AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid Across Bengaluru: ಬೆಂಗಳೂರಿನ ಹತ್ತಕ್ಕೂ ಹೆಚ್ಚು ಕಡೆ ಐಟಿ ದಾಳಿ

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳಿರುವಾಗ ಬೆಂಗಳೂರಿನಲ್ಲಿ ಮತ್ತೊಂದು ಐಟಿ ದಾಳಿ ನಡೆದಿದೆ. ನಗರದ ಹತ್ತಕ್ಕೂ ಹೆಚ್ಚು ಕಡೆ ಪ್ರಮುಖ ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ಚುನಾವಣೆ ಅಕ್ರಮದ ಅನುಮಾನದ ಮೇಲೆ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

IT Raid Across Bengaluru: ಬೆಂಗಳೂರಿನ ಹತ್ತಕ್ಕೂ ಹೆಚ್ಚು ಕಡೆ ಐಟಿ ದಾಳಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 19, 2024 | 9:42 AM

Share

ಬೆಂಗಳೂರು, ಏಪ್ರಿಲ್ 19: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ (Lok Sabha Elections) ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳಿರುವಾಗ ಬೆಂಗಳೂರಿನಲ್ಲಿ (Bengaluru) ಐಟಿ ದಾಳಿ (IT Raid) ನಡೆದಿದೆ. ನಗರದ ಹತ್ತಕ್ಕೂ ಹೆಚ್ಚು ಕಡೆ ಶುಕ್ರವಾರ ಬೆಳಗ್ಗೆ ಐಟಿ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಚುನಾವಣೆಗೆ ಹಣ ಸಾಗಾಟ ಆರೋಪ ಹಿನ್ನೆಲೆಯಲ್ಲಿ ದಾಳಿ ಮಾಡಿರುವ ಸಾಧ್ಯತೆ ಇದೆ.

ಕಾಂಗ್ರೆಸ್ ಪಕ್ಷದ ಜತೆ ಗರುತಿಸಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳು ನೆಲಮಂಗಲದಲ್ಲಿ ಕೆಲವು ದಿನಗಳ ಹಿಂದೆ ದಾಳಿ ಮಾಡಿದ್ದರು. 6 ಕಾರುಗಳಲ್ಲಿ ಬಂದ 20 ಐಟಿ ಅಧಿಕಾರಿಗಳ ತಂಡ ಶೋಧ ಕಾರ್ಯ ನಡೆಸಿತ್ತು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಆಪ್ತ ಕನಕಪುರ ಕೆಂಪರಾಜು ಮನೆ ಮೇಲೆ ಕೂಡ ಕೆಲವು ದಿನಗಳ ಹಿಂದೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಡಿಕೆ ಸುರೇಶ್ ಅವರ ಮತ್ತೊಬ್ಬ ಆಪ್ತನ ಮನೆ ಮೇಲೆ ಬೆಂಗಳೂರಿನ ವಾಜರಹಳ್ಳಿಯಲ್ಲಿ ಐಟಿ ದಾಳಿ ನಡೆದಿತ್ತು.

ಧಾರವಾಡದ ದಾಸನಕೊಪ್ಪ ಕ್ರಾಸ್‌ ಬಳಿಯ ಅರ್ನಾ ರೆಸಿಡೆನ್ಸಿಯ ಮೂರನೇ ಮಹಡಿಯಲ್ಲಿರುವ ಬಸವರಾಜ್‌ ದತ್ತನವರ್‌ ಎನ್ನುವರ ಪ್ಲಾಟ್‌ ನಂ 303ರ ನಿವಾಸದ ಮೇಲೆ ಮಂಗಳವಾರ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು, ಬರೋಬ್ಬರಿ 18 ಕೋಟಿ ರೂ. ನಗದು ವಶಕ್ಕೆ ಪಡೆದುಕೊಂಡಿದ್ದರು.

(ಮಾಹಿತಿ ಅಪ್​ಡೇಟ್ ಆಗುತ್ತಿದೆ)

ಇದನ್ನೂ ಓದಿ: ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಉದ್ಯಮಿ ಮನೆ ಮೇಲೆ ಐಟಿ ದಾಳಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:24 am, Fri, 19 April 24