ಬೆಂಗಳೂರು, ಮೇ 17: ಅಮಾನತು ಶಿಕ್ಷಿಗೆ ಶಿಫಾರಸು ಮಾಡಿದರು ಅಂತ ಬಾಣಸವಾಡಿ ಠಾಣೆಯ ಇನ್ಸ್ಪೆಕ್ಟರ್ (Inspector) ಮತ್ತು ಎಸಿಪಿ (ACP) ಅವರಿಗೆ ಪೊಲೀಸ್ ಪೇದೆ (Constable) ಚಾಕುವಿನಿಂದ ಇರಿದು ಕೊಲೆ ಮಾಡೋದಾಗಿ ಜೀವ ಬೆದರಿಕೆ ಹಾಕಿದ್ದಾರೆ. ರೇಣುಕಾ ನಾಯಕ್ ಜೀವ ಬೆದರಿಕೆ ಹಾಕಿದ ಪೊಲೀಸ್ ಪೇದೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರೌಡಿಶೀಟರ್ ಕಾರ್ತಿಕೇಯನ್ ಹತ್ಯೆಯಾಗಿತ್ತು. ಈ ಕೃತ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಆರೋಪದ ಮೇಲೆ ಪೊಲೀಸ್ ಪೇದೆಗಳಾದ ಸಂತೋಷ್, ಪುಟ್ಟಸ್ವಾಮಿ, ವಿನೋದ್ ಅವರನ್ನು ಪೂರ್ವವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಆರ್. ಜೈನ್ ಅಮಾನತುಗೊಳಿಸಿದ್ದರು.
ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಬೇಕಿದೆ ಮತ್ತಷ್ಟು ಪೊಲೀಸ್ ಠಾಣೆ, ಸಿಬ್ಬಂದಿ
ಪೊಲೀಸ್ ಪೇದೆ ರೇಣುಕಾ ನಾಯಕ್ ಅವರನ್ನೂ ಅಮಾನತು ಮಾಡುವಂತೆ ಶಿಫಾರಸು ಮಾಡಲಾಗಿತ್ತು.
ತನ್ನ ಹೆಸರನ್ನು ಅಮಾನತು ಶಿಕ್ಷೆಗೆ ಶಿಫಾರಸು ಮಾಡಿದ ಕಾರಣಕ್ಕೆ ಬಾಣಸವಾಡಿ ಉಪ ವಿಭಾಗದ ಎಸಿಪಿ ಹಾಗೂ ಇನ್ಸ್ಪೆಕ್ಟರ್ ಅವರಿಗೆ ಪೇದೆ ರೇಣುಕಾ ನಾಯಕ್ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಆತಂಕಗೊಂಡ ಎಸಿಪಿ ಅವರು, ಕೊನೆ ಕ್ಷಣದಲ್ಲಿ ತಮ್ಮ ಶಿಫಾರಸು ಹಿಂಪಡೆದು. ಒಂದು ತಿಂಗಳು ರಜೆ ಕೊಟ್ಟು ಕಳಿಸಿದ್ದಾರೆ.
ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:15 am, Wed, 22 May 24