ಬೆಂಗಳೂರು ವಿಮಾನ ನಿಲ್ದಾಣದ ಸಿಬ್ಬಂದಿ ಕಚೇರಿಗೆ ಹುಸಿ ಬಾಂಬ್​ ಬೆದರಿಕೆ

ಇತ್ತೀಚಿಗೆ ಖಾಸಗಿ ಆಸ್ಪತ್ರೆಗಳಿಗೆ ಮತ್ತು ಬಾಂಬ್​ ಬೆದರಿಕೆ ಸಂದೇಶ ಬಂದಿತ್ತು. ಇದರ ಬೆನ್ನಲ್ಲೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮತ್ತು ವಿಮಾನದಲ್ಲಿ ಬಾಂಬ್​ ಇಡಲಾಗಿದೆ ಎಂದು ಹುಸಿ ಬೆದರಿಕೆ ಸಂದೇಶ ಬಂದಿತ್ತು. ಇದೀಗ ಮತ್ತೆ ವಿಮಾನ ನಿಲ್ದಾಣದ ಸಿಬ್ಬಂದಿ ಕಟ್ಟಡಕ್ಕೆ ಬಾಂಬ್​ ಬೆದರಿಕೆ ಸಂದೇಶ ಬಂದಿದೆ.

ಬೆಂಗಳೂರು ವಿಮಾನ ನಿಲ್ದಾಣದ ಸಿಬ್ಬಂದಿ ಕಚೇರಿಗೆ ಹುಸಿ ಬಾಂಬ್​ ಬೆದರಿಕೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
Follow us
| Updated By: ವಿವೇಕ ಬಿರಾದಾರ

Updated on:May 29, 2024 | 1:32 PM

ದೇವನಹಳ್ಳಿ, ಮೇ 29: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Aiport) ಆಡಳಿತ ಮಂಡಳಿ, ಸಿಬ್ಬಂದಿ ಕಚೇರಿಯನ್ನು ಸ್ಫೋಟಿಸುವುದಾಗಿ ಶೌಚಾಲಯದ ಕನ್ನಡಿ ಮೇಲೆ ಬೆದರಿಕೆ ಸಂದೇಶ ಬರೆಯಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಕೂಡಲೆ ಶ್ವಾನದಳ‌ ಹಾಗೂ ಸಿಐಎಸ್ಎಫ್​ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಹುಸಿ ಬಾಂಬ್ (Fake bomb)​ ಬೆದರಿಕೆ ಎಂದು ತಿಳಿದುಬಂದಿದೆ.

ವಿಮಾನ ನಿಲ್ದಾಣದ ಆಲ್ಪಾ 3 ಬಿಲ್ಡಿಂಗ್​ನಲ್ಲಿನ ಶೌಚಾಲಯದ ಕನ್ನಡಿ ಮೇಲೆ 25 ನಿಮಿಷದಲ್ಲಿ ಕಟ್ಟಡಗಳು ಸ್ಟೋಟವಾಗುವುದಾಗಿ ಬೆದರಿಕೆ ಸಂದೇಶ ಬರೆಯಲಾಗಿತ್ತು. ಬೆಳಗ್ಗೆ ಶೌಚಾಲಯಕ್ಕೆ ಸಿಬ್ಬಂದಿ ತೆರಳಿದ ವೇಳೆ ಬರಹವನ್ನು ನೋಡಿದ್ದಾರೆ. ಕೂಡಲೆ ಈ ವಿಚಾರವನ್ನು ಭದ್ರತಾ ಪಡೆಗೆ ತಿಳಿಸಿದ್ದಾರೆ. ಬೆದರಿಕೆ ಸಂದೇಶದಿಂದ ಸಿಬ್ಬಂದಿ ಹಾಗೂ ಭದ್ರತಾ ಪಡೆ ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು.

ಪರಿಶೀಲನೆ ಬಳಿಕ ಹುಸಿ ಬಾಂಬ್ ಸಂದೇಶ ಅಂತ ತಿಳಿದ ಮೇಲೆ ಸಿಬ್ಬಂದಿ ನಿಟ್ಟುಸಿರು ಬಿಟ್ಟರು. ಸಿಬ್ಬಂದಿಯೇ ಹುಸಿ ಬೆದರಿಕೆ ಸಂದೇಶ ಬರೆದಿರುವ ಶಂಕೆ ವ್ಯಕ್ತವಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರಿನ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್: ಪೊಲೀಸರ ತಪಾಸಣೆ

ಏ.29 ರಂದು ವಿಮಾನ ನಿಲ್ದಾಣದ ಮ್ಯಾನೇಜರ್​​ ಅವರ ಮೇಲ್​ಗೆ “ವಿಮಾನದಲ್ಲಿ ಟೈಂ ಬಾಂಬ್​ ಇಡಲಾಗಿದೆ. ಯಾವುದೇ ಸಮಯದಲ್ಲಿ ಸ್ಫೋಟಗೊಳ್ಳಬಹುದು. ಜೊತೆಗೆ, ಗುಂಪಿನಿಂದ ಟರ್ಮಿನಲ್ 1 ರ ಒಳಗೆ ವಿವಿಧ ಸ್ಥಳಗಳಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಲಾಗಿದೆ” ಅಂತ ಸಂದೇಶ ಬಂದಿತ್ತು.

ಮಂಗಳೂರು ವಿಮಾನ ನಿಲ್ದಾಣಕ್ಕೂ ಅದೇ ದಿನ (ಏಪ್ರಿಲ್ 29) ಬಾಂಬ್​ ಬೆದರಿಕೆ ಮೇಲ್​ ಬಂದಿತ್ತು. ಅಲ್ಲದೆ ದೇಶದ ಇತರ ಕೆಲವು ಖಾಸಗಿ ವಿಮಾನ ನಿಲ್ದಾಣಗಳಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ದೆಹಲಿ ಮತ್ತು ಎನ್‌ಸಿಆರ್‌ನ ಶಾಲೆಗಳಿಗೆ ಮೇ 1 ರಂದು ಇದೇ ರೀತಿಯ ಬೆದರಿಕೆಗಳು ಬಂದಿದ್ದರೇ, ಅಹಮದಾಬಾದ್‌ನ ಶಾಲೆಗಳಿಗೆ ಸೋಮವಾರ (ಮೇ 6) ಬೆದರಿಕೆ ಸಂದೇಶ ಬಂದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:24 pm, Wed, 29 May 24