AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Cantonment Railway Station: ಬ್ರಿಟಿಷರ ಕಾಲದ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ, ಎರಡು ಹಂತದಲ್ಲಿ ಬದಲಾವಣೆ

ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದ ಯಾರ್ಡ್​ ಅನ್ನು ₹ 45 ಕೋಟಿ ರೂ ವೆಚ್ಚದಲ್ಲಿ ಮರು ವಿನ್ಯಾಸಗೊಳಿಸಲಾಗುತ್ತಿದೆ. ಈ ಮೂಲಕ ನಾಲ್ಕು ಹೆಚ್ಚುವರಿ ಫ್ಲಾಟ್ ಫಾರ್ಮ್ ಹಾಗೂ ಎರಡು ಹೆಚ್ಚುವರಿ ಹಳಿಗಳನ್ನು ನಿರ್ಮಿಸಲಾಗುತ್ತಿದೆ.

Bengaluru Cantonment Railway Station: ಬ್ರಿಟಿಷರ ಕಾಲದ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ, ಎರಡು ಹಂತದಲ್ಲಿ ಬದಲಾವಣೆ
ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶImage Credit source: PTI
TV9 Web
| Edited By: ಆಯೇಷಾ ಬಾನು|

Updated on:Dec 17, 2022 | 12:22 PM

Share

ಬೆಂಗಳೂರು: ನಗರದ ಅತ್ಯಂತ ಹಳೆಯ, ಬ್ರಿಟಿಷರ ಕಾಲದ ರೈಲು ನಿಲ್ದಾಣಗಳಲ್ಲಿ ಒಂದಾದ ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ ಸಿಗಲಿದೆ. ಸೌತ್ ವೆಸ್ಟರ್ನ್ ರೈಲ್ವೇ (SWR) ನೆಟ್‌ವರ್ಕ್‌ನಲ್ಲಿರುವ ಅತ್ಯಂತ ಹಳೆಯ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣವನ್ನು ಎರಡು ಹಂತದಲ್ಲಿ ಬದಲಾವಣೆಗೆ ಮಾಡಲಾಗುತ್ತೆ. ಹೆಚ್ಚಿದ ಸಾರಿಗೆ ಅಗತ್ಯಗಳನ್ನು ಪೂರೈಸುವ ಸಲುವಾಗಿ ಗಣನೀಯ ಬದಲಾವಣೆ ಮಾಡಲಾಗುತ್ತಿದೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ.

ಈ ಯೋಜನೆಯನ್ನು ಇಪಿಸಿ (ಎಂಜಿನಿಯರಿಂಗ್-ಪ್ರೊಕ್ಯೂರ್‌ಮೆಂಟ್-ಕನ್‌ಸ್ಟ್ರಕ್ಷನ್) ಮೋಡ್‌ನಲ್ಲಿ ಅಂದರೆ ‘ಟರ್ನ್‌ಕೀ’ ಆಧಾರದ ಮೇಲೆ ಕಾರ್ಯಗತಗೊಳಿಸಲಾಗುತ್ತಿದೆ. ಹೀಗಾಗಿ, ಈ ಯೋಜನೆಯ ಎಲ್ಲಾ ಅಂಶಗಳ ಪ್ಲಾನಿಂಗ್, ಸಂಗ್ರಹಣೆ ಮತ್ತು ಕಾರ್ಯಗತಗೊಳಿಸಲು ಒಂದೇ ಏಜೆನ್ಸಿಗೆ ನೀಡಲಾಗಿದೆ. ಈ ಪ್ರೋಜೆಕ್ಟ್ 36 ತಿಂಗಳುಗಳಲ್ಲಿ ಪೂರ್ಣಗೊಳ್ಳುತ್ತದೆ ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: Indian Railways: ರೈಲುಗಳಲ್ಲಿ ಹಿರಿಯ ನಾಗರಿಕರಿಗೆ ಸದ್ಯಕ್ಕಿಲ್ಲ ರಿಯಾಯಿತಿ ದರದ ಟಿಕೆಟ್; ಕೇಂದ್ರ

ಮೊದಲ ಹಂತದಲ್ಲಿ, ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದ ಯಾರ್ಡ್​ ಅನ್ನು ₹ 45 ಕೋಟಿ ರೂ ವೆಚ್ಚದಲ್ಲಿ ಮರು ವಿನ್ಯಾಸಗೊಳಿಸಲಾಗುತ್ತಿದೆ. ಈ ಮೂಲಕ ನಾಲ್ಕು ಹೆಚ್ಚುವರಿ ಫ್ಲಾಟ್ ಫಾರ್ಮ್ ಹಾಗೂ ಎರಡು ಹೆಚ್ಚುವರಿ ಹಳಿಗಳನ್ನು ನಿರ್ಮಿಸಲಾಗುತ್ತಿದೆ. ಇದರಿಂದಾಗಿ ಹೆಚ್ಚಿನ ರೈಲುಗಳು ಈ ನಿಲ್ದಾಣದ ಮೂಲಕ ಚಲಿಸಲಿವೆ. ರೈಲುಗಳ ಸಂಖ್ಯೆ ಮತ್ತು ಕೆಎಸ್ಆರ್ ಬೆಂಗಳೂರು ನಿಲ್ದಾಣದಲ್ಲಿನ ಒತ್ತಡವನ್ನು ಕಡಿಮೆ ಮಾಡಿ. ಈ ಯಾರ್ಡ್ ಬೆಂಗಳೂರು ಉಪನಗರ ರೈಲು ಜಾಲದ ಜೊತೆ ಸಂಯೋಜಿಸಲ್ಪಡಲಿದೆ. ತಡೆರಹಿತ ಸಮೂಹ ಸಾರಿಗೆಯ ಅನುಕೂಲಕ್ಕಾಗಿ ಯಾರ್ಡ್ ಅನ್ನು ಉಪನಗರ ರೈಲ್ವೆ ಜಾಲದೊಂದಿಗೆ ಸಂಯೋಜಿಸಲಾಗುತ್ತಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬೋರ್ ಬ್ಯಾಂಕ್ ರಸ್ತೆ ಹಾಗೂ ನೇತಾಜಿ ರಸ್ತೆ ಮಧ್ಯೆ ಪಾದಚಾರಿ ಮೇಲ್ಸೇತುವೆಯನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಮರುವಿನ್ಯಾಸ ಕಾಮಗಾರಿ 2023ರ ಫೆಬ್ರವರಿ ಒಳಗೆ ಪೂರ್ಣಗೊಳ್ಳಲಿದೆ.

ಎರಡನೇ ಹಂತದಲ್ಲಿ ಈ ನಿಲ್ದಾಣವನ್ನು ಹೈಟೆಕ್ ವಿಮಾನ ನಿಲ್ದಾಣ ವಿನ್ಯಾಸ ಮಾದರಿಯಲ್ಲಿ 480 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಹೊಸ ನಿಲ್ದಾಣದಲ್ಲಿ ಸಂಪೂರ್ಣ ಹವಾನಿಯಂತ್ರಿತ 216 ಮೀ. ಅಗಲದ ಸಭಾಂಗಣ, ಪ್ರತ್ಯೇಕ ಪ್ರವೇಶ ಹಾಗೂ ನಿರ್ಗಮನ ದ್ವಾರಗಳು, ಜಿ+5 ಬಹುಮಹಡಿ ಪಾರ್ಕಿಂಗ್, ವಾಣಿಜ್ಯ ಚಟುವಟಿಕೆಗಳಿಗೆ ಸ್ಥಳಾವಕಾಶದೊಂದಿಗೆ ಪ್ಲಾಟ್ ಫಾರ್ಮ್ ಮೇಲೆ ರೂಫ್ ಪ್ಲಾಜಾ ನಿರ್ಮಾಣ ಮಾಡಲಾಗುವುದು.‌ ಮಳೆ‌ ನೀರು ಕೊಯ್ಲು ವ್ಯವಸ್ಥೆಯೊಂದಿಗೆ ಹಸಿರು ಕಟ್ಟಡ, ಎಲ್​ಇಡಿ ಲೈಟಿಂಗ್ ವ್ಯವಸ್ಥೆ, ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ನಿರ್ಮಾಣ ಮಾಡಲಾಗುವುದು. ವೈ-ಫೈ ವ್ಯವಸ್ಥೆ, ದಿವ್ಯಾಂಗ ಸ್ನೇಹಿ ನಿಲ್ದಾಣ, ರ‍್ಯಾಂಪ್, ಲಿಫ್ಟ್ಸ್, ಸಬ್ ವೇ ಗಳ ನಿರ್ಮಾಣ, ಸ್ಥಳೀಯ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಜೊತೆ ಬಹು ಮಾದರಿ ಸಂಯೋಜನೆ‌ ಇರಲಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:54 am, Sat, 17 December 22

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?