ಬೆಂಗಳೂರಿನಲ್ಲಿ ವೀರ ಸಾವರ್ಕರ್ ನಾಮಫಲಕಕ್ಕೆ ಮಸಿ: ಬಿವೈ ವಿಜಯೇಂದ್ರ ಕಿಡಿ

ಬೆಂಗಳೂರಿನ ಹೊರವಲಯದ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮತ್ತು ಭಾವಚಿತ್ರಕ್ಕೆ ಎನ್ಎಸ್​ಯುಐ ಕಾರ್ಯಕರ್ತರು ಮಸಿ ಬಳಿದಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಖಂಡಿಸಿದ್ದಾರೆ. ರಾಷ್ಟ್ರ ಭಕ್ತರನ್ನು ಅಪಮಾನಿಸುವ ದೇಶ ವಿದ್ರೋಹಿಗಳನ್ನು ರಕ್ಷಿಸುವ ಕಾಂಗ್ರೆಸ್​ ಸಂಸ್ಕೃತಿಗೆ ಈ ಘಟನೆ ಕನ್ನಡಿ ಹಿಡಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ವೀರ ಸಾವರ್ಕರ್ ನಾಮಫಲಕಕ್ಕೆ ಮಸಿ: ಬಿವೈ ವಿಜಯೇಂದ್ರ ಕಿಡಿ
ಬಿವೈ ವಿಜಯೇಂದ್ರ, ವೀರ್​ ಸಾವರ್ಕರ್​ ಹೆಸರಿಗೆ ಮಸಿ
Follow us
ವಿವೇಕ ಬಿರಾದಾರ
|

Updated on: May 29, 2024 | 12:30 PM

ಬೆಂಗಳೂರು, ಮೇ 29: ನಗರದ ಹೊರವಲಯದ ಯಲಹಂಕದ ವೀರ ಸಾವರ್ಕರ್ (Veer Savarkar) ಮೇಲ್ಸೇತುವೆ ನಾಮಫಲಕಕ್ಕೆ ಮತ್ತು ಭಾವಚಿತ್ರಕ್ಕೆ ಎನ್ಎಸ್​ಯುಐ ಕಾರ್ಯಕರ್ತರು ಮಸಿ ಬಳಿದಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಖಂಡಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿದ ಅವರು “ಒಬ್ಬ ರಾಷ್ಟ್ರಭಕ್ತನನ್ನು ಅಪಮಾನಿಸಲು ಮತ್ತೊಬ್ಬ ರಾಷ್ಟ್ರಭಕ್ತನ ಭಾವಚಿತ್ರವನ್ನು ಗುರಾಣಿಯಂತೆ ಬಳಸಿಕೊಂಡು ಯಲಹಂಕದ ವೀರ್ ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಎನ್.ಎಸ್.ಯು.ಐ ಕಿಡಿಗೇಡಿಗಳು ಮಸಿ ಬಳಿದು ಅಪಮಾನ ಮಾಡಿ ವಿಕೃತಿ ಮೆರೆದಿರುವ ಘಟನೆ ಅತ್ಯಂತ ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ರಾಷ್ಟ್ರ ಭಕ್ತರನ್ನು ಅಪಮಾನಿಸುವ ದೇಶ ವಿದ್ರೋಹಿಗಳನ್ನು ರಕ್ಷಿಸುವ ಕಾಂಗ್ರೆಸ್​ ಸಂಸ್ಕೃತಿಗೆ ಈ ಘಟನೆ ಕನ್ನಡಿ ಹಿಡಿದಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಎದ್ದಿರುವ ಜನಾಕ್ರೋಶವನ್ನು ಮರೆಮಾಚಿಕೊಳ್ಳುವ ಉದ್ದೇಶದಿಂದ ಕೆಲ ಕಿಡಿಗೇಡಿ ಯುವಕರನ್ನು ಈ ರೀತಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಲು ಛೂ ಬಿಟ್ಟಿರುವುದು ಈ ನಾಡಿನ ದುರ್ದೈವವಾಗಿದೆ.”

ಇದನ್ನೂ ಓದಿ: ಸಾವರ್ಕರ್​​ ಮೇಲಿನ ಗೌರವಕ್ಕೆ ಈ ರೀತಿ ಬದಲಾದ ನಟ ರಣದೀಪ್​ ಹೂಡಾ

“ಸಾರ್ವಕರ್ ಅವರನ್ನು ಅಪಮಾನಿಸುವ ಸಂದರ್ಭದಲ್ಲಿ ಭಗತ್ ಸಿಂಗ್ ಅವರ ಭಾವಚಿತ್ರ ಪ್ರದರ್ಶಿಸಿರುವ ಕಿಡಿಗೇಡಿಗಳು ಇಬ್ಬರೂ ರಾಷ್ಟ್ರಭಕ್ತರನ್ನು ಏಕಕಾಲದಲ್ಲಿ ಅಪಮಾನಿಸಿದ್ದಾರೆ. ಈ ಕೂಡಲೇ ವೀರ ಸಾವರ್ಕರ್ ಅವರನ್ನು ಅಪಮಾನಿಸಿರುವ ಎಲ್ಲರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ” ಎಂದು ಶಾಸಕ ಬಿವೈ ವಿಜಯೇಂದ್ರ ಆಗ್ರಹಿಸಿದರು.

ಏನಿದು ಘಟನೆ

ನಗರದ ಹೊರವಲಯದ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಮತ್ತು ಭಾವಚಿತ್ರಕ್ಕೆ ಎನ್ಎಸ್​ಯುಐ ಕಾರ್ಯಕರ್ತರು ಮಂಗಳವಾರ ಮಸಿ ಬಳಿದಿದ್ದರು. ಘಟನೆಯಲ್ಲಿ ನಿಶ್ಚಯ್‌ ಗೌಡ, ಲಕ್ಷಗೌಡ, ಪ್ರವೀಣ್ ಎಂಬುವರನ್ನು ಪೊಲೀಸರು ಬಂಧಿಸಿದ್ದರು. ಸಾವರ್ಕರ್ ಮೇಲ್ಸೇತುವೆ ನಾಮ ಫಲಕಕ್ಕೆ ಮಸಿ ಬಳಿದಿರುವ ಎನ್​ಎಸ್‌ಯುಐ ಕಾರ್ಯಕರ್ತರು, ವೀರ್​ ಸಾವರ್ಕ್​​ಗೆ ಸಿಗುತ್ತಿರುವ ಸಿಗುತ್ತಿರುವ ಗೌರವ ಭಗತ್​ ಸಿಂಗ್​ಗೆ ಸಿಗುತ್ತಿಲ್ಲ, ಸಾವರ್ಕರ್ ಸೇತುವೆ ಬದಲು ಭಗತ್ ಸಿಂಗ್ ಹೆಸರಿಡುವಂತೆ ಆಗ್ರಹಿಸಿ ಮಂಗಳವಾರ ಮಧ್ಯಾಹ್ನ ಪ್ರತಿಭಟನೆ ನಡೆಸಿ ಸಾವರ್ಕರ್​ ಹೆಸರಿಗೆ ಮತ್ತು ಭಾವಚಿತ್ರಕ್ಕೆ ಮಸಿ ಬಳಿದಿದ್ದರು. ಬಳಿಕ ಸೇತುವೆಗೆ ಭಗತ್ ಸಿಂಗ್ ಮೇಲ್ಲೇತುವೆ ಹೆಸರಿನ ಬ್ಯಾನರ್ ಹಾಕಿದ್ದರು.

ನಾಮಫಲಕಕ್ಕೆ ಮಸಿ ಬಳಿದಿದ್ದರಿಂದ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಈ ವೇಳೆ ಕಾರಕರ್ತರು ಹಾಗೂ ಜನರ ನಡುವೆ ವಾಗ್ವಾದ ಉಂಟಾಗಿತ್ತು. ಸ್ಥಳೀಯ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್, ಬಿಜೆಪಿ ಕಾರ್ಯಕರ್ತರು ಕೂಡ ಇದರ ವಿರುದ್ದ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತು ಬಿಬಿಎಂಪಿಯ ಅಧಿಕಾರಿಗಳು ಯಲಹಂಕ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಆಕಾಶದಲ್ಲಿ ಸ್ಫೋಟಗೊಂಡ ಸ್ಪೇಸ್​ಎಕ್ಸ್​ ಸ್ಟಾರ್​ಶಿಪ್
ಆಕಾಶದಲ್ಲಿ ಸ್ಫೋಟಗೊಂಡ ಸ್ಪೇಸ್​ಎಕ್ಸ್​ ಸ್ಟಾರ್​ಶಿಪ್
ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲೇ ಮಾತನಾಡಿದ ಚಂದ್ರ
ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲೇ ಮಾತನಾಡಿದ ಚಂದ್ರ
ಈ ಸೀಸನ್​ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳ ಮರು ಎಂಟ್ರಿ; ಜಗದೀಶ್​ ಕಥೆ ಏನು?
ಈ ಸೀಸನ್​ನಲ್ಲಿ ಎಲಿಮಿನೇಟ್ ಆದ ಸ್ಪರ್ಧಿಗಳ ಮರು ಎಂಟ್ರಿ; ಜಗದೀಶ್​ ಕಥೆ ಏನು?
ತಪ್ಪಾದ ಬಸ್ ಹತ್ತಿ ಹೋದ 5 ವರ್ಷದ ಬಾಲಕ, ಮುಂದೇನಾಯ್ತು?
ತಪ್ಪಾದ ಬಸ್ ಹತ್ತಿ ಹೋದ 5 ವರ್ಷದ ಬಾಲಕ, ಮುಂದೇನಾಯ್ತು?
Daily Devotional: ಯಾವ ರಾಶಿಯವರು ಯಾವ ಉದ್ಯೋಗ ಮಾಡಿದರೆ ಉತ್ತಮ?
Daily Devotional: ಯಾವ ರಾಶಿಯವರು ಯಾವ ಉದ್ಯೋಗ ಮಾಡಿದರೆ ಉತ್ತಮ?
ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಬೀದರ್​: ಫೈರಿಂಗ್ ಮಾಡಿ ಎಟಿಎಂ ಹಣದ ಟ್ರಂಕ್ ಹೊತ್ತೊಯ್ದ ವಿಡಿಯೋ ನೋಡಿ
ಬೀದರ್​: ಫೈರಿಂಗ್ ಮಾಡಿ ಎಟಿಎಂ ಹಣದ ಟ್ರಂಕ್ ಹೊತ್ತೊಯ್ದ ವಿಡಿಯೋ ನೋಡಿ
ದರ್ಶನ್ ಭೇಟಿಗೆ ಬಂದರೆ ಒಪ್ಪುತ್ತೀರಾ? ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
ದರ್ಶನ್ ಭೇಟಿಗೆ ಬಂದರೆ ಒಪ್ಪುತ್ತೀರಾ? ರೇಣುಕಾಸ್ವಾಮಿ ತಂದೆ ಪ್ರತಿಕ್ರಿಯೆ
ಮಂಗಳೂರಿನ ಜೊತೆ ನಟ ಗೋಲ್ಡನ್ ಸ್ಟಾರ್​ ಗಣೇಶ್​ಗೆ ಅವಿನಾಭಾವ ಸಂಬಂಧ
ಮಂಗಳೂರಿನ ಜೊತೆ ನಟ ಗೋಲ್ಡನ್ ಸ್ಟಾರ್​ ಗಣೇಶ್​ಗೆ ಅವಿನಾಭಾವ ಸಂಬಂಧ
ಗೃಹ ಸಚಿವ ಸ್ಟ್ಯಾಂಡಿಂಗ್ ಇನ್ಸಸ್ಟ್ರಕ್ಷನ್​ಗಳ ಬಗ್ಗೆ ಮಾತ್ರ ಮಾತಾಡುತ್ತಾರೆ
ಗೃಹ ಸಚಿವ ಸ್ಟ್ಯಾಂಡಿಂಗ್ ಇನ್ಸಸ್ಟ್ರಕ್ಷನ್​ಗಳ ಬಗ್ಗೆ ಮಾತ್ರ ಮಾತಾಡುತ್ತಾರೆ