ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ ಸಂದೇಶ!

ಎರಡು ತಿಂಗಳ ಹಿಂದೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟ ಸಂಭವಿಸಿತ್ತು. ಇದಾದ ಬೆನ್ನಲ್ಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ಬಾಂಬ್​ ಬೆದರಿಕೆ ಸಂದೇಶ ಬಂದಿತ್ತು. ಈ ಎರಡೂ ಪ್ರಕರಣಗಳು ಜನಮನದಿಂದ ಮಾಸುವ ಮುನ್ನವೇ ಇದೀಗ ನಗರದ ಖಾಸಗಿ ಶಾಲೆಗೆ ಹುಸಿ ಬಾಂಬ್​ ಬೆದರಿಕೆ ಸಂದೇಶ ಬಂದಿದೆ.

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್​ ಬೆದರಿಕೆ ಸಂದೇಶ!
ಸಾಂದರ್ಭಿಕ ಚಿತ್ರ
Edited By: ವಿವೇಕ ಬಿರಾದಾರ

Updated on: May 14, 2024 | 11:38 AM

ಬೆಂಗಳೂರು, ಮೇ 14: ಕಳೆದ ಕೆಲವು ದಿನಗಳ ಹಿಂದೆ ನಗರದ ಹಲವು ಖಾಸಗಿ ಆಸ್ಪತ್ರೆಗಳಿಗೆ ಬಾಂಬ್​ ಬೆದರಿಕೆ (Bomb threat) ಇ-ಮೇಲ್​ ಬಂದಿತ್ತು. ಇದರ ಬೆನ್ನಲ್ಲೇ ಇದೀಗ, ಅಮೃತಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ (School) ಬಾಂಬ್ ಬೆದರಿಕೆ ಇ-ಮೇಲ್ (E-Mail) ಬಂದಿದೆ. ದುಷ್ಕರ್ಮಿಗಳು ಮಧ್ಯರಾತ್ರಿ 12.20ರ ಸುಮಾರಿಗೆ ಬಾಂಬ್ ಮೇಲ್ ಕಳಿಸಿದ್ದು, ಬೆಳಗ್ಗೆ 7.30ಕ್ಕೆ ಶಾಲೆ ಸಿಬ್ಬಂದಿ ಇ-ಮೇಲ್​ ಪರಿಶೀಲಿಸಿದಾಗ ಬಾಂಬ್​ ಬೆದರಿಕೆ ಸಂದೇಶ ಬಂದಿತ್ತು.

ಶಾಲಾ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಬಾಂಬ್​ ನಿಷ್ಕ್ರಿಯ ದಳ ಶಾಲೆಯಲ್ಲಿ ಪರಿಶೀಲನೆ ನಡೆಸಿದರು. ಪರಿಶೀಲನೆ ಬಳಿಕ ಹುಸಿ ಬಾಂಬ್ ಇ-ಮೇಲ್ ಎಂದು ದೃಢವಾಗಿದೆ.

ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್​ಗಳು ಬಂದಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಹಲವು ಶಾಲೆಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್​ಗಳು ಬಂದಿದ್ದವು. ಈ ಬಾಂಬ್​ ಬೆದರಿಕೆ ಪ್ರಕರಣಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೇಲಿಂದ ಮೇಲೆ ಈ ರೀತಿಯಾದ ಬಾಂಬ್​ ಬೆದರಿಕೆ ಇ-ಮೇಲ್​ಗಳು ಬರುತ್ತಿದ್ದರೂ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್: ಪೊಲೀಸರ ತಪಾಸಣೆ

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ

ಇತ್ತೀಚೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್​ ಬೆದರಿಕೆ ಬಂದಿತ್ತು. ಬಾಂಬ್​ ಬೆದರಿಕೆ ಕಳಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ದೂರು ದಾಖಲಿಸಿದ್ದರು.

ಅಪರಿಚಿತ ಆರೋಪಿ ವಿರುದ್ಧ ಮೇ 2 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

“ವಿಮಾನ ನಿಲ್ದಾಣದ ಇ-ಮೇಲ್ ಐಡಿಗೆ ಮೇಲ್ ಕಳುಹಿಸಲಾಗಿದೆ. ಬಾಂಬ್‌ಗಳನ್ನು ಇಟ್ಟಿದ್ದು, ಅವು ಕೆಲವೇ ಗಂಟೆಗಳಲ್ಲಿ ಸ್ಫೋಟಗೊಳ್ಳುತ್ತವೆ. ಮೇಲ್ ಮಾಡಿದವನು ತಾನು ಭಯೋತ್ಪಾದಕ ಗುಂಪಿನಿಂದ ಬಂದವನು” ಅಂತ ಸಂದೇಶ ಕಳಿಸಿದ್ದಾನೆ ಎಂದು ಟರ್ಮಿನಲ್ ಮ್ಯಾನೇಜರ್ ಗೀತಾ ರಾಣಿ ಅವರು ತಮ್ಮ ದೂರಿನಲ್ಲಿ ದಾಖಲಿಸಿದ್ದಾರೆ

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:35 am, Tue, 14 May 24

Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us