ಬೆಂಗಳೂರು ವಿಮಾನ ನಿಲ್ದಾಣ: ಅಕ್ರಮವಾಗಿ ಸಾಗಿಸುತ್ತಿದ್ದ 10 ಅನಕೊಂಡ ಹಾವುಗಳು ಜಪ್ತಿ

ಬ್ಯಾಂಕಾಕ್​ನಿಂದ ಅಕ್ರಮವಾಗಿ 10 ಅನಕೊಂಡಾ ಹಾವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣ: ಅಕ್ರಮವಾಗಿ ಸಾಗಿಸುತ್ತಿದ್ದ 10 ಅನಕೊಂಡ ಹಾವುಗಳು ಜಪ್ತಿ
ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಅನಕೊಂಡ ಹಾವುಗಳು
Follow us
TV9 Web
| Updated By: ವಿವೇಕ ಬಿರಾದಾರ

Updated on:Apr 23, 2024 | 9:34 AM

ಬೆಂಗಳೂರು, ಏಪ್ರಿಲ್​ 23: ವಿದೇಶದಿಂದ ಅಕ್ರಮವಾಗಿ 10 ಹಳದಿ ಬಣ್ಣದ ಅನಕೊಂಡ ಹಾವುಗಳನ್ನು (Anaconda Snake) ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಅಧಿಕಾರಿಗಳು ಬಂಧಿಸಿದ್ದಾರೆ. ಬ್ಯಾಂಕಾಕ್​ನಿಂದ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್​ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿವೆ.

ಕೂಡಲೇ ಅಧಿಕಾರಿಗಳು ಪ್ರಯಾಣಿಕನನ್ನ ವಶಕ್ಕೆ ಪಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಹಳದಿ ಬಣ್ಣ ಆನಕೊಂಡ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಶಕ್ಕೆ ನೀಡಿದ್ದಾರೆ. ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಕಸ್ಟಮ್ಸ್​ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಪ್ರಯಾಣಿಸಿದ ಪ್ರಯಾಣಿಕರ ಸಂಖ್ಯೆ ಶೇ. 35ರಷ್ಟು ಏರಿಕೆ

ರನ್ ​ವೇನಲ್ಲಿ ವಿಡಿಯೋ ಚಿತ್ರೀಕರಿಸಿದ್ದ ಯೂಟ್ಯೂಬರ್​ ಬಂಧನ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್​ ವೇನಲ್ಲಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಯೂಟ್ಯೂಬರ್​ನನ್ನು ಪೊಲೀಸರು ​ಬಂಧಿಸಿದ್ದರು.

ವಿಕಾಸ ಗೌಡ ರನ್ ​ವೇನಲ್ಲಿ ವಿಡಿಯೋ ಮಾಡಿ ತನ್ನ ಯೂಟ್ಯೂಬ್​ನಲ್ಲಿ ಅಪ್ಲೋಡ್​ ಮಾಡಿದ್ದನು. ವಿಡಿಯೋದಲ್ಲಿ “ಟಿಕೆಟ್ ಇಲ್ಲದೆ ಒಳಗಡೆ ಬಂದಿದ್ದೇನೆ, 24 ಗಂಟೆ ರನ್ ವೇ ಬಳಿಯೇ ಇದ್ದೆ. ಎಲ್ಲ ಅಧಿಕಾರಿಗಳ, ಸಿಬ್ಬಂದಿ ಕಣ್ಣುತಪ್ಪಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶ ಮಾಡಿ, ವಿಡಿಯೋ ಮಾಡಿದ್ದೇನೆ” ಎಂದು ಹೇಳಿದ್ದನು. ಈ ವಿಡಿಯೋವನ್ನು ನೋಡಿದ ಸಿಐಎಸ್ಎಫ್ ಅಧಿಕಾರಿಗಳು ವಿಕಾಸಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ವಿಕಾಸ್​ಗೌಡನನ್ನು ಬಂಧಿಸಿದ್ದರು.

ಪೊಲೀಸರು ವಿಚಾರಣೆ ನಡೆಸಿದಾಗ ” ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿದ್ದೇನೆ. ಆದರೆ ಪ್ರಯಾಣಿಸದೆ ರನ್ ​ವೇನಲ್ಲೆ ಉಳಿದುಕೊಂಡೆ. ಸುಮಾರು 4-5 ಗಂಟೆಗಳ ಕಾಲ ಅಲ್ಲಿಯೇ ಇದ್ದು, ವಿಡಿಯೋ ಮಾಡಿಕೊಂಡು ಬಂದೆ ಎಂದು ಹೇಳಿದ್ದನು. ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:04 am, Tue, 23 April 24

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ