AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜಿಗೆ ಹೋಗುತ್ತಿದ್ದ ಅಕ್ಕ ಮತ್ತು ತಮ್ಮನ ಮೇಲೆ ಹರಿದ ವಾಟರ್​ ಟ್ಯಾಕರ್​​

ಇಂದಿನಿಂದ ಕಾಲೇಜು ಆರಂಭವಾಗಿದೆ. ಹೀಗಾಗಿ ಅಕ್ಕ ಮತ್ತು ತಮ್ಮ ಬೈಕ್​ ಮೇಲೆ ಕಾಲೇಜಿಗೆ ಹೋಗುತ್ತಿರುವಾಗ ವೇಗವಾಗಿ ಬಂದ ವಾಟರ್​ ಟ್ಯಾಂಕರ್​​ ಬೈಕ್​ಗೆ ಡಿಕ್ಕಿ ಹೊಡೆದಿದೆ. ಇದರಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡ ನಾಗಮಂಗಲದಲ್ಲಿ ಘಟನೆ ನಡೆದಿದೆ.

ಕಾಲೇಜಿಗೆ ಹೋಗುತ್ತಿದ್ದ ಅಕ್ಕ ಮತ್ತು ತಮ್ಮನ ಮೇಲೆ ಹರಿದ ವಾಟರ್​ ಟ್ಯಾಕರ್​​
ಮೃತ ಮಧುಮಿತಾ, ರಂಜನ್​
ರಾಮು, ಆನೇಕಲ್​
| Updated By: ವಿವೇಕ ಬಿರಾದಾರ|

Updated on: Jun 07, 2024 | 3:02 PM

Share

ಬೆಂಗಳೂರು, ಜೂನ್​ 07: ವಾಟರ್ ಟ್ಯಾಂಕರ್ (Water Tanker)​ ಡಿಕ್ಕಿ ಹೊಡೆದ ಪರಿಣಾಮ ಅಕ್ಕ ಮತ್ತು ತಮ್ಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಎಲೆಕ್ಟ್ರಾನಿಕ್ ಸಿಟಿ (Electronic City) ಸಮೀಪದ ದೊಡ್ಡ ನಾಗಮಂಗಲದಲ್ಲಿ ನಡೆದಿದೆ. ದೊಡ್ಡ ನಾಗಮಂಗಲದ ಕೆಂಪೇಗೌಡ ಬಡಾವಣೆ ನಿವಾಸಿ ಮಧುಮಿತಾ (20) ರಂಜನ್ (18) ಮೃತ ದುರ್ದೈವಿಗಳು.

ಮದುಮಿತಾ ಬೆಂಗಳೂರಿನ ಎಸ್ಎಸ್ಎಂಆರ್​ವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇಂದು (ಜೂ.7) ಕಾಲೇಜಿನ ಮೊದಲ ದಿನ ಹಿನ್ನೆಲೆಯಲ್ಲಿ ಅಕ್ಕ ಮದುಮಿತಾರನ್ನು ಕಾಲೇಜಿಗೆ ಬಿಟ್ಟು ಬರಲು ತಮ್ಮ ರಂಜನ್​ ಹೋಗುತ್ತಿದ್ದನು. ಈ ವೇಳೆ ವೇಗವಾಗಿ ಬಂದ ವಾಟರ್​​ ಟ್ಯಾಂಕರ್​ ಡಿಕ್ಕಿ ಹೊಡೆದಿದೆ. ಪರಿಣಾಮ ಅಕ್ಕ ಮತ್ತು ತಮ್ಮ ಬೈಕ್​ನಿಂದ ಕೆಳಗೆ ಬಿದ್ದಿದ್ದಾರೆ.

ಬಳಿಕ ವಾಟರ್​ ಟ್ಯಾಂಕರ್​ನ ಹಿಂಬದಿ ಚಕ್ರ​ ಇಬ್ಬರ ತಲೆ ಮೇಲೆ ಹರಿದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಾಟರ್ ಟ್ಯಾಂಕರ್ ಬೈಕ್​ಗೆ ಡಿಕ್ಕಿ ಹೊಡೆಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಾಟರ್ ಟ್ಯಾಂಕರ್ ಚಾಲಕನ ಅತಿ ವೇಗ ಮತ್ತು ಅಜಾಗರೂಕತೆ ಚಾಲನೆಯೇ ಅಪಘಾತಕ್ಕೆ ಕಾರಣ ಅಂತ ಸ್ಥಳೀಯರು ಆರೋಪಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ KPTCL​​​ನ ಇಬ್ಬರು ಸಿಬ್ಬಂದಿ, ಓರ್ವ ಲೈನ್​ ಮ್ಯಾನ್​ ಸಾವು

ಲಾರಿ ಡಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ

ವಿಜಯನಗರ: ಖಾಸಗಿ ಬಸ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದಾನೆ. ಹಲವರಿಗೆ ಗಾಯಗಳಾಗಿವೆ. ಹೊಸಪೇಟೆ ತಾಲೂಕಿನ ಜಂಬಯ್ಯನ ಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಘಟನೆ ನಡೆದಿದೆ. ಖಾಸಗಿ ಬಸ್ ಬೆಂಗಳೂರಿನಿಂದ ಹೊಸಪೇಟೆ ಕಡೆಗೆ ಬರುತ್ತಿತ್ತು. ಲಾರಿ ಹೊಸಪೇಟೆ ಕಡೆಯಿಂದ ಕೂಡ್ಲಿಗಿ ಕಡೆ ಹೊರಟಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯುತ್ ತಂತಿ ತುಳಿದು ಬಾಲಕಿ ಸಾವು

ವಿದ್ಯುತ್ ತಂತಿ ತುಳಿದು ಬಾಲಕಿ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿಯಲ್ಲಿ ನಡೆದಿದೆ. ಎರಡನೇ ತರಗತಿ ಓದುತ್ತಿದ್ದ 8 ವರ್ಷದ ಬಾಲಕಿ ತುಳಸಿ ಮೃತ ದುರ್ದೈವಿ.  ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್