೆಂಗ್ಯೂ ಹರಡುವ ಪ್ರದೇಶಗಳಿಗೆ ಕಳುಹಿಸಿ ಟೆಸ್ಟ್​ಗಳನ್ನು ಮಾಡಲಾಗುತ್ತಿದೆ. ಆಗಸ್ಟ್‌ನಲ್ಲಿ ಎರಡು ಡೆಂಗ್ಯೂ ಸಂಬಂಧಿತ ಸಾವುಗಳಾಗಿವೆ. ಆದರೆ ರಾಜ್ಯ ದತ್ತಾಂಶ ಲೆಕ್ಕಪರಿಶೋಧನಾ ಸಮಿತಿಯು ಇನ್ನೂ ಅದರ ದೃಢೀಕರಣವನ್ನು ನೀಡಿಲ್ಲ ಎಂದು ಬಿಬಿಎಂಪಿ ಅಧಿಕಾರಿ ತಿಳಿಸಿದರು.

ಬೆಂಗಳೂರನ್ನು ಹೊರತು ಪಡಿಸಿ ಕೊಡಗು, ಬೀದರ್, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ಡೆಂಗ್ಯೂ ಪ್ರಕರಣಗಳಲ್ಲಿ ನಾಲ್ಕು ಪಟ್ಟು ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?