AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಿಯಾಗಿ ಸಂಬಳ ಸಿಗದೆ ಬಿಎಂಟಿಸಿ ಎಲೆಕ್ಟ್ರಿಕ್​ ಬಸ್​ ಚಾಲಕರ ಪರದಾಟ, ಡಿಪೋ ಎದುರು ಪ್ರತಿಭಟನೆ

ಬೆಂಗಳೂರಿನ ವಾಯು ಮಾಲಿನ್ಯ ಕಡಿಮೆ ಮಾಡಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 600ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳನ್ನು ರಸ್ತೆಗೆ ಇಳಿಸಿದೆ. ಈ ಬಸ್​ಗಳಿಗೆ ಗುತ್ತಿಗೆ ಆಧಾರದ ಮೇಲೆ ಚಾಲಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ಚಾಲಕರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.

ಸರಿಯಾಗಿ ಸಂಬಳ ಸಿಗದೆ ಬಿಎಂಟಿಸಿ ಎಲೆಕ್ಟ್ರಿಕ್​ ಬಸ್​ ಚಾಲಕರ ಪರದಾಟ, ಡಿಪೋ ಎದುರು ಪ್ರತಿಭಟನೆ
ಬಿಎಂಟಿಸಿ ಎಲೆಕ್ಟ್ರಿಕ್​ ಬಸ್​
Follow us
Kiran Surya
| Updated By: ವಿವೇಕ ಬಿರಾದಾರ

Updated on: May 14, 2024 | 11:57 AM

ಬೆಂಗಳೂರು, ಮೇ 14: ಬೆಂಗಳೂರಿನ ವಾಯು ಮಾಲಿನ್ಯ ಕಡಿಮೆ ಮಾಡುತ್ತೇವೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಎಲೆಕ್ಟ್ರಿಕ್​ ಬಸ್​ಗಳು (E-Bus) ಸರಿಯಾಗಿ ಸೇವೆ ಒದಗಿಸುತ್ತಿಲ್ಲ ಎಂಬ ಆರೋಪ ಕೇಳಿಬಂದ ಬೆನ್ನಲೇ ಇದೀಗ, ಈ ಬಸ್​​ಗಳ ಚಾಲಕರಿಗೆ (Drivers) ಸರಿಯಾಗಿ ವೇತನ ನೀಡುತ್ತಿಲ್ಲ ಅಂತ ಕೂಗು ಕೇಳಿಬರುತ್ತಿದೆ. ಎಲೆಕ್ಟ್ರಿಕ್​ ಬಸ್​ಗಳ ಚಾಲಕರು ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದು, ಇವರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಎಂಬ ಆರೋಪವಿದೆ.​ ಈ ಸಂಬಂಧ ಚಾಲಕರು ಶಾಂತಿನಗರ ಡಿಪೋ 3ರ ಮುಂದೆ ಧರಣಿ ಮಾಡುತ್ತಿದ್ದಾರೆ.

ಕೆಲಸಕ್ಕೆ ಸೇರಿಸಿಕೊಳ್ಳುವಾಗ 26 ರೂ. ನೀಡುತ್ತೇವೆ ಎಂದು ಹೇಳಿದ್ದರು. ಆದರೆ ಈಗ ಕೇವಲ 18 ಸಾವಿರ ರೂ. ಕೊಡುತ್ತಿದ್ದಾರೆ. ಕಡಿತ​ ಮಾಡುತ್ತಿರುವ ಹಣ ಪಿಎಫ್​ ಖಾತೆಗೂ ಜಮೆ ಆಗಿಲ್ಲ. ಟಾಟಾ ಕಂಪನಿಯಲ್ಲಿ ಕೆಲಸ ಎಂದು ನಮಗೆ ಹೇಳಿದ್ದರು, ಆದರೆ ಈಗ ಯಾವುದೋ ಆರ್ಯ ಕಂಪನಿಯಲ್ಲಿ ಕೆಲಸ ನೀಡಿದ್ದಾರೆ. ವಸತಿ ಸೌಲಭ್ಯ ನೀಡುತ್ತೇವೆ ಎಂದು ಹೇಳಿದ್ದರು. ಆದರೆ ಇಲ್ಲಿ ಯಾವುದೇ ರೀತಿಯ ಸೌಲಭ್ಯ ನೀಡಿಲ್ಲ ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದರು.

ಬಿಎಂಟಿಸಿಯಲ್ಲಿ ಒಟ್ಟು 6842 ಬಸ್​​ಗಳಿವೆ. ಅದರಲ್ಲಿ ಸಾಮಾನ್ಯ 5642 ಬಸ್​​ಗಳಿದ್ದರೆ, 600 ಎಸಿ ಬಸ್​​ಗಳಿವೆ. 600 ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳಿವೆ. ಡಿಪೋ-3 ಒಂದರಲ್ಲೇ 113 ಎಲೆಕ್ಟ್ರಿಕ್​ ಬಸ್​ಗಳು ಸಂಚರಿಸುತ್ತೇವೆ. ಇಲ್ಲಿ ಚಾಲಕರು ಮೂರು ಶಿಫ್ಟ್​​​ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: IPL 2024: ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ ಪಂದ್ಯಕ್ಕೆ ಬಿಎಂಟಿಸಿ ಬಸ್ ಸೇವೆ ವಿಸ್ತರಣೆ; ಎಲ್ಲಿಂದ ಎಲ್ಲಿಗೆ?

ಸೇವೆ ಒದಗಿಸುತ್ತಿಲ್ಲ

ಬಿಎಂಟಿಸಿಯ ಚಾಲಕರಿಗೆ ತಿಂಗಳಿಗೆ 35 ರಿಂದ 40 ಸಾವಿರ ರೂಪಾಯಿ ಸಂಬಳ ನೀಡಿದರೆ, ಖಾಸಗಿ ಕಂಪನಿಗಳು ಎಲೆಕ್ಟ್ರಿಕ್ ಬಸ್ ಡ್ರೈವರ್​​​ಗಳಿಗೆ 15 ರಿಂದ 18 ಸಾವಿರ ರೂಪಾಯಿ ಸಂಬಳ ನೀಡುತ್ತಿವೆ. ಅದು ಕೂಡ ಸರಿಯಾಗಿ ನೀಡುತ್ತಿಲ್ಲ. ನೀಡುವ ಸಂಬಳದಲ್ಲೂ ಎರಡರಿಂದ ಮೂರು ಸಾವಿರ ರೂಪಾಯಿಯನ್ನು ಬಿಎಂಟಿಸಿಯ ಅಧಿಕಾರಿಗಳು ಮತ್ತು ಖಾಸಗಿ ಏಜೆನ್ಸಿಗಳು ಪಡೆದಕೊಳ್ಳುವ ಆರೋಪ ಇದೆ.

ಇದರಿಂದ 600 ಎಲೆಕ್ಟ್ರಿಕ್​ ಬಸ್​ಗಳಲ್ಲಿ 300ಕ್ಕೂ ಹೆಚ್ಚು ಬಸ್​​​ಗಳು ಸಮಯಕ್ಕೆ ಸರಿಯಾಗಿ ಸಂಚರಿಸುತ್ತಿಲ್ಲ. ಎಲೆಕ್ಟ್ರಿಕ್ ಬಸ್​​ಗಳು ಸರಿಯಾಗಿ ಸಂಚರಿಸದೇ ಇರುವುದರಿಂದ ಪ್ರಯಾಣಿಕರಿಗೆ ಸಮಸ್ಯೆ ಆಗ್ತಿದೆ. ಇದರಿಂದ ಬೆಂಗಳೂರಲ್ಲಿ ಬಸ್​​​ಗಳ ಸಂಖ್ಯೆ ಕೂಡ ಕಡಿಮೆ ಆಗುತ್ತಿದೆ. ಪ್ರಯಾಣಿಕರು ದುಬಾರಿ ಹಣ ಕೊಟ್ಟು ಕ್ಯಾಬ್, ಆಟೋಗಳಲ್ಲಿ ಪ್ರಯಾಣ ಮಾಡುತ್ತಿದ್ದಾರೆ ಎಂದು ಬಸ್ ಪ್ರಯಾಣಿಕರ ವೇದಿಕೆಯ ಸದಸ್ಯ ವಿನಯ್ ಶ್ರೀ ನಿವಾಸ್ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್