ಸೈಬರ್​ ಕ್ರೈಂಗಾಗಿ ವಿದೇಶಕ್ಕೆ ಸಿಮ್​ಗಳನ್ನು ರವಾನೆ ಮಾಡುತ್ತಿದ್ದ ಆರೋಪಿಯ ಬಂಧನ

ಸೈಬರ್​ ಕ್ರೈಂಗಾಗಿ ವಿದೇಶಕ್ಕೆ ಸಿಮ್​ಗಳನ್ನು ರವಾನೆ ಮಾಡುತ್ತಿದ್ದ ಆರೋಪಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಪ್ರದೇಶದ ವಿಶಾಖಪಟ್ಟಣದ ನಾರಾ ಶ್ರೀನಿವಾಸ್ ರಾವ್ ಬಂಧಿತ ಆರೋಪಿ.

ಸೈಬರ್​ ಕ್ರೈಂಗಾಗಿ ವಿದೇಶಕ್ಕೆ ಸಿಮ್​ಗಳನ್ನು ರವಾನೆ ಮಾಡುತ್ತಿದ್ದ ಆರೋಪಿಯ ಬಂಧನ
ಸಿಮ್​, ಆರೋಪಿ ಶ್ರೀವಾಸ್​
Updated By: ವಿವೇಕ ಬಿರಾದಾರ

Updated on: May 19, 2024 | 11:09 AM

ಬೆಂಗಳೂರು, ಮೇ 19: ಸೈಬರ್​ ಕ್ರೈಂಗಾಗಿ (Cyber Crime) ವಿದೇಶಕ್ಕೆ ಸಿಮ್​ಗಳನ್ನು (Sim) ರವಾನೆ ಮಾಡುತ್ತಿದ್ದ ಆರೋಪಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (KIAB) ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಪ್ರದೇಶದ (Andra Pradesh) ವಿಶಾಖಪಟ್ಟಣದ ನಾರಾ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಆರೋಪಿ ಶ್ರೀನಿವಾಸ್ ರಾವ್ ಭಾರತದ ಸಿಮ್​ಗಳನ್ನು ಪಾರ್ಸಲ್​​ ಮುಖಾಂತರ ಅಕ್ರಮವಾಗಿ ವಿದೇಶಕ್ಕೆ ತೆಗೆದುಕೊಂಡು ಹೋಗಲು ಯತ್ನಿಸಿದ್ದರು. ಆದರೆ ಕಸ್ಟಮ್ಸ್​ ಅಧಿಕಾರಿಗಳ ತಪಾಸಣೆ ವೇಳೆ ಸಿಮ್​​ಗಳು ಪತ್ತೆಯಾಗಿವೆ. ಒಂದು ಪಾರ್ಸಲ್​ನಲ್ಲಿ 24, ಮತ್ತೊಂದರಲ್ಲಿ 111 ಸಿಮ್​​ಗಳು ಇದ್ದವು. ಚೆನ್ನೈನ ಸೈಯದ್​​​​​ ಎಂಬಾತನಿಗೆ ಸೇರಿದ ಕೊರಿಯರ್​​ ಕಂಪನಿ ಮೂಲಕ ಪಾರ್ಸಲ್ ಬುಕ್ ಆಗಿತ್ತು.

ಆರೋಪಿಗಳು ತೈವಾನ್ ಮತ್ತು ಕಾಂಬೋಡಿಯಾ ದೇಶಗಳಲ್ಲಿ ಕೂತು ಈ ಸಿಮ್​ಗಳನ್ನು ಬಳಸಿ ಬ್ಯಾಂಕ್ ಖಾತೆಗಳನ್ನು ತೆರೆಯುತ್ತಿದ್ದರು. ಹಾಗೆ ವಾಟ್ಸ್ ಆ್ಯಪ್ ಅಕೌಂಟ್ ಕೂಡ ಕ್ರಿಯೇಟ್ ಮಾಡುತ್ತಾರೆ. ಬಳಿಕ ಭಾರತದಲ್ಲಿನ ಜನರಿಗೆ ಪಾರ್ಟ್ ಟೈಂ, ಷೇರು ಮಾರ್ಕೆಟ್​ನಲ್ಲಿ ಹೂಡಿಕೆ ಮಾಡಿ ಅಂತ ಆಫರ್ ಕೊಟ್ಟು ವಂಚನೆ ಮಾಡುತ್ತಿದ್ದರು. ಹೈದರಾಬಾದ್​ ಮೂಲದ ವ್ಯಕ್ತಿ ಪ್ರಕರಣದ ಕಿಂಗ್​ಪಿನ್​ ಆಗಿದ್ದು, ಈತ ವಿಯೆಟ್ನಾಂನಲ್ಲಿ ಕೂತೇ ಎಲ್ಲವನ್ನು ನೋಡಿಕೊಳ್ಳುತ್ತಿದ್ದನು. ಪೊಲೀಸರು ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ಒಂದು ಕೇಸ್​ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಏರ್​ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ಜಪ್ತಿ, ನಾಲ್ವರು ವಶಕ್ಕೆ

ಬಟ್ಟೆಗಳಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ 1.96 ಕೋಟಿ ಮೌಲ್ಯದ 2.814 ಕೆಜಿ ಚಿನ್ನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್​ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅಧಿಕಾರಿಗಳು ಮಹಿಳೆ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ದುಬೈನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕರು ಬ್ಯಾಗ್​​ನಲ್ಲಿನ ಜೀನ್ಸ್ ಪ್ಯಾಂಟ್, ಟೀ ಶರ್ಟ್​​​ಗಳಲ್ಲಿ ಪೌಡರ್​ ರೂಪದ ಚಿನ್ನವನ್ನು ಇಟ್ಟುಕೊಂಡು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದರು. ಆದರೆ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ