AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್​ಪೆಕ್ಟರ್​, ಎಸಿಪಿಗೆ ಪೊಲೀಸ್​ ಪೇದೆಯಿಂದ ಕೊಲೆ ಬೆದರಿಕೆ!

ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸುವಂತೆ ಶಿಫಾರಸು ಮಾಡಿದ್ದಕ್ಕೆ ಪೊಲೀಸ್​ ಪೇದೆ ರೇಣುಕಾ ನಾಯಕ್​ ಬಾಣಸವಾಡಿ ಉಪ ವಿಭಾಗದ ಎಸಿಪಿ ಹಾಗೂ ಇನ್ಸ್​ಪೆಕ್ಟರ್​ ಅವರಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಇನ್ಸ್​ಪೆಕ್ಟರ್​, ಎಸಿಪಿಗೆ ಪೊಲೀಸ್​ ಪೇದೆಯಿಂದ ಕೊಲೆ ಬೆದರಿಕೆ!
ಸಾಂದರ್ಭಿಕ ಚಿತ್ರ
Follow us
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ

Updated on:May 22, 2024 | 9:56 AM

ಬೆಂಗಳೂರು, ಮೇ 17: ಅಮಾನತು ಶಿಕ್ಷಿಗೆ ಶಿಫಾರಸು ಮಾಡಿದರು ಅಂತ ಬಾಣಸವಾಡಿ ಠಾಣೆಯ ಇನ್ಸ್​ಪೆಕ್ಟರ್ (Inspector) ಮತ್ತು ಎಸಿಪಿ (ACP) ಅವರಿಗೆ ಪೊಲೀಸ್​ ಪೇದೆ (Constable) ಚಾಕುವಿನಿಂದ ಇರಿದು ಕೊಲೆ‌ ಮಾಡೋದಾಗಿ ಜೀವ ಬೆದರಿಕೆ ಹಾಕಿದ್ದಾರೆ. ರೇಣುಕಾ ನಾಯಕ್ ಜೀವ ಬೆದರಿಕೆ ಹಾಕಿದ ಪೊಲೀಸ್​ ಪೇದೆ.

ಕೆಲ ದಿನಗಳ ಹಿಂದೆ ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರೌಡಿಶೀಟರ್ ಕಾರ್ತಿಕೇಯನ್ ಹತ್ಯೆಯಾಗಿತ್ತು. ಈ ಕೃತ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಆರೋಪದ ಮೇಲೆ ಪೊಲೀಸ್​ ಪೇದೆಗಳಾದ ಸಂತೋಷ್, ಪುಟ್ಟಸ್ವಾಮಿ, ವಿನೋದ್​ ಅವರನ್ನು ಪೂರ್ವವಿಭಾಗದ ಡಿಸಿಪಿ ಕುಲದೀಪ್​ ಕುಮಾರ್ ಆರ್​. ಜೈನ್​ ಅಮಾನತುಗೊಳಿಸಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಬೇಕಿದೆ ಮತ್ತಷ್ಟು ಪೊಲೀಸ್ ಠಾಣೆ, ಸಿಬ್ಬಂದಿ

ಪೊಲೀಸ್​ ಪೇದೆ ರೇಣುಕಾ ನಾಯಕ್ ಅವರನ್ನೂ ಅಮಾನತು ಮಾಡುವಂತೆ ಶಿಫಾರಸು ಮಾಡಲಾಗಿತ್ತು. ತನ್ನ ಹೆಸರನ್ನು ಅಮಾನತು ಶಿಕ್ಷೆಗೆ ಶಿಫಾರಸು ಮಾಡಿದ ಕಾರಣಕ್ಕೆ ಬಾಣಸವಾಡಿ ಉಪ ವಿಭಾಗದ ಎಸಿಪಿ ಹಾಗೂ ಇನ್ಸ್​ಪೆಕ್ಟರ್​ ಅವರಿಗೆ ಪೇದೆ ರೇಣುಕಾ ನಾಯಕ್​ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಆತಂಕಗೊಂಡ ಎಸಿಪಿ ಅವರು, ಕೊನೆ ಕ್ಷಣದಲ್ಲಿ ತಮ್ಮ ಶಿಫಾರಸು ಹಿಂಪಡೆದು. ಒಂದು ತಿಂಗಳು ರಜೆ ಕೊಟ್ಟು ಕಳಿಸಿದ್ದಾರೆ.

ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್​ ಆಯುಕ್ತ ಬಿ. ​ದಯಾನಂದ್ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:15 am, Wed, 22 May 24

ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
‘ಸರಿಗಮಪ’ ವೇದಿಕೆ ಮೇಲೆ ಫಿನಾಲೆಗೂ ಮೊದಲು ವಿಶೇಷ ಕಾರ್ಯಕ್ರಮ
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಸೋನಿಯ ಗಾಂಧಿಗೆ ಹರಿಪ್ರಸಾದ್ ಆಪ್ತರು ಎಂಬ ಕಾರಣಕ್ಕೆ ಭೇಟಿಯೇ?
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಭಾರತ ಏನು ಮಾಡಬಹುದು ಎಂದು ಪಾಕಿಸ್ತಾನಕ್ಕೆ ಈಗ ಅರ್ಥವಾಗಿರಬಹುದು
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ
ಒಂದೇ ವಾರದಲ್ಲಿ ಹೃದಯಾಘಾತದಿಂದ ಮೂವರ ಸಾವು; ತಜ್ಞರು ಹೇಳಿದ್ದೇನು ನೋಡಿ